Get Updates
Get notified of breaking news, exclusive insights, and must-see stories!

ಡಿಕೆ ರವಿ ಪ್ರಕರಣ : ಶುಕ್ರವಾರದ ಪ್ರಮುಖ ಬೆಳವಣಿಗೆಗಳು

ಬೆಂಗಳೂರು, ಮಾ. 20 : ಡಿಕೆ ರವಿ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಒತ್ತಾಯದ ನಡುವೆಯೇ ಸಿಐಡಿ ಪ್ರಕರಣದ ತನಿಖೆಯನ್ನು ಬಿರುಸಿನಿಂದ ಮುಂದುವರೆಸಿದೆ. ಶುಕ್ರವಾರ ಸಿಬಿಐ ತನಿಖೆಗೆ ಆಗ್ರಹಿಸಿ ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದೆ.

ಗುರುವಾರ ರಾತ್ರಿ ಸಿಐಡಿ ಅಧಿಕಾರಿಗಳು ಕೋರಮಂಗಲದ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದರು. ಮತ್ತೊಂದು ತಂಡ ಕೋಲಾರದ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ. ಶುಕ್ರವಾರವೂ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿಚಾರಣೆ ಮುಂದುವರೆಯಲಿದೆ. [ಸಿಐಡಿ ಮತ್ತು ಸಿಬಿಐ ನಡುವಿನ ವ್ಯತ್ಯಾಸವೇನು?]

dk ravi protest

ರವಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬೆಂಗಳೂರಿನ ಟೌನ್‌ಹಾಲ್ ಬಳಿ ಗುರುವಾರ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರದೊಳಗೆ ಸಿಬಿಐ ತನಿಖೆಗೆ ವಹಿಸದಿದ್ದರೆ ಹೋರಾಟ ಮುಂದುವರೆಸುತ್ತೇವೆ ಎಂದು ಪ್ರತಿಪಕ್ಷ ಬಿಜೆಪಿ ಹೇಳಿದೆ. [ಈ ಸಾವು ನ್ಯಾಯವೇ ಮತ ಹಾಕಿ]

ಸಮಯ 6 ಗಂಟೆ : ಐಎಎಸ್ ಅಧಿಕಾರಿಗಳ ಸಂಘ ಡಿಕೆ ರವಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವ ಸ್ವತಂತ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಒತ್ತಾಯಿಸಿದೆ.

ಸಮಯ 5 ಗಂಟೆ : ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕಲಬುರಗಿಯ ಖಜೂರಿ ಗ್ರಾಮದಲ್ಲಿನ ಪಿಎಸ್‍ಐ ಮಲ್ಲಿಕಾರ್ಜುನ ಬಂಡೆ ಸಮಾಧಿಯಿಂದ, ತುಮಕುರಿನ ದೊಡ್ಡಕೊಪ್ಪಲ್ಲಿನ ಡಿ.ಕೆ.ರವಿ ಸಮಾಧಿವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಸಮಯ 4 ಗಂಟೆ : ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ವಿದ್ಯಾರ್ಥಿಯೊಬ್ಬ ಪಾದಯಾತ್ರೆ ಪ್ರಾರಂಭಿಸಿದ್ದಾನೆ. ತುಮಕೂರಿನ ಎಸ್‍ಎಸ್‍ಐಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ದರ್ಶನ್, ಏಕಾಂಗಿಯಾಗಿ ತುಮಕೂರಿನ ಟೌನ್‍ಹಾಲ್ ವೃತ್ತದಿಂದ ಪಾದಯಾತ್ರೆ ಆರಂಭಿಸಿದ್ದಾನೆ.

ಸಮಯ 3 ಗಂಟೆ : ರಾಜ್ಯ ಒಕ್ಕಲಿಗರ ಸಂಘದಿಂದ ಐಎಎಸ್ ಅಧಿಕಾರಿ ಡಿಕೆ ರವಿ ಕುಟುಂಬಕ್ಕೆ 10 ಲಕ್ಷ ರೂ. ಸಹಾಯಧನ ಹಾಗೂ ಅವರ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಡಿ.ಕೆ.ರವಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡಾ.ಅಪ್ಪಾಜಿಗೌಡ ಘೋಷಣೆ ಮಾಡಿದ್ದಾರೆ.

