ಹೈಕೋರ್ಟ್ ಮೆಟ್ಟಿಲೇರಿದ ಡಿ. ಕೆ. ಶಿವಕುಮಾರ್ ಆಪ್ತರು

ಬೆಂಗಳೂರು, ಅಕ್ಟೋಬರ್ 15 : ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಆಪ್ತರು ಬಂಧನದ ಭೀತಿಯಿಂದಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸದಂತೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ.

ಡಿ. ಕೆ. ಶಿವಕುಮಾರ್ ಬಂಧನ ಮತ್ತು ಅವರ ಕುಟುಂಬ ಸದಸ್ಯರ ವಿಚಾರಣೆ ಬಳಿಕ ಮಾಜಿ ಸಚಿವರ ಆಪ್ತರು ಬಂಧನ ಭೀತಿಯಲ್ಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನಲ್ಲಿ ನಾಲ್ವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಸಚಿನ್ ನಾರಾಯಣ್, ಆಂಜನೇಯ, ಸುನೀಲ್ ಶರ್ಮಾ ಮತ್ತು ರಾಜೇಂದ್ರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಾರಿ ನಿರ್ದೇಶನಾಲಯ ತಮ್ಮನ್ನು ಬಂಧಿಸದಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

Recommended Video

      DK Shivakumar's Bail Plea Hearing Today | Oneindia Kannada

      ಡಿ. ಕೆ. ಶಿವಕುಮಾರ್ ಆಪ್ತರಾಗಿರುವ ನಾಲ್ವರು ಸಹ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಗಳು. ಈಗಾಗಲೇ ಎರಡು ಬಾರಿ ಸುನೀಲ್ ಶರ್ಮಾ ಇಡಿ ವಿಚಾರಣೆ ಎದುರಿಸಿದ್ದಾರೆ. ಆದರೆ, ಅವರನ್ನು ಬಂಧಿಸಲು ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಇದೆ.

      ನಾಲ್ಕು ವಾರಗಳ ರಕ್ಷಣೆ

      ನಾಲ್ಕು ವಾರಗಳ ರಕ್ಷಣೆ

      ಡಿ. ಕೆ. ಶಿವಕುಮಾರ್ ಆಪ್ತರಾದ ಸಚಿನ್ ನಾರಾಯಣ್, ಆಂಜನೇಯ, ಸುನೀಲ್ ಶರ್ಮಾ ಮತ್ತು ರಾಜೇಂದ್ರ ಕರ್ನಾಟಕ ಹೈಕೋರ್ಟ್‌ಗೆ ಹಿಂದೆಯೂ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ನಾಲ್ವರನ್ನು ನಾಲ್ಕುವಾರಗಳ ಕಾಲ ಬಂಧಿಸದಂತೆ ಆದೇಶ ನೀಡಿತ್ತು ಮತ್ತು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು.

      ಇಡಿ ನೋಟಿಸ್ ನೀಡಿದ್ದಾರೆ

      ಇಡಿ ನೋಟಿಸ್ ನೀಡಿದ್ದಾರೆ

      ಸುಪ್ರೀಂಕೋರ್ಟ್‌ಗೆ ರಜೆ ಇರುವ ಕಾರಣ ಅಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ಹೇಳಿರುವ ನಾಲ್ವರು, ಪುನಃ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮನ್ನು ಬಂಧಿಸದಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

      ಅಕ್ರಮ ಹಣ ವರ್ಗಾವಣೆ ಪ್ರಕರಣ

      ಅಕ್ರಮ ಹಣ ವರ್ಗಾವಣೆ ಪ್ರಕರಣ

      ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್‌ ಬಂಧನವಾಗಿದೆ. ಡಿ. ಕೆ. ಶಿವಕುಮಾರ್ ಸಹೋದರ, ಪುತ್ರಿ ವಿಚಾರಣೆ ನಡೆದಿದೆ. ತಾಯಿ ಗೌರಮ್ಮ ಮತ್ತು ಪತ್ನಿ ಉಷಾಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ. ಆದ್ದರಿಂದ, ಡಿ. ಕೆ. ಶಿವಕುಮಾರ್ ಆಪ್ತರಿಗೆ ಬಂಧನ ಭೀತಿ ಎದುರಾಗಿದೆ.

      ಜಾಮೀನು ಅರ್ಜಿ ವಿಚಾರಣೆ

      ಜಾಮೀನು ಅರ್ಜಿ ವಿಚಾರಣೆ

      ಡಿ. ಕೆ. ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ದೆಹಲಿ ಹೈಕೋರ್ಟ್‌ನಲ್ಲಿ ಇಂದು ಮಧ್ಯಾಹ್ನ 3.30ಕ್ಕೆ ನಡೆಯಲಿದೆ. ಡಿ. ಕೆ. ಶಿವಕುಮಾರ್ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಳ್ಳಿದ್ದು, ಅವರನ್ನು ಇಡಿ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+