ಪ್ರಧಾನಿ ಮೋದಿ ಟ್ರೆಂಡ್ ಫಾಲೋ ಮಾಡಿದ್ರಾ ಡಿಕೆಶಿ?
ಬೆಂಗಳೂರು: ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಡಿಸಿಎಂ ಪಟ್ಟ ಅಲಂಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ನೂತನ ಡಿಸಿಎಂ, ಶಕ್ತಿಸೌಧದ ಮೆಟ್ಟಿಲಿಗೆ ನಮಸ್ಕರಿಸಿ ಒಳಗೆ ಹೋದರು. 2014ರಲ್ಲಿ ಪ್ರಧಾನಿ ಮೋದಿ ಪಾರ್ಲಿಮೆಂಟ್ ಮೆಟ್ಟಿಲಿಗೆ ನಮಸ್ಕರಿಸಿದ್ದಂತೆ ಡಿ.ಕೆ.ಶಿವಕುಮಾರ್ ಈಗ ಪ್ರಧಾನಿ ಮೋದಿಯವರ ಟ್ರೆಂಡ್ ಫಾಲೋ ಮಾಡಿದ್ರಾ? ಎಂಬ ಚರ್ಚೆ ಶುರುವಾಗಿದೆ.
ಹೌದು, 2014ರಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರಧಾನಿಯಾಗಿ ಲೋಕಸಭೆ ಕಟ್ಟಡ ಪ್ರವೇಶ ಮಾಡುವಾಗ ಇದೇ ರೀತಿ ಪಾರ್ಲಿಮೆಂಟ್ ಕಟ್ಟಡದ ಮೆಟ್ಟಿಲಿಗೆ ನಮಸ್ಕರಿಸಿದ್ದರು. ಇದೀಗ ಕರ್ನಾಟಕ ಸರ್ಕಾರದ ನೂತನ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ವಿಧಾನಸೌಧ ಮೆಟ್ಟಿಲಿಗೆ ನಮಸ್ಕಾರ ಮಾಡಿರುವುದು ಭಾರಿ ಕುತೂಹಲ ಕೆರಳಿಸಿದೆ. ಹಾಗಾದ್ರೆ ಈ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದ್ದಾದರೂ ಏನು? ಟ್ವೀಟ್ ಮಾಡಿ ಈ ಬಗ್ಗೆ ಡಿ.ಕೆ.ಶಿವಕುಮಾರ್ ಹಂಚಿಕೊಂಡ ಖುಷಿ ಹೇಗಿತ್ತು? ತಿಳಿಯೋಣ ಬನ್ನಿ.

ವಿಧಾನಸೌಧ ದೈವ ಮಂದಿರ-ಡಿಕೆಶಿ
ರಾಜಧಾನಿ ಬೆಂಗಳೂರಿನ ಕಂಠೀರವ ಸ್ಟೇಡಿಯಂ ಒಳಗೆ ನೂತನ ಸಿಎಂ ಸಿದ್ದರಾಮಯ್ಯ ಹಾಗೂ ನೂತನ DCM ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಆ ಬಳಿಕ ರಾಜ್ಯದ ಶಕ್ತಿಸೌಧ ವಿಧಾನಸೌಧಕ್ಕೆ ಬಂದ್ರು. ಈ ವೇಳೆ ಡಿ.ಕೆ.ಶಿವಕುಮಾರ್ ವಿಧಾನಸೌಧ ಮೆಟ್ಟಿಲಿಗೆ ನಮಸ್ಕರಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ, ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದೆ. ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳನ್ನು ಕಾಪಾಡುವ ವಿಧಾನಸೌಧವು ಒಂದು ದೈವ ಮಂದಿರವಿದ್ದಂತೆ ಎಂದು ಡಿ.ಕೆ.ಶಿವಕುಮಾರ್ ಬರೆದುಕೊಂಡಿದ್ದಾರೆ.
()ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದೆ. ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳನ್ನು ಕಾಪಾಡುವ ವಿಧಾನಸೌಧವು ಒಂದು ದೈವ ಮಂದಿರವಿದ್ದಂತೆ. pic.twitter.com/GZI0MgZdLg
— DK Shivakumar (@DKShivakumar) May 20, 2023
2014ರಲ್ಲಿ ಪ್ರಧಾನಿ ಮೋದಿ ಟ್ರೆಂಡ್!
