DK Shivakumar Assets: ಡಿಕೆಶಿ ಬಳಿ ಎಷ್ಟು ಕೋಟಿ ಆಸ್ತಿ ಇದೆ: ದೇಶದ ಶ್ರೀಮಂತ ರಾಜಕಾರಣಿ ಸಾಲವೆಷ್ಟು
ಕರ್ನಾಟಕದ ಪ್ರಭಾವಿ ರಾಜಕಾರಣಿ ಆಗಿರುವ ಡಿ.ಕೆ ಶಿವಕುಮಾರ್ ಅವರು ಭಾರತದಲ್ಲೇ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಲ್ಲಿಸಲಾದ ಅಫಿಡವಿಟ್‌ನಲ್ಲಿ ಆಸ್ತಿ ದಾಖಲೆಯ ವಿವರವನ್ನು ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಾರೆ. ಡಿ.ಕೆ ಶಿವಕುಮಾರ್ ಮತ್ತು ಅವರ ಮನೆಯವರು ಒಟ್ಟು ಬರೋಬ್ಬರಿ 1,413.78 ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂದು ವರದಿ ಮಾಡಿದ್ದಾರೆ. ಇದು 2018 ರಲ್ಲಿ ಘೋಷಿಸಲಾಗಿದ್ದ 840.08 ಕೋಟಿ ರೂಪಾಯಿ ಗಿಂತಲೂ ತೀವ್ರ ಏರಿಕೆಯಾಗಿದೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ ಶಿವಕುಮಾರ್ ಅವರು 2023ರ ಚುನಾವಣಾ ಅಫಿಡವಿಟ್‌ನಲ್ಲಿ 1,400 ಕೋಟಿ ರೂಪಾಯಿಗಿಂತ ಹೆಚ್ಚಿನ ಆಸ್ತಿ ಇರುವುದಾಗಿ ಘೋಷಿಸಿದ್ದಾರೆ. ಈ ಅಪಾರ ಸಂಪತ್ತು ಅವರನ್ನು ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರನ್ನಾಗಿ ಮಾಡಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಲ್ಲಿಸಲಾದ ಅಫಿಡವಿಟ್ ವಿವರಗಳ ಪ್ರಕಾರ, ಶಿವಕುಮಾರ್ ಮತ್ತು ಅವರ ಕುಟುಂಬದವರು 1,413.78 ಕೋಟಿ ರೂ. ಮೌಲ್ಯದ ಒಟ್ಟು ಆಸ್ತಿ ಇದೆ ಎಂದು ವರದಿ ಮಾಡಿದ್ದಾರೆ. ಇದು 2018 ರಲ್ಲಿ ಘೋಷಿಸಲಾದ 840.08 ಕೋಟಿಗಿಂತ ತೀವ್ರ ಏರಿಕೆ ಕಂಡಿದೆ. ಕಾಂಗ್ರೆಸ್ ನಾಯಕನ ಕುಟುಂಬವು 273.42 ಕೋಟಿ ಮೌಲ್ಯದ ಚರ ಆಸ್ತಿಗಳನ್ನು ಮತ್ತು ಒಟ್ಟು 1,140.36 ಕೋಟಿ ಸ್ಥಿರ ಆಸ್ತಿಗಳನ್ನು ಹೊಂದಿರುವುದಾಗಿ ಅಫಿಡವಿಟ್‌ನಲ್ಲಿ ತೋರಿಸಲಾಗಿದೆ. ಅವರ ವೈಯಕ್ತಿಕ ಸ್ಥಿರ ಆಸ್ತಿಗಳನ್ನು 972.65 ಕೋಟಿ ರೂ. ಎಂದು ಪಟ್ಟಿ ಮಾಡಲಾಗಿದೆ.

ಡಿ.ಕೆ ಶಿವಕುಮಾರ್ ಹೆಸರಲ್ಲಿ 263 ಕೋಟಿ ಸಾಲ
ಇನ್ನು ಡಿ.ಕೆ ಶಿವಕುಮಾರ್ ಹೆಸರಲ್ಲಿ 263 ಕೋಟಿ ರೂ. ಸಾಲದ ಬಗ್ಗೆಯೂ ಉಲ್ಲೇಖಿಸಲಾಗಿದೆ. ಡಿ.ಕೆ ಶಿವಕುಮಾರ್ ಅವರ ಅಫಿಡವಿಟ್‌ನಲ್ಲಿ ಈ ವಿಷಯವನ್ನು ಉಲ್ಲೇಖ ಮಾಡಲಾಗಿದೆ. ಕನಕಪುರ ಬಂಡೇ ಅಂತಲೇ ಖ್ಯಾತಿ ಗಳಿಸಿರುವ ಡಿಕೆಶಿ ಟೊಯೋಟಾ ಕ್ವಾಲಿಸ್ ಎಂಬ ಒಂದೇ ನೋಂದಾಯಿತ ವಾಹನವನ್ನು ಹೊಂದಿದ್ದು, ಜೊತೆಗೆ ಚಿನ್ನ ಮತ್ತು ಬೆಳ್ಳಿ ಆಸ್ತಿಗಳನ್ನು ಹೊಂದಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ. 2023ರ ಕರ್ನಾಟಕ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಶಿವಕುಮಾರ್ ವಿರುದ್ಧ 19 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಐಟಿ - ಇಡಿ ವಿಚಾರಣೆ
ಕರ್ನಾಟಕದ ಪ್ರಭಾವಿ ರಾಜಕಾರಣಿ ಎಂದೇ ಖ್ಯಾತಿ ಗಳಿಸಿರುವ ಡಿ.ಕೆ ಶಿವಕುಮಾರ್ ಅವರ ಆಸ್ತಿ ಹಾಗೂ ಹಣಕಾಸು ವರ್ಗಾವಣೆಗೆ ಸಂಬಂಧಿಸಿದಂತೆ ಐಡಿ - ಇಡಿ ವಿಚಾರಣೆ ನಡೆದಿತ್ತು. ಡಿ.ಕೆ ಶಿವಕುಮಾರ್ ಅವರ ಸಂಪತ್ತು ಕೇಂದ್ರ ತನಿಖಾ ಸಂಸ್ಥೆಗಳ ಗಮನ ಸೆಳೆದಿತ್ತು. 2013 ಮತ್ತು 2018 ರ ನಡುವೆ ಶಿವಕುಮಾರ್ ಅವರ ಆದಾಯದ ಮೂಲಗಳಿಗಿಂತ ಹೆಚ್ಚಿನ ಆಸ್ತಿಗಳನ್ನು ಗಳಿಸಿದ ಆರೋಪದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆದಿತ್ತು. ಅಲ್ಲದೆ ಡಿ.ಕೆ ಶಿವಕುಮಾರ್ ಅವರು ಜೈಲುವಾಸವನ್ನೂ ಅನುಭವಿಸಿದ್ದರು. ಇದು ಅವರ ರಾಜಕೀಯ ಪ್ರಗತಿಗೆ ಹಿನ್ನಡೆಯನ್ನುಂಟು ಮಾಡಿದ್ದೂ ಇದೆ.













Click it and Unblock the Notifications