ಸಮಯ 2 ಗಂಟೆ : ಐಎಎಸ್ ಅಧಿಕಾರಿ ಡಿಕೆ ರವಿ ಅವರ ಸಾವಿನ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕುರಿತು ನಿರ್ದೇಶನ ನೀಡಿದ್ದಾರೆ. ಸೋಮವಾರದ ವಿಧಾನಸಭೆ ಕಲಾಪದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. [ಡಿಕೆ ರವಿ ನಿಗೂಢ ಸಾವು : ಸೋಮವಾರ ಪ್ರಾಥಮಿಕ ವರದಿ]

ಸಮಯ 1.28 : ಡಿಕೆ ರವಿ ಅವರ ಸಹೋದರ ರಮೇಶ್ ಅವರಿಗೆ ಅಪರಿಚಿತರು ಕರೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಪ್ರತಿಭಟನೆ, ದೂರು ಎಂದು ಹೋದರೆ ನಿಮ್ಮ ಕುಟುಂಬವನ್ನು ನಾಶ ಮಾಡುತ್ತೇನೆ ಎಂದು ಶುಕ್ರವಾರ ಬೆಳಗ್ಗೆ ಕರೆ ಮಾಡಿದ್ದಾರೆ. ರಮೇಶ್ ಅವರು ಕರೆ ಬಂದ ತಕ್ಷಣ ಮಕ್ಕಳು ಓದುತ್ತಿರುವ ಹುಲಿಯೂರು ದುರ್ಗದ ಜ್ಞಾನ ಭಾರತಿ ಶಾಲೆಗೆ ಕರೆ ಮಾಡಿ ಮಕ್ಕಳನ್ನು ಅಪರಿಚಿತರೊಂದಿಗೆ ಕಳಿಸಬೇಡಿ ಎಂದು ಮನವಿ ಮಾಡಿದ್ದಾರೆ.

ಸಮಯ 1.10 : ಡಿಕೆ ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಇತ್ತ ಅವರ ಸಹೋದರ ಇಂಧನ ಸಚಿವ ಡಿಕೆ ಶಿವಕುಮಾರ್ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ.

dk suresh

ಸಮಯ 12.40 : ಸಿದ್ದರಾಮಯ್ಯ ಮತ್ತು ರಾಜ್ಯಪಾಲರ ಭೇಟಿ ಮುಕ್ತಾಯವಾಗಿದೆ. ರಾಜ್ಯಪಾಲರಿಗೆ ಡಿಕೆ ರವಿ ಅವರ ಪ್ರಕರಣದ ಬಗ್ಗೆ ಪೂರ್ಣ ಮಾಹಿತಿ ನೀಡಿದ್ದೇನೆ. ಸಿಐಡಿ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಭೇಟಿಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಮಯ 12 ಗಂಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ಭೇಟಿ ನೀಡಿದ್ದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದಾರೆ. ಗುರುವಾರ ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ರವಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸರ್ಕಾರಕ್ಕೆ ಸೂಚನೆ ನೀಡುವಂತೆ ಮನವಿ ಮಾಡಿದ್ದರು.