ಅಂದಹಾಗೆ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿ, ಅಧಿಕಾರ ಹಿಡಿದ ಸಂದರ್ಭದಲ್ಲೂ ಇದೇ ರೀತಿ ಪಾರ್ಲಿಮೆಂಟ್ ಕಟ್ಟಡಕ್ಕೆ ನಮಸ್ಕರಿಸಿ ಒಳಗೆ ಬಂದಿದ್ದರು. ಆ ಬಳಿಕ ಪ್ರಧಾನಿ ಅವರ ಈ ಟ್ರೆಂಡ್ ವೈರಲ್ ಆಗಿತ್ತು. 2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ 135 ಸ್ಥಾನ ಪಡೆದು ಸರ್ಕಾರ ರಚಿಸಿದೆ. ಈ ಹೊತ್ತಲ್ಲಿ ನೂತನ ಡಿಸಿಎಂ ವಿಧಾನಸೌಧದ ಮೆಟ್ಟಿಲಿಗೆ ನಮಸ್ಕರಿಸಿರುವುದು ವಿಶೇಷ.
()#WATCH | After taking the oath, Karnataka CM Siddaramaiah and Deputy CM DK Shivakumar reach Vidhana Soudha in Bengaluru.#Karnataka pic.twitter.com/oYLxmwD2VO
— ANI (@ANI) May 20, 2023
ಕಾಂಗ್ರೆಸ್ ದಿಗ್ವಿಜಯದ ಸಾರಥಿ!
ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಟ್ರಾಟಜಿ ತುಂಬಾ ಪ್ರಮುಖ ಪಾತ್ರ ವಹಿಸಿದೆ. ಅದರಲ್ಲೂ ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿಯ ತಪ್ಪುಗಳ ವಿರುದ್ಧ ಹೊಸ ಹೋರಾಟ ಆರಂಭಿಸಿದ್ದು ಮತ್ತು ಬೆಲೆ ಏರಿಕೆಯ ಅಪಾಯವನ್ನ ಅಚ್ಚುಕಟ್ಟಾಗಿ ಕರ್ನಾಟಕಕ್ಕೆ ಮನವರಿಕೆ ಮಾಡಿದ್ದರ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಟ್ರಾಟಜಿ ಇದೆ. ಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟು, ಸದ್ಯ DCM ಆಗಿದ್ದಾರೆ. ಮುಂದೆ ಮತ್ತಷ್ಟು ಒಳ್ಳೆಯ ಅವಕಾಶ ದೊರೆಯುವ ನಿರೀಕ್ಷೆಯಲ್ಲಿದ್ದಾರೆ.

5 ಗ್ಯಾರಂಟಿಗೆ ಸಿಕ್ಕ ಒಪ್ಪಿಗೆ!
ಬೆಳಗ್ಗೆ ಸಿದ್ದರಾಮಯ್ಯ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಹೊಸ ಆಸೆ ಚಿಗುರಿತ್ತು. ಅದರಲ್ಲೂ ಕಾಂಗ್ರೆಸ್ ಚುನಾವಣೆ ಸಮಯದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರಂಟಿ ಬಗ್ಗೆ ಜನರಿಗೆ ಕುತೂಹಲ ಡಬಲ್ ಆಗಿತ್ತು. ಇದೀಗ ತಾನು ಹೇಳಿದಂತೆ ಸಿದ್ದರಾಮಯ್ಯ ನಡೆದುಕೊಂಡಿದ್ದು, ತಮ್ಮ ಮೊದಲ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ತನ್ನ ಪ್ರಣಾಳಿಕೆಯನ್ನ ರಾಜ್ಯದಲ್ಲಿ ಜಾರಿಗೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.
ಒಟ್ನಲ್ಲಿ ಅಂದುಕೊಂಡಂತೆ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಜನರ ವಿಶ್ವಾಸ ಗಳಿಸಿ, ಕರ್ನಾಕಟದಲ್ಲಿ ಹೊಸ ಸರ್ಕಾರ ರಚಿಸಿದ್ದಾರೆ. ಇದೇ ಸಂದರ್ಭದಲ್ಲಿ ತಾವು ಕೊಟ್ಟ ಮಾತು ಉಳಿಸಿಕೊಳ್ಳಲು ಮೊದಲನೇ ಸಚಿವ ಸಂಪುಟ ಸಭೆಯಲ್ಲೇ ಕ್ರಮ ಕೈಗೊಂಡಿರುವುದು ವಿಶೇಷ. ಇದರ ಜೊತೆಗೆ ನೂತನ ಡಿಸಿಎಂ ಡಿಕೆಶಿ ಅವರ ವಿಧಾನಸೌಧ ಎಂಟ್ರಿ ಕೂಡ ಇಡೀ ದೇಶದ ಗಮನ ಸೆಳೆದಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications