ಮುಂದುವರೆದ ಜೆಡಿಎಸ್, ಬಿಜೆಪಿ ಅಹೋರಾತ್ರಿ ಧರಣಿ

ಬೆಂಗಳೂರು, ಮಾ. 19 : ನಿಗೂಢವಾಗಿ ಸಾವನ್ನಪ್ಪಿದ ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದು ಎರಡನೇ ದಿನವಾದ ಬುಧವಾರವೂ ಅಹೋರಾತ್ರಿ ಧರಣಿ ಮುಂದುವರೆಸಿವೆ. ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಧರಣಿ ನಡೆಸುತ್ತಿದ್ದಾರೆ.

ಮಂಗಳವಾರದಿಂದ ಜೆಡಿಎಸ್ ಮತ್ತು ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿವೆ. ಬುಧವಾರದ ಕಲಾಪದಲ್ಲಿ ಈ ಬಗ್ಗೆ ಚರ್ಚೆ ನಡೆಯಿತು, ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಹೋರಾಟ ಮುಂದುವರೆಸಿದವು.[ಈ ಸಾವು ನ್ಯಾಯವೇ ಮತ ಹಾಕಿ]

bjp

ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಮೂರು ಬಾರಿ ಕಲಾಪವನ್ನು ಮುಂದೂಡಿ ಸಂಧಾನ ಸಭೆ ನಡೆಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಧರಣಿ ಮುಂದುವರೆದಿದ್ದರಿಂದ ಉಭಯ ಸದನಗಳಲ್ಲಿ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ. ಕಲಾಪದ ಮುಂದೂಡಿದರು ಪ್ರತಿಪಕ್ಷ ಸದಸ್ಯರು ಸದನದೊಳಗೆ ಮಲಗಿ ಧರಣಿ ಮುಂದುವರೆಸಿದ್ದಾರೆ. [ರವಿ ಸಾವು : ಮರಣೋತ್ತರ ಪರೀಕ್ಷೆ ವರದಿ]

ಬಿಜೆಪಿ-ಜೆಡಿಎಸ್ ಸಭೆ : ಬುಧವಾರ ಸಂಜೆ ಡಿಕೆ ರವಿ ಅವರ ಕುಟುಂಬ ಸದಸ್ಯರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್ ಮತ್ತು ಎಚ್.ಡಿ.ಕುಮಾರಸ್ವಾಮಿ ಸಿಬಿಐ ತನಿಖೆಗೆವಹಿಸುವ ತನಕ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ. [ಚಿತ್ರಗಳು : ಬಿಜೆಪಿ, ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ]

mla

ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸುಮಾರು 40 ಶಾಸಕರು ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಇಂದು ಮಧ್ಯಾಹ್ನ ಬಿಜೆಪಿ ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+