vajubahaivala

ಸಮಯ 11 ಗಂಟೆ : ಐಎಎಸ್ ಅಧಿಕಾರಿ ಡಿಕೆ ರವಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒಕ್ಕಲಿಗೆ ಸಂಘ ಬೃಹತ್ ಪಾದಯಾತ್ರೆ ಆರಂಭಿಸಿದೆ. ಕಿಮ್ಸ್ ಆವರಣದಲ್ಲಿನ ಕಚೇರಿಯಿಂದ ಫ್ರೀಡಂಪಾರ್ಕ್‌ ವರೆಗೆ ಪಾದಯಾತ್ರೆ ನಡೆಯಲಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಸಮಯ 10.45 : ರವಿ ಅವರ ಸೋದರತ್ತೆ ಸಾವು : ಡಿ.ಕೆ. ರವಿ ಸಾವಿನಿಂದ ನಂತರ ಅಘಾತಕ್ಕೊಳಗಾಗಿ ಊಟ ಬಿಟ್ಟಿದ್ದ ಅವರ ಸೋದರತ್ತೆ ಪದ್ಮಮ್ಮ (56) ಶುಕ್ರವಾರ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನದಿಂದ ಅಸ್ವಸ್ಥರಾಗಿದ್ದ ಪದ್ಮಮ್ಮ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

aap protest

ಸಮಯ 10.15 : ಡಿಕೆ ರವಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಶಿರಾ ನಿವಾಸಿ ಶಶಿ ಕುಮಾರ್ ತುಮಕೂರಿನ ಟೌನ್‌ಹಾಲ್‌ನಿಂದ ಬೆಂಗಳೂರಿನ ತನಕ ಪಾದಯಾತ್ರೆ ಕೈಗೊಂಡಿದ್ದಾರೆ.

ಸಮಯ 10 ಗಂಟೆ : ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಮಂಡ್ಯ ಬಂದ್‌ಗೆ ಕರೆ ನೀಡಿವೆ.

ಸಮಯ 9 ಗಂಟೆ : ಡಿಕೆ ರವಿ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ರವಿ ಅವರ ಮಾವ ಹನುಮಂತರಾಯಪ್ಪ ಮತ್ತು ಪತ್ನಿ ಕುಸುಮಾ ಅವರ ಹೇಳಿಕೆಯನ್ನು ಇಂದು ಸಿಐಡಿ ಅಧಿಕಾರಿಗಳು ಪಡೆಯಲಿದ್ದಾರೆ. ಬುಧವಾರ ಸಂಜೆ ಒಂದು ಬಾರಿ ಇಬ್ಬರ ಹೇಳಿಕೆಗಳನ್ನು ಅಧಿಕಾರಿಗಳು ಪಡೆದಿದ್ದಾರೆ.

dk ravi kolar

ಮತ್ತೊಂದು ತಂಡ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ. ರವಿ ಅವರು ಇತ್ತೀಚೆಗೆ ನಡೆಸಿದ ದಾಳಿಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಣೆ ಮಾಡಲಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಲಿದ್ದಾರೆ. [ಡಿಕೆ ರವಿ ಪ್ರಕರಣ, ಗುರುವಾರದ ಪ್ರಮುಖ ಸುದ್ದಿಗಳು]

ಸಮಯ 8 ಗಂಟೆ : ಮಗನ ಸಾವಿನಿಂದ ಅಘಾತಗೊಂಡಿರುವ ಡಿಕೆ ರವಿ ಅವರ ತಾಯಿ ಗೌರಮ್ಮ ಮೂರು ದಿನಗಳಿಂದ ಊಟ ಮಾಡಿಲ್ಲ. ಹಿರಿಯ ಪುತ್ರ ರಮೇಶ್ ಅವರು ಮನವೊಲಿಕೆ ಮಾಡುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರೆದರೆ ಆಸ್ಪತ್ರೆಗೆ ದಾಖಲು ಮಾಡುತ್ತೇನೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ. ದೊಡ್ಡಕೊಪ್ಪಲಿನಲ್ಲಿರುವ ನಿವಾಸದಲ್ಲಿ ಗೌರಮ್ಮ ಇದ್ದಾರೆ.

D K Ravi

ಸಮಯ 7 ಗಂಟೆ : ಡಿಕೆ ರವಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದು ಬೆಂಗಳೂರಿನ ಶಂಕರ ಮಠದಿಂದ ನವರಂಗ್ ಸರ್ಕಲ್ ತನಕ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+