ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅ.15ಕ್ಕೆ ಮುಂದೂಡಿಕೆ

|
Google Oneindia Kannada News

Recommended Video

      DK Shivakumar's Bail Plea Hearing Today | Oneindia Kannada

      ನವದೆಹಲಿ, ಅಕ್ಟೋಬರ್ 14 : ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಅಕ್ಟೋಬರ್ 15ರ ಮಂಗಳವಾರಕ್ಕೆ ಮುಂದೂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿಕೆಶಿ ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.

      ಇಡಿ ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಏಕಸದಸ್ಯ ಪೀಠದಲ್ಲಿ ಸೋಮವಾರ ಅರ್ಜಿಯ ವಿಚಾರಣೆಗೆ ಪ್ರಕರಣ ಲಿಸ್ಟ್ ಆಗಿತ್ತು.

      ಎಲ್ಲವನ್ನೂ ಗೆದ್ದು ಬರ್ತೀನಿ, ಎಲ್ಲದಕ್ಕೂ ಉತ್ತರ ಕೊಡ್ತೀನಿ: ಡಿಕೆ ಶಿವಕುಮಾರ್ ಎಲ್ಲವನ್ನೂ ಗೆದ್ದು ಬರ್ತೀನಿ, ಎಲ್ಲದಕ್ಕೂ ಉತ್ತರ ಕೊಡ್ತೀನಿ: ಡಿಕೆ ಶಿವಕುಮಾರ್

      DK Shivakumar Bail Application Hearing In Delhi High Court

      ದೆಹಲಿ ಹೈಕೋರ್ಟ್‌ನ ಕೋರ್ಟ್ ಹಾಲ್ ನಂಬರ್ 35ರಲ್ಲಿ ಮೊದಲ ಪ್ರಕರಣ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯಾಗಿತ್ತು. ಅಕ್ಟೋಬರ್ 15ರಂದು ಡಿ.ಕೆ. ಶಿವಕುಮಾರ್ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಲಿದೆ. ನ್ಯಾಯಾಂಗ ಬಂಧನದಲ್ಲಿರುವ ಡಿ. ಕೆ. ಶಿವಕುಮಾರ್ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

      ಸಹೋದರನ ಹೇಳಿಕೆ ಆಧರಿಸಿ ಜೈಲಿನಲ್ಲಿ ಡಿಕೆ ಶಿವಕುಮಾರ್ ವಿಚಾರಣೆ ಸಹೋದರನ ಹೇಳಿಕೆ ಆಧರಿಸಿ ಜೈಲಿನಲ್ಲಿ ಡಿಕೆ ಶಿವಕುಮಾರ್ ವಿಚಾರಣೆ

      Newest FirstOldest First
      12:08 PM, 14 Oct

      ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಮಂಗಳವಾರ ವಾದ ಮಂಡನೆ ಮಾಡಲಿದ್ದಾರೆ.
      12:03 PM, 14 Oct

      ಡಿ. ಕೆ. ಶಿವಕುಮಾರ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯಕ್ಕೆ ಬಾರದ ಕಾರಣದಿಂದಾಗಿ ವಿಚಾರಣೆಯನ್ನು ಮುಂದೂಡಲಾಗಿದೆ.
      11:10 AM, 14 Oct

      ಅನಾರೋಗ್ಯದ ನಡುವೆಯೇ ವಿಚಾರಣೆಗೆ ಡಿ. ಕೆ. ಶಿವಕುಮಾರ್ ಸ್ಪಂದಿಸಿದ್ದಾರೆ ಎಂದು ವಾದ ಮಂಡಿಸಲಿರುವ ವಕೀಲರು
      11:05 AM, 14 Oct

      ಡಿ. ಕೆ. ಶಿವಕುಮಾರ್ ಮತ್ತು ಇಡಿ ಪರ ವಕೀಲರು ಇನ್ನೂ ಕೋರ್ಟ್‌ ಹಾಲ್‌ಗೆ ಆಗಮಿಸಿಲ್ಲ.
      10:43 AM, 14 Oct

      ಅಕ್ರಮ ಹಣ ವರ್ಗಾವಣೆ ಮೂಲಕ ದೆಹಲಿಗೆ ಹಣ ಸಾಗಣೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಕೆ. ಶಿವಕುಮಾರ್ ಬಂಧಿಸಿ ಇಡಿ ವಿಚಾರಣೆ ನಡೆಸಿತ್ತು.
      10:42 AM, 14 Oct

