ರಾಜಭವನ ಪ್ರವೇಶಿಸಿದ ಡಿಕೆ ರವಿ ಸಾವಿನ ಪ್ರಕರಣ

ಬೆಂಗಳೂರು, ಮಾ. 19 : ಡಿಕೆ ರವಿ ಅವರ ನಿಗೂಢ ಸಾವಿನ ವಿಚಾರ ರಾಜಭವನ ಪ್ರವೇಶಿಸಿದೆ. ಜೆಡಿಎಸ್ ಮತ್ತು ಬಿಜೆಪಿ ನಾಯಕರು ಒಟ್ಟಾಗಿ ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.

ಗುರುವಾರದ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ ನಂತರ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಪ್ರತಿಪಕ್ಷಗಳ ಶಾಸಕರು ಕಪ್ಪುಪಟ್ಟಿ ಧರಿಸಿ ಕೆಲ ಕಾಲ ಧರಣಿ ನಡೆಸಿದರು. ನಂತರ ಪಾದಯಾತ್ರೆ ಮೂಲಕ ರಾಜಭವನಕ್ಕೆ ಹೊರಟರು. [ಡಿಕೆ ರವಿ ಸಾವು : ಇಂದಿನ ಪ್ರಮುಖ ಬೆಳವಣಿಗೆಗಳು]

Raj Bhavan

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜತೆ ಮುನಿಸಿಕೊಂಡಿದ್ದ ಜೆಡಿಎಸ್ ಶಾಸಕ ಜಮೀರ್ ಅಹಮದ್ ಖಾನ್ ಕೂಡ ಕುಮಾರಸ್ವಾಮಿ ಜೊತೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಸಿ.ಟಿ.ರವಿ, ತಾರಾ ಅನುರಾಧ ಸೇರಿದಂತೆ ಹಲವು ಶಾಸಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. [ಡಿಕೆ ರವಿ ಸಾವು, ಸಿಬಿಐ ತನಿಖೆಗೆ ಏಕೆ ವಹಿಸುತ್ತಿಲ್ಲ]

ಎರಡು ಪಕ್ಷಗಳ ನಾಯಕರು ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದ ನಂತರ ಪ್ರಥಮ ಬಾರಿಗೆ ಜಂಟಿ ಹೋರಾಟದಲ್ಲಿ ಪಾಲ್ಗೊಂಡಿವೆ. ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಸದಸ್ಯರು ಒಟ್ಟಾಗಿ ಪಾದಯಾತ್ರೆಯಲ್ಲಿ ಆಗಮಿಸಿದ್ದರಿಂದ ರಾಜಭವನ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. [ಡಿಕೆ ರವಿ ಪ್ರಕರಣ, ಎಂಎನ್ ರೆಡ್ಡಿ ವಿರುದ್ಧ ದೂರು]

rajbhavan

ರಾಜ್ಯಪಾಲರ ಭರವಸೆ : ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಿಯೋಗದೊಂದಿಗೆ ಮಾತನಾಡಿದ ರಾಜ್ಯಪಾಲ ವಜುಭಾಯಿವಾಲಾ ಡಿಕೆ ರವಿ ಅವರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಭರವಸೆ ನೀಡಿದರು. [ಈ ಸಾವು ನ್ಯಾಯವೇ ಮತ ಹಾಕಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+