DK Shivakumar: ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು, ನವೆಂಬರ್‌ 18: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ನಡೆಯುತ್ತಿರುವ ಕುರಿತು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ‌. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ. 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1,500 ದೊಡ್ದ ಕಂಪೆನಿಗಳು ಭಾಗವಹಿಸುತ್ತಿವೆ. ಇವರುಗಳು ಉದ್ಯೋಗ ನೀಡಬೇಕು, ಸಂಪಾದನೆ ಮಾಡಬೇಕು. ಅದಕ್ಕೆ ನಮ್ಮ ಪ್ರೋತ್ಸಾಹ ಎಂದರು.

DK Shivakumar A New IT City Is Being Considered For Construction In Bidadi

ಪ್ರೋತ್ಸಾಹ ನೀಡಿದರೆ ಇಲ್ಲಿನ ಪ್ರತಿಭೆಗಳು, ಹೊಸ ಆವಿಷ್ಕಾರ, ತಂತ್ರಜ್ಞಾನ, ಸ್ಟಾರ್ಟ್ ಅಪ್ ಗಳು ಕರ್ನಾಟಕವನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಲಿವೆ. ನೀವು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬೇಕು ಎಂದು ನಮ್ಮ ಮುಂದಿನ ಪೀಳಿಗೆಗೆ ನಾನು ಸದಾ ಹೇಳುತ್ತಿರುತ್ತೇನೆ. ಹೊಸ ಆಲೋಚನೆಗಳು ಬಂದರೆ ಸ್ಟಾರ್ಟ್ ಅಪ್ ಮೂಲಕ ಬೆಳೆಯಲು ಸರ್ಕಾರ ಅವಕಾಶ ಕಲ್ಪಿಸಿ ನಿಮ್ಮ ಜೊತೆಗಿದೆ ಎಂದು ಹೇಳುತ್ತಿರುತ್ತೇನೆ. ನಮ್ಮನ್ನು ನಂಬಿ ಬಂದವರಿಗೆ ಉತ್ತಮ ಅವಕಾಶ ನೀಡುವುದು ನಮ್ಮ ಕೆಲಸ. ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ಐಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಕಿಯೋನಿಕ್ಸ್ ಜವಾಬ್ದಾರಿ ಹೊತ್ತಿರುವ ಶರತ್ ಬಚ್ಚೇಗೌಡರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಜೊತೆ ನಾವೆಲ್ಲರೂ ಇದ್ದೇವೆ. ಬೆಂಗಳೂರಿನ ವಾತಾವರಣವೇ ಎಲ್ಲದಕ್ಕೂ ಅನುಕೂಲಕರವಾಗಿದೆ. 25 ಲಕ್ಷ ಐಟಿ ಪರಿಣಿತರು ಇಲ್ಲಿದ್ದಾರೆ. ನಮ್ಮಲ್ಲಿರುವ ಮಾನವ ಸಂಪನ್ಮೂಲಗಳು ಬೇರೆ ಎಲ್ಲೂ ಇಲ್ಲ. ಈ ಸಮ್ಮೇಳನ ಮೂಲಕ ಮೂರು ದಿನಗಳ ಕಾಲ ಭವಿಷ್ಯದ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಎಲ್ಲಾ ಕ್ಷೇತ್ರಗಳಿಗೆ ಅದರದೇ ಆದ ನೀತಿ ರೂಪಿಸಿ, ಪ್ರೋತ್ಸಾಹ ನೀಡುತ್ತಿದೆ. ರಸ್ತೆಗಳ ದುರಸ್ತಿ ಕಾರ್ಯಕ್ಕೆ ಹಲವಾರು ಕಂಪೆನಿಗಳು ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಾವು ನಮ್ಮ ಕೆಲಸ ಮಾಡಿದ್ದೇವೆ. ಟೀಕೆ ಮಾಡಿದರೂ ಸ್ವಾಗತ, ಹೊಗಳಿದರೂ ಸ್ವಾಗತ. ಜನಸೇವೆ ಮಾಡುವುದೇ ಮೊದಲ ಆದ್ಯತೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+