ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅ.15ಕ್ಕೆ ಮುಂದೂಡಿಕೆ
Recommended Video
DK Shivakumar's Bail Plea Hearing Today | Oneindia Kannada
ನವದೆಹಲಿ, ಅಕ್ಟೋಬರ್ 14 : ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 15ರ ಮಂಗಳವಾರಕ್ಕೆ ಮುಂದೂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿಕೆಶಿ ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇಡಿ ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಏಕಸದಸ್ಯ ಪೀಠದಲ್ಲಿ ಸೋಮವಾರ ಅರ್ಜಿಯ ವಿಚಾರಣೆಗೆ ಪ್ರಕರಣ ಲಿಸ್ಟ್ ಆಗಿತ್ತು.

ದೆಹಲಿ ಹೈಕೋರ್ಟ್‌ನ ಕೋರ್ಟ್ ಹಾಲ್ ನಂಬರ್ 35ರಲ್ಲಿ ಮೊದಲ ಪ್ರಕರಣ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯಾಗಿತ್ತು. ಅಕ್ಟೋಬರ್ 15ರಂದು ಡಿ.ಕೆ. ಶಿವಕುಮಾರ್ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಲಿದೆ. ನ್ಯಾಯಾಂಗ ಬಂಧನದಲ್ಲಿರುವ ಡಿ. ಕೆ. ಶಿವಕುಮಾರ್ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಮಂಗಳವಾರ ವಾದ ಮಂಡನೆ ಮಾಡಲಿದ್ದಾರೆ.
ಡಿ. ಕೆ. ಶಿವಕುಮಾರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ಬಾರದ ಕಾರಣದಿಂದಾಗಿ ವಿಚಾರಣೆಯನ್ನು ಮುಂದೂಡಲಾಗಿದೆ.
ಅನಾರೋಗ್ಯದ ನಡುವೆಯೇ ವಿಚಾರಣೆಗೆ ಡಿ. ಕೆ. ಶಿವಕುಮಾರ್ ಸ್ಪಂದಿಸಿದ್ದಾರೆ ಎಂದು ವಾದ ಮಂಡಿಸಲಿರುವ ವಕೀಲರು
ಅಕ್ರಮ ಹಣ ವರ್ಗಾವಣೆ ಮೂಲಕ ದೆಹಲಿಗೆ ಹಣ ಸಾಗಣೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಕೆ. ಶಿವಕುಮಾರ್ ಬಂಧಿಸಿ ಇಡಿ ವಿಚಾರಣೆ ನಡೆಸಿತ್ತು.
2017ರ ಆಗಸ್ಟ್ 2ರಂದು ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ದಾಳಿ ನಡೆದಿತ್ತು. ಆಗ ದೆಹಲಿ ಫ್ಲ್ಯಾಟ್‌ನಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಹಣಕ್ಕೆ ಯಾವುದೇ ದಾಖಲೆ ಸಿಕ್ಕಿರಲಿಲ್ಲ. ಈ ಬಗ್ಗೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ನಡೆಸುತ್ತಿದೆ.
ಡಿ. ಕೆ. ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ ಎಂಬುದು ಕರ್ನಾಟಕದ ಪ್ರತಿಪಕ್ಷ ಕಾಂಗ್ರೆಸ್ ಆರೋಪವಾಗಿದೆ. ಬಂಧನ ಖಂಡಿಸಿ ಪಕ್ಷ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿತ್ತು.
ಡಿ. ಕೆ. ಶಿವಕುಮಾರ್‌ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಇಡಿ ವಿಶೇಷ ನ್ಯಾಯಾಲಯ ಒಪ್ಪಿಸಿತ್ತು. ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 15ರಂದು ಅಂತ್ಯವಾಗಲಿದ್ದು, ಅವರನ್ನು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ, ಸಹೋದರ ಡಿ. ಕೆ. ಸುರೇಶ್, ಉದ್ಯಮಿ ಸಚಿನ್ ನಾರಾಯಣ್, ಬೆಳಗಾವಿ ಗ್ರಾಮೀಣ ಭಾಗದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ಕೆ. ಎನ್. ರಾಜಣ್ಣ ವಿಚಾರಣೆಯನ್ನು ಇಡಿ ನಡೆಸಿದೆ.
ಇಡಿ ವಿಶೇಷ ನ್ಯಾಯಾಲಯದಲ್ಲಿಯೂ ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಬಾರದು ಎಂದು ಇಡಿ ಪರ ವಕೀಲರು ಪ್ರಬಲವಾದ ಮಂಡಿಸಿದ್ದರು. ಹೈಕೋರ್ಟ್‌ಗೂ ಅವರು ಇಂದು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ.
ವಿಚಾರಣೆಗೆ ಸಹಕಾರ ನೀಡಿರುವುದು, ಆರೋಗ್ಯದ ಸಮಸ್ಯೆ ಮುಂತಾದ ಅಂಶಗಳನ್ನು ಮುಂದಿಟ್ಟುಕೊಂಡು ಡಿ. ಕೆ. ಶಿವಕುಮಾರ್ ಪರ ವಕೀಲರು ಜಾಮೀನಿಗಾಗಿ ಮನವಿ ಮಾಡಲಿದ್ದಾರೆ.
ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ದಯಾನ್ ಕೃಷ್ಣನ್ ವಾದ ಮಂಡನೆ ಮಾಡಲಿದ್ದಾರೆ.
ಡಿ. ಕೆ. ಶಿವಕುಮಾರ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.












Click it and Unblock the Notifications