ಡಿಕೆ ರವಿ ಸಾವು : ಗುರುವಾರದ ಪ್ರಮುಖ ಬೆಳವಣಿಗೆಗಳು
ಬೆಂಗಳೂರು, ಮಾ. 19 : ಐಎಎಸ್ ಅಧಿಕಾರಿ ಡಿಕೆ ರವಿ ಅವರ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯದ ವಿವಿಧ ಸಂಘಟನೆಗಳು, ಪ್ರತಿಪಪಕ್ಷಗಳು, ಡಿಕೆ ರವಿ ಅವರ ಕುಟುಂಬದವರು ಒತ್ತಾಯಿಸುತ್ತಿದ್ದಾರೆ. ಆದರೆ, ಸರ್ಕಾರ ಸಿಐಡಿ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಹೇಳುತ್ತಲಿದೆ. [ಈ ಸಾವು ನ್ಯಾಯವೇ ಮತ ಹಾಕಿ]
ಡಿ.ಕೆ.ರವಿ ನಿಗೂಢ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ 2ನೇ ದಿನವಾದ ಬುಧವಾರವೂ ಪ್ರತಿಪಕ್ಷಗಳು ಅಹೋರಾತ್ರಿ ಧರಣಿ ಮುಂದುವರಿಸಿದವು. ಇಂದು ರಾಜ್ಯಪಾಲರನ್ನು ಭೇಟಿ ಮಾಡಲು ಬಿಜೆಪಿ ನಿರ್ಧರಿಸಿದೆ. ಇಂದಿನ ಪ್ರಮುಖ ಘಟನಾವಳಿಗಳು ಇಲ್ಲಿವೆ [ಡಿಕೆ ರವಿ ಕುಟುಂಬದಿಂದ ಆತ್ಮಹತ್ಯೆ ಬೆದರಿಕೆ]
ಸಮಯ 5 ಗಂಟೆ : ಪ್ರಣಬ್ ಮೊಹಂತಿ ಅವರನ್ನು ಲೋಕಾಯುಕ್ತ ಐಜಿಪಿಯನ್ನಾಗಿ ವರ್ಗಾವಣೆ ಮಾಡಿದ ಆದೇಶವನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ. ಸಿಐಡಿಯಲ್ಲಿಯೇ ಅವರು ಮುಂದುವರೆಯಲಿದ್ದಾರೆ.
ಸಮಯ 4.20 : ಡಿಕೆ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ. [ಸಿಬಿಐ ತನಿಖೆ ಇಲ್ಲ]
ಸಮಯ 3.55 : ಡಿಕೆ ರವಿ ಪ್ರಕರಣವನ್ನು ಸಿಬಿಐಗೆ ವಹಿಸುವ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಡಲಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಸಮಯ 3.10 : ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ರಾಜ್ಯ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಡಾ. ಅಪ್ಪಾಜಿಗೌಡ ಅವರು ಈ ಕುರಿತು ಹೇಳಿಕೆ ನೀಡಿದ್ದು, ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು. ಶುಕ್ರವಾರ ಒಕ್ಕಲಿಗರ ಸಂಘ ಮೌನ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ ಎಂದರು.

ಸಮಯ 2.30 : ಡಿಕೆ ರವಿ ಅವರ ಪರವಾಗಿ ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ. ಡಿಕೆ ರವಿ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸುತ್ತಿರುವ ಪ್ರತಿಭಟನಾನಿರತರು, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿ.
ಸಮಯ 2 ಗಂಟೆ : ಡಿಕೆ ರವಿ ಅವರ ಸಾವು ಆತ್ಮಹತ್ಯೆ ಎಂದು ಹೇಳಿದ ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ವಿರುದ್ಧ ದೂರು ದಾಖಲು.
ಸಮಯ 1.27 : ಡಿಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿ ಮಾಗಡಿ ಬಂದ್ ನಡೆಸಲಾಗುತ್ತಿದೆ. ಸ್ವಯಂ ಪ್ರೇರಿತರಾಗಿ ವ್ಯಾಪಾರಿಗಳು ಬಂದ್‌ಗೆ ಬೆಂಬಲ ನೀಡಿದ್ದು ಅಂಗಡಿ ಮುಂಗಟ್ಟುಗಳು ಮುಚ್ಚಿವೆ.
ಸಮಯ 1 ಗಂಟೆ : ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ಮತ್ತು ಪರಿಷತ್ ಸದಸ್ಯರೊಂದಿಗೆ ರಾಜಭವನಕ್ಕೆ ಪಾದಯಾತ್ರೆ ಮೂಲಕ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಡಿಕೆ ರವಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
Please, have some faith on the govt..we are not so inhuman or cruel to protect the killers of one of our finest officers..Truth will prevail
— Dinesh Gundu Rao (@dineshgrao) March 18, 2015 ಸಮಯ 12.30 : ಡಿಕೆ ರವಿ ಅವರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆ, ಬೇಡವೇ? ಎಂಬುದನ್ನು ಚರ್ಚಿಸಲು ಸಚಿವ ಸಂಪುಟ ಸಭೆ ನಡೆಯುತ್ತಿದೆ. ಗೃಹ ಸಚಿವ ಜಾರ್ಜ್ ಸಿಬಿಐ ತನಿಖೆಗೆ ವಿರೋಧ ವ್ಯಕ್ತಪಡಿಸಿದ್ದರೆ, ಕೆಲವು ಸಚಿವರು ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. [ಸಿಬಿಐ ತನಿಖೆ ಬಗ್ಗೆ ಎರಡು ಬಣ]
ಸಮಯ 12 ಗಂಟೆ : ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿರುವ ಹಿನ್ನಲೆಯಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಧರಣಿ ಮುಂದುವರೆಸಿದ್ದಾರೆ. ಡಿಕೆ ರವಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಸಮಯ 11.24 : ಐಎಎಸ್ ಅಧಿಕಾರಿ ಡಿಕೆ ರವಿ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ ಮುಂದುವರೆಸಿದ್ದಾರೆ. ಇದರಿಂದಾಗಿ ಕಲಾಪವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಸೋಮವಾರಕ್ಕೆ ಮುಂದೂಡಿದ್ದಾರೆ.

