DK Shivakumar Bail Application Verdict Live Updates: ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾ

ಬೆಂಗಳೂರು, ಸೆಪ್ಟೆಂಬರ್ 25 : ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿ ವಜಾಗೊಂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.

ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪನ್ನು ಮಂಗಳವಾರ ಪ್ರಕಟಿಸಿತು. ಜಾಮೀನು ನಿರಾಕರಿಸಲಾಗಿದೆ ಎಂದು ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಒಂದೇ ಸಾಲಿನ ಆದೇಶ ನೀಡಿದರು.

DK Shivakumar Bail Application Verdict Live Updates In Kannada

ಸತತ ನಾಲ್ಕು ದಿನಗಳ ವಿಚಾರಣೆ ಬಳಿಕ ಸೆಪ್ಟೆಂಬರ್ 3ರಂದು ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಡಿ. ಕೆ. ಶಿವಕುಮಾರ್‌ಗೆ ಇಂದು ಜಾಮೀನು ಸಿಗಲಿದೆ. ಅವರು ಬಿಡುಗಡೆಯಾಗಲಿದ್ದಾರೆ ಎಂದು ಅವರ ಅಪಾರ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿ. ಕೆ. ಶಿವಕುಮಾರ್ ಪರವಾಗಿ ತೀರ್ಪು ಬರಲಿ ಎಂದು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದರು.

Sep 25, 2019, 5:26 pm IST

ಅಕ್ಟೋಬರ್ 1ರ ತನಕ ಡಿ. ಕೆ. ಶಿವಕುಮಾರ್ ನ್ಯಾಯಾಂಗ ಬಂಧನದ ಅವಧಿ ಇದೆ. ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರೂ ಆ ಆದೇಶ ಬರುವ ತನಕ ಜೈಲಿನಲ್ಲಿಯೇ ಇರಬೇಕಾಗುತ್ತದೆ.
Sep 25, 2019, 5:15 pm IST

ಜಾಮೀನು ನಿರಾಕರಿಸಲಾಗಿದೆ ಎಂದು ಒಂದೇ ವಾಕ್ಯದಲ್ಲಿ ಆದೇಶ ಓದಿದ ನ್ಯಾಯಾಧೀಶರು
Sep 25, 2019, 5:14 pm IST

ಡಿ. ಕೆ. ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದು ದೆಹಲಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿಯನ್ನು ಸಲ್ಲಿಸಬೇಕಿದೆ.
Sep 25, 2019, 5:12 pm IST

ಡಿ. ಕೆ. ಶಿವಕುಮಾರ್‌ ಜಾಮೀನು ಅರ್ಜಿ ವಜಾ
Sep 25, 2019, 5:00 pm IST

ಒಂದೂವರೆ ಗಂಟೆಯಿಂದ ಜಾಮೀನು ಅರ್ಜಿಯ ತೀರ್ಪನ್ನು ಬರೆಸುತ್ತಿರುವ ನ್ಯಾಯಾಧೀಶರು.
Sep 25, 2019, 4:56 pm IST

ದೆಹಲಿಗೆ ಆಗಮಿಸಿರುವ ಡಿ.ಕೆ. ಶಿವಕುಮಾರ್ ಬೆಂಬಲಿಗರು. ಕೋರ್ಟ್ ಹಾಲ್‌ನಲ್ಲಿರುವ ಹಲವು ಅಭಿಮಾನಿಗಳು, ಬೆಂಬಲಿಗರು. ಜಾಮೀನು ಸಿಗುವ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.
Sep 25, 2019, 4:54 pm IST

"ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಮ್ಮ ಪರವಾಗಿ ತೀರ್ಪು ಬರಬಹುದು. ನಮ್ಮ ವಕೀಲರು ಸಹ ನಮ್ಮ ಪರ ತೀರ್ಪು ಬರಲಿದೆ ಎಂಬ ವಿಶ್ವಾಸದಲ್ಲಿದ್ದಾರೆ" ಎಂದು ಡಿ. ಕೆ. ಸುರೇಶ್ ಹೇಳಿದರು.
Sep 25, 2019, 4:47 pm IST

ಕೋರ್ಟ್‌ನಲ್ಲಿ ಹಾಜರಿರುವ ವಕೀಲರ ಹೆಸರುಗಳನ್ನು ಪಡೆದ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್. ಆದೇಶ ಪ್ರತಿಯಲ್ಲಿ ಎಲ್ಲಾ ವಕೀಲರ ಹೆಸರು ಸೇರ್ಪಡೆ
Sep 25, 2019, 4:42 pm IST

ನ್ಯಾಯಾಲಯಕ್ಕೆ ಆಗಮಿಸಿದ ಇಡಿ ತನಿಖಾಧಿಕಾರಿ ಸೌರಭ್ ಮೆಹ್ತಾ
Sep 25, 2019, 4:32 pm IST

ವಿಶ್ವ ಒಕ್ಕಲಿಗರ ಒಕ್ಕೂಟದಡಿ ವಿವಿಧ ಸಂಘಟನೆಗಳು ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದವು.
Sep 25, 2019, 4:32 pm IST