      2017ರ ಆಗಸ್ಟ್ 2ರಂದು ಡಿ. ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ದಾಳಿ ನಡೆದಿತ್ತು. ಆಗ ದೆಹಲಿ ಫ್ಲ್ಯಾಟ್‌ನಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಹಣಕ್ಕೆ ಯಾವುದೇ ದಾಖಲೆ ಸಿಕ್ಕಿರಲಿಲ್ಲ. ಈ ಬಗ್ಗೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ನಡೆಸುತ್ತಿದೆ.
      10:37 AM, 14 Oct

      ಕೋರ್ಟ್‌ ಹಾಲ್‌ಗೆ ಆಗಮಿಸಿದ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್
      Advertisement
      10:31 AM, 14 Oct

      ಡಿ. ಕೆ. ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ ಎಂಬುದು ಕರ್ನಾಟಕದ ಪ್ರತಿಪಕ್ಷ ಕಾಂಗ್ರೆಸ್ ಆರೋಪವಾಗಿದೆ. ಬಂಧನ ಖಂಡಿಸಿ ಪಕ್ಷ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿತ್ತು.
      10:30 AM, 14 Oct

      ಡಿ. ಕೆ. ಶಿವಕುಮಾರ್‌ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಇಡಿ ವಿಶೇಷ ನ್ಯಾಯಾಲಯ ಒಪ್ಪಿಸಿತ್ತು. ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 15ರಂದು ಅಂತ್ಯವಾಗಲಿದ್ದು, ಅವರನ್ನು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
      10:29 AM, 14 Oct

      ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ, ಸಹೋದರ ಡಿ. ಕೆ. ಸುರೇಶ್, ಉದ್ಯಮಿ ಸಚಿನ್ ನಾರಾಯಣ್, ಬೆಳಗಾವಿ ಗ್ರಾಮೀಣ ಭಾಗದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ಕೆ. ಎನ್. ರಾಜಣ್ಣ ವಿಚಾರಣೆಯನ್ನು ಇಡಿ ನಡೆಸಿದೆ.
      10:27 AM, 14 Oct

      ಇಡಿ ವಿಶೇಷ ನ್ಯಾಯಾಲಯದಲ್ಲಿಯೂ ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಬಾರದು ಎಂದು ಇಡಿ ಪರ ವಕೀಲರು ಪ್ರಬಲವಾದ ಮಂಡಿಸಿದ್ದರು. ಹೈಕೋರ್ಟ್‌ಗೂ ಅವರು ಇಂದು ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ.
      10:26 AM, 14 Oct

      ವಿಚಾರಣೆಗೆ ಸಹಕಾರ ನೀಡಿರುವುದು, ಆರೋಗ್ಯದ ಸಮಸ್ಯೆ ಮುಂತಾದ ಅಂಶಗಳನ್ನು ಮುಂದಿಟ್ಟುಕೊಂಡು ಡಿ. ಕೆ. ಶಿವಕುಮಾರ್ ಪರ ವಕೀಲರು ಜಾಮೀನಿಗಾಗಿ ಮನವಿ ಮಾಡಲಿದ್ದಾರೆ.
      Advertisement
      10:25 AM, 14 Oct

      ಜಾರಿ ನಿರ್ದೇಶನಾಲಯದ ಪರವಾಗಿ ಕರ್ನಾಟಕದವೇ ಆದ ಕೆ. ಎಂ. ನಟರಾಜ್ ವಾದ ಮಂಡಿಸಲಿದ್ದಾರೆ.
      10:24 AM, 14 Oct

      ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ದಯಾನ್ ಕೃಷ್ಣನ್ ವಾದ ಮಂಡನೆ ಮಾಡಲಿದ್ದಾರೆ.
      10:23 AM, 14 Oct

      ಡಿ. ಕೆ. ಶಿವಕುಮಾರ್ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
      10:21 AM, 14 Oct

      ಸೆಪ್ಟೆಂಬರ್ 3ರಂದು ಡಿ. ಕೆ. ಶಿವಕುಮಾರ್‌ರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
      10:20 AM, 14 Oct

      ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ರನ್ನು ದೆಹಲಿಯಲ್ಲಿ ಬಂಧಿಸಿದೆ. ಆದ್ದರಿಂದ, ದೆಹಲಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

      English summary
      DK Shivakumar bail application hearing in Delhi high court. DK Shivakumar arrested by Enforcement Directorate in connection with the money laundering case.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X