ಸಮಯ 11 ಗಂಟೆ : ಡಿಕೆ ರವಿ ಅವರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಕೂಗೂ ಆಸ್ಟ್ರೇಲಿಯಾದಲ್ಲಿಯೂ ಕೇಳಿಬರುತ್ತಿದೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಬಾಂಗ್ಲಾದೇಶ-ಭಾರತ ಪಂದ್ಯದ ವೇಳೆ ಡಿಕೆ ರವಿ ಚಿತ್ರವಿರುವ ಚಿತ್ರಗಳನ್ನು ಅಭಿಮಾನಿಗಳು ಪ್ರದರ್ಶಿಸಿದ್ದಾರೆ. [ಪಂದ್ಯದ ಮಾಹಿತಿ ಇಲ್ಲಿದೆ]

ಸಮಯ 10.20 : ಡಿಕೆ ರವಿ ಅವರ ಪತ್ನಿ ಕುಸುಮಾ ಮತ್ತು ಮಾವ ಹನುಮಂತರಾಯಪ್ಪ ಅವರು ಮೂರನೇ ದಿನದ ಕಾರ್ಯಗಳಿಗಾಗಿ ರವಿ ಅವರ ಸಮಾಧಿ ಇರುವ ದೊಡ್ಡಕೊಪ್ಪಲಿಗೆ ತೆರಳಿದ್ದಾರೆ. ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿರಿಗೌರಿ ಹಾಗೂ ಕುಮಾರಸ್ವಾಮಿ ಅವರು ಇಬ್ಬರನ್ನು ವಿಚಾರಣೆ ಮಾಡಿದ್ದರು.
ಸಮಯ 10 ಗಂಟೆ : ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಐಎಎಸ್ ಅಧಿಕಾರಿ ಡಿಕೆ ರವಿ ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ.
ಸಮಯ 9.30 : ಡಿಕೆ ರವಿ ಪ್ರಕರಣದ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ್ದಾರೆ. ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆ.

ಸಮಯ 9.21 : ಐಎಎಸ್ ಅಧಿಕಾರಿ ಡಿಕೆ ರವಿ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಸಂಸತ್ ಭವನದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು ಇದರಲ್ಲಿ ಪಾಲ್ಗೊಂಡಿದ್ದಾರೆ.
ಸಮಯ 9 ಗಂಟೆ : ಡಿಕೆ ರವಿ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿರಿಗೌರಿ ಹಾಗೂ ಕುಮಾರಸ್ವಾಮಿ ಅವರು, ಬುಧವಾರ ರಾತ್ರಿ ಮಾವ ಹನುಮಂತರಾಯಪ್ಪ ಅವರ ಮನೆಗೆ ತೆರಳಿ ರವಿ ಅವರ ಪತ್ನಿ ಕುಸುಮಾ ಹಾಗೂ ಕುಟುಂಬದ ಸದಸ್ಯರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದಿದ್ದಾರೆ.
ಸಮಯ 8 ಗಂಟೆ : ಡಿಕೆ ರವಿ ಅವರ ಚಾರಿತ್ರ್ಯ ವಧೆ ಮಾಡುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಸಿಎಂ ಹುದ್ದೆಗೆ ಇಂತಹ ಹೇಳಿಕೆಗಳು ಘನತೆ ತರುವುದಿಲ್ಲ ಎಂದು ಕುಮಾರಸ್ವಾಮಿ ವಿಧಾನಸೌಧದಲ್ಲಿ ಹೇಳಿದ್ದಾರೆ.
ಸಮಯ 7.22 : ಅಬಕಾರಿ ಇಲಾಖೆ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿದ ಡಿಕೆ ರವಿ ಅವರ ಸ್ನೇಹಿತ ಲಿಂಗೇಗೌಡ ಅವರು ರವಿ ಅವರ ಸಮಾಧಿ ಸ್ಥಳದಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಸಾವಿನ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದಾರೆ. ರವಿ ಅವರ ಸಾವಿಗೆ ನ್ಯಾಯ ಕೊಡಿಸಲು ಆಗದ ಸರ್ಕಾರದ ಕೆಳಗೆ ನಾನು ಕೆಲಸ ಮಾಡುವುದಿಲ್ಲ ಅದಕ್ಕಾಗಿ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಸಮಯ 7 ಗಂಟೆ : ಡಿಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಗುರುವಾರ ತುಮಕೂರು ಬಂದ್‌ಗೆ ಕರೆ ನೀಡಲಾಗಿದೆ. ಆದರೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. [ಡಿಕೆ ರವಿ ಪ್ರಕರಣ: ತನಿಖಾಧಿಕಾರಿ ಅಚ್ಚರಿ ವರ್ಗಾವಣೆ]
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications