ಬಜೆಟ್ 2017: ಬಳ್ಳಾರಿ ಜಿಲ್ಲೆಯಲ್ಲಿ ಕುರಿ ಸಂವರ್ಧನಾ ಕೇಂದ್ರ
ಬೆಂಗಳೂರು, ಮಾರ್ಚ್ 15:ರಾಜ್ಯದಲ್ಲಿ ಕುರಿ ಸಾಕಾಣಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬಳ್ಳಾರಿಯ ಕುರಿಕುಪ್ಪೆಯಲ್ಲಿ ಕುರಿ ಸಂವರ್ಧನೆ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು 2017ರ ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.[LIVE: ಮೇಕೆದಾಟು ಯೋಜನೆ ಅನುಷ್ಠಾನ : ಸಿದ್ದರಾಮಯ್ಯ]
2017ರ ಆಯವ್ಯಯ ಮಂಡಿಸುವ ಸಂದರ್ಭದಲ್ಲಿ ಅವರು ಈ ಘೋಷಣೆ ಮಾಡಿದರು. ಈ ಕ್ಯಾಂಟೀನ್ ಗಳಿಂದ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವ ವ್ಯವಸ್ಥೆ ಜಾರಿಯಾಗಲಿದೆ.[ಬಜೆಟ್ 2017: ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಜಾರಿ]
ಇದಲ್ಲದೆ, 21 ಜಿಲ್ಲೆಗಳಿಂದ 49 ಹೊಸ ತಾಲೂಕುಗಳನ್ನು ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.












Click it and Unblock the Notifications