Sharath Bachegowda: ಡಿಕೆ ಶಿವಕುಮಾರ್ ಆಪ್ತ ಶರತ್ ಬಚ್ಚೇಗೌಡಗೆ ಸಚಿವ ಸ್ಥಾನ?
ಬೆಂಗಳೂರು, ಜನವರಿ 15: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ನಡುವೆ ಸಚಿವ ಸಂಪುಟ ಪುನರ್ ರಚನೆಯ ಚರ್ಚೆ ನಡೆಯುತ್ತಿದೆ. ಡಿಸಿಎಂ ಡಿ ಕೆ ಶಿವಕುಮಾರ್ ವಿದೇಶಿ ಪ್ರವಾಸದಲ್ಲಿರುವ ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ತಾರಕಕ್ಕೇರಿತ್ತು. ಇದರ ಬೆನ್ನಲ್ಲೇ ಕೈ ಪಾಳಯದಲ್ಲಿ ಮಂತ್ರಿಗಿರಿಗಾಗಿ ಹಲವು ನಾಯಕರು ಹೈಕಮಾಂಡ್ ನಾಯಕರ ಮಟ್ಟದಲ್ಲಿ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಕಳೆದ ವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನ ನಡೆಸಿದ್ದು, ಈ ಸಭೆಯಲ್ಲಿ ಬಹಿರಂಗ ಹೇಳಿಕೆಗೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಬಜೆಟ್ ಅಧಿವೇಶನದ ಬಳಿಕ ಕೆಲ ಸಚಿವರಿಗೆ ಸಂಪುಟದಿಂದ ಕೊಕ್ ನೀಡಲಿದ್ದು, ಕೆಲ ಸಚಿವರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂಬ ಸುಳಿವನ್ನು ಸುರ್ಜೇವಾಲಾ ನೀಡಿದ್ದಾರೆ.

ಹೊಸಕೋಟೆಯ ಪಕ್ಷೇತರ ಶಾಸಕ, ಬಿಜೆಪಿ ಮಾಜಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಆಪ್ತರಾಗಿರುವ ಶರತ್ ಬಚ್ಚೇಗೌಡ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಶಾಸಕಾಂಗ ಸಭೆಗೂ ಮುನ್ನಾ ಎಲ್ಲಾ ಸಚಿವರ ರಿಪೋರ್ಟ್ ಕಾರ್ಡ್ ಅನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರಿಗೆ ನೀಡಿದ್ದಾರೆ. ಸಚಿವರ ಕಾರ್ಯವೈಖರಿ ವರದಿಯ ಕುರಿತು ಚರ್ಚೆ ನಡೆಸಿರುವ ಸುರ್ಜೇವಾಲಾ ಅವರು ಸಚಿವ ಸಂಪುಟ ಪುನರ್ ರಚನೆ ಕಸರತ್ತು ನಡೆಸಿದ್ದಾರೆ ಎಂದು ಹೇಳಲಾಗಿದೆ.
ಆರಂಭದಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಕೆಲ ಸಚಿವರುಗಳ ಕಾರ್ಯವೈಖರಿಯ ಕುರಿತು ಅನೇಕ ಶಾಸಕರುಗಳು ಅಸಮಾಧಾನ ಹೊರಹಾಕುತ್ತಿದ್ದಾರೆ. ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಇಲಾಖೆಯಲ್ಲಿ ಬದಲಾವಣೆ ತಂದಿಲ್ಲ, ಜಿಲ್ಲೆಗಳ ಕಡೆ ಮುಖ ಮಾಡ್ತಿಲ್ಲ ಎಂದು ಶಾಸಕರು ದೂರಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಸಚಿವರ ರಿಪೋರ್ಟ್ ಕಾರ್ಡ್ ನೀಡುವಂತೆ ಹೈಕಮಾಂಡ್ ಕೇಳಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಹಾಗೂ ಡಿಸಿಎಂ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ಬಜೆಟ್ ಅಧಿವೇಶನ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಹಲವು ಶಾಸಕರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಹೇಳಲಾಗಿದೆ.
ಸಚಿವರ ಕಾರ್ಯ ವೈಖರಿ, ಪಕ್ಷಕ್ಕೆ ಸಚಿವರ ಕೊಡುಗೆ, ಸರ್ಕಾರದ ಇಮೇಜ್ ಹೆಚ್ಚಿಸಲು ಸಚಿವರು ಕೈಗೊಂಡ ಕೆಲಸ, ಇಲಾಖೆಗಳಲ್ಲಿ ಮಾಡಿದ ಗಮನಾರ್ಹ ಸಾಧನೆಗಳು, ಇಲಾಖೆಗಳಲ್ಲಿ ತೆಗೆದುಕೊಂಡ ಪಾಲಿಸಿಗಳೇನು, ಪಕ್ಷದ ಸಂಘಟನೆಗೆ ಸಚಿವರು ನೀಡಿದ ಕೊಡುಗೆ ಏನು? ಈ ರೀತಿಯ ಪ್ರಶ್ನೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಸಚಿವರುಗಳಿಗೆ ಕೇಳಿತ್ತು.
ಹೈಕಮಾಂಕ್ ಕೇಳಿದ ಪ್ರಶ್ನಗಳಿಗೆ ಬುಕ್ ಲೆಟ್ ಮಾದರಿಯಲ್ಲಿ ಸಚಿವರುಗಳು ಸಮಗ್ರ ವದರಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರಿಗೆ ಸಲ್ಲಿಕೆ ಮಾಡಿದ್ದಾರೆ. ವರದಿ ಆಧರಿಸಿ ಸಚಿವರ ಮೌಲ್ಯ ಮಾಪನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಲಿದೆ. ಮೌಲ್ಯ ಮಾಪನದ ಬಳಿಕ ಸಂಪುಟ ಪುನರ್ ರಚನೆ ನಡೆಯಲಿದೆ.












Click it and Unblock the Notifications