ಡಿ. ಕೆ. ಶಿವಕುಮಾರ್ ಬಂಧನ ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ ಎಂದು ಆರೋಪಿಸಿ ಕರ್ನಾಟಕದಲ್ಲಿ ಭಾರಿ ಪ್ರತಿಭಟನೆ ನಡೆದಿತ್ತು.
Sep 25, 2019, 4:27 pm IST

ಇಡಿ ವಶದಲ್ಲಿ ಇರುವಾಗಲೇ ಡಿ. ಕೆ. ಶಿವಕುಮಾರ್ ಆರೋಗ್ಯ ಹದಗೆಟ್ಟಿತ್ತು. ಅವರಿಗೆ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದ ವಿಚಾರವನ್ನು ಮುಂದಿಟ್ಟುಕೊಂಡು ಡಿ. ಕೆ. ಶಿವಕುಮಾರ್ ಪರ ವಕೀಲರು ಜಾಮೀನು ಕೇಳಿದ್ದಾರೆ.
Sep 25, 2019, 4:26 pm IST

ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಿದರೆ ಪ್ರಕರಣದ ಇತರ ಆರೋಪಿಗಳ ಮೇಲೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಾರೆ ಎಂದು ಇಡಿ ನ್ಯಾಯಾಲಯದ ಮುಂದೆ ವಾದ ಮಂಡನೆ ಮಾಡಿದೆ.
Sep 25, 2019, 4:25 pm IST

ಇಡಿ ಪರವಾಗಿ ವಾದ ಮಂಡನೆ ಮಾಡಿರುವ ಕೆ. ಎಂ. ನಟರಾಜ್ ಡಿ. ಕೆ. ಶಿವಕುಮಾರ್‌ಗೆ ಜಾಮೀನು ನೀಡಬಾರದು ಎಂದು ಪ್ರಬಲವಾದ ವಾದ ಮಂಡನೆ ಮಾಡಿದ್ದಾರೆ.
Sep 25, 2019, 4:24 pm IST

"ಒಳ್ಳೆಯ ತೀರ್ಥ ಕ್ಷೇತ್ರದಲ್ಲಿ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ. ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ" ಎಂದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದ್ದಾರೆ.
Sep 25, 2019, 4:23 pm IST

ಡಿ. ಕೆ. ಶಿವಕುಮಾರ್ ತಾಯಿ ಗೌರಮ್ಮ ಪುತ್ರನಿಗೆ ಜಾಮೀನು ಸಿಗಲಿ ಎಂದು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Sep 25, 2019, 4:21 pm IST

14 ದಿನಗಳ ಕಾಲ ಇಡಿ ಡಿ. ಕೆ. ಶಿವಕುಮಾರ್‌ರನ್ನು ವಿಚಾರಣೆ ನಡೆಸಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Sep 25, 2019, 4:20 pm IST

ಸೆಪ್ಟೆಂಬರ್ 3ರಂದು ಡಿ. ಕೆ. ಶಿವಕುಮಾರ್‌ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.
Sep 25, 2019, 4:19 pm IST

ಆಗಸ್ಟ್ 30ರಂದು ಡಿ. ಕೆ. ಶಿವಕುಮಾರ್ ಮೊದಲ ಬಾರಿಗೆ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ನಾಲ್ಕು ದಿನಗಳ ಕಾಲ ಸತತವಾಗಿ ವಿಚಾರಣೆ ಎದುರಿಸಿದ್ದರು.
Sep 25, 2019, 4:17 pm IST

ಇಡಿ ವಿಶೇಷ ನ್ಯಾಯಾಲಯ ಜಾಮೀನು ನೀಡದಿದ್ದರೆ ಡಿ. ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಬೇಕಾಗಿದೆ.
Sep 25, 2019, 4:16 pm IST

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರ ವಿಚಾರಣೆ ನಡೆದಿದೆ.
Sep 25, 2019, 4:07 pm IST

ಡಿ. ಕೆ. ಶಿವಕುಮಾರ್ ಪರವಾಗಿ ಅಭಿಷೇಕ್ ಮನೋಜ್ ಸಿಂಘ್ವಿ, ದಯಾನ್ ಕೃಷ್ಣನ್ ವಾದ ಮಂಡನೆ ಮಾಡಿದ್ದಾರೆ
Sep 25, 2019, 4:06 pm IST

ಅಕ್ಟೋಬರ್ 1ರ ತನಕ ಡಿ. ಕೆ. ಶಿವಕುಮಾರ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಅವರು ತಿಹಾರ್ ಜೈಲಿನಲ್ಲಿದ್ದಾರೆ.
Sep 25, 2019, 3:54 pm IST

ಡಿ. ಕೆ. ಶಿವಕುಮಾರ್ ಸಹೋದರ ಡಿ. ಕೆ. ಸುರೇಶ್ ಸೇರಿದಂತೆ ಹಲವರು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.
Sep 25, 2019, 3:53 pm IST

ನ್ಯಾಯಮೂರ್ತಿ ಅಜಯ್ ಕುಮಾರ್ ಕುಹರ್ ಡಿ. ಕೆ. ಶಿವಕುಮಾರ್ ಪರ ವಕೀಲರು ಮತ್ತು ಇಡಿ ಪರ ವಕೀಲವರ ವಾದವನ್ನು ಆಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+