ಆಶಾ ಕಾರ್ಯಕರ್ತೆಯರೇ ಪ್ರತಿಭಟನೆ ಕೈಬಿಡಿ, ನಿಮ್ಮ ಸಮಸ್ಯೆಗೆ ಖಂಡಿತ ಪರಿಹಾರ: ಜಪಾನ್‌ನಿಂದಲೇ ಡಿಕೆಶಿ ಮನವಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಜಪಾನ್ ಪ್ರವಾಸದಲ್ಲಿರುವ ಅವರು ವಿಡಿಯೋ ಕರೆ ಮೂಲಕ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿದ್ದು, ನಿಮ್ಮ ಸಮಸ್ಯೆಗಳನ್ನು ಖಂಡಿತವಾಗಿಯೂ ಬಗೆಹರಿಸುತ್ತೇವೆ. ಸರ್ಕಾರ ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಹೀಗಾಗಿ ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ.

ಜಪಾನ್ ಪ್ರವಾಸದಲ್ಲಿರುವ ಸಿಎಂ ಡಿ ಕೆ ಶಿವಕುಮಾರ್ ಅವರು ರೈಲಿನಲ್ಲಿ ಪ್ರಯಾಣ ಮಾಡುತ್ತಲೇ ವಿಡಿಯೋ ಕರೆ ಮುಖಾಂತರ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆತ್ತಿರುವ ಆಶಾ ಕಾರ್ಯಕರ್ತೆಯರ ಮುಖಂಡರೊಂದಿಗೆ ಮಂಗಳವಾರ ಚರ್ಚೆ ನಡೆಸಿದರು.

DK Shivakumar CM DKS Appeals to ASHA Workers to Call Off Protest Assures Resolution of Their Demands

ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ

ಆಶಾ ಕಾರ್ಯಕರ್ತೆಯರ ಬಗ್ಗೆ ನನಗೆ ವಿಶೇಷ ಕಾಳಜಿ ಇದೆ. ನಿಮ್ಮ ಸಮಸ್ಯೆಗೆ ಖಂಡಿತವಾಗಿಯೂ ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಜಪಾನ್ ನಿಂದ ಆಶಾ ಕಾರ್ಯಕರ್ತೆಯರಿಗೆ ಮನವಿ ಮಾಡಿದರು.

ನಿಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತೇವೆ ನನ್ನ ಮೇಲೆ ವಿಶ್ವಾಸವಿಡಿ ಎಂದು ಭರವಸೆ ನೀಡಿದ್ದು, ನಿಮ್ಮ ಕೋಪ ಬಿಡಿ. ನನ್ನ ಮನವಿ ಒಪ್ಪದೇ ನಿರಶನ ಮುಂದುವರಿಸುತ್ತಿದ್ದೀರಿ. ಇದರಿಂದ ಆಶಾ ಕಾರ್ಯಕರ್ತ ಹೆಣ್ಣುಮಕ್ಕಳಿಗೆ ತೊಂದರೆ ಆಗುತ್ತಿದೆ ಎಂದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಮುಖ್ಯಮಂತ್ರಿಗಳೇ ಭರವಸೆ ನೀಡಿದಾಗ ಅವರ ಮಾತಿನ ಮೇಲೆ ವಿಶ್ವಾಸವಿಡಬೇಕಲ್ಲವೇ ? ಡಿಸಿಎಂ ಪ್ರಶ್ನೆ
ಆಶಾ ಕಾರ್ಯಕರ್ತೆಯರ ಪ್ರತಿಭಟನೆ: ಮುಖ್ಯಮಂತ್ರಿಗಳೇ ಭರವಸೆ ನೀಡಿದಾಗ ಅವರ ಮಾತಿನ ಮೇಲೆ ವಿಶ್ವಾಸವಿಡಬೇಕಲ್ಲವೇ ? ಡಿಸಿಎಂ ಪ್ರಶ್ನೆ

ನಿಮಗೆ ನ್ಯಾಯ ಒದಗಿಸಲಾಗುವುದು

ಅತ್ತ ಅಂಗನವಾಡಿ ಕಾರ್ಯಕರ್ತೆಯರು ದೆಹಲಿಗೆ ಹೋಗಲು ತಯಾರಿ ಮಾಡುತ್ತಿದ್ದಾರೆ. ಬೇರೆ ಇಲಾಖೆಗೆ ಸಂಬಂಧಿಸಿದಂತೆ ಬೇರೆ ಬೇರೆ ಬೇಡಿಕೆಗಳಿದ್ದು, ಅಧಿವೇಶನ ಸಂದರ್ಭದಲ್ಲಿ ನಾನು ನಿಮ್ಮ ಬೇಡಿಕೆ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸುವೆ. ನೀವು ಪ್ರತಿಭಟನೆ ಹಿಂಪಡೆಯಿರಿ. ನಿಮ್ಮ ಬೇಡಿಕೆಗಳಿಗೆ ನಾವು ಸ್ಪಂದಿಸುತ್ತೇವೆ. ನೀವು ಶ್ರಮ ಪಡುತ್ತಿದ್ದು, ನಿಮಗೆ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ನಿಮ್ಮ ಬಗ್ಗೆ ಕಾಳಜಿ ತೋರುತ್ತಿರುವ ರಾಜಕೀಯ ನಾಯಕರು ನಿಮಗೆ ಸಹಾಯ ಮಾಡುವುದಿಲ್ಲ. ಅವರ ರಾಜಕೀಯಕ್ಕೆ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ನಾನು ಖಂಡಿತವಾಗಿಯೂ ನಿಮ್ಮ ಸಮಸ್ಯೆಗೆ ಪರಿಹಾರ ನೀಡುವ ವಾಗ್ದಾನ ನೀಡುತ್ತಿದ್ದೇವೆ. ನನಗೆ ಅಧಿವೇಶನದವರೆಗೆ ಸಮಯ ಕೊಡಿ. ಪಾಪ ಹೆಣ್ಣುಮಕ್ಕಳಿಗೆ ಹಗಲು ರಾತ್ರಿ, ಬಿಸಿಲು ಚಳಿಯಲ್ಲಿ ಪರದಾಡುವುದು ಬೇಡ ಎಂದು ಮನವಿ ಮಾಡಿದರು.

ಒಂದೂವರೆ ವರ್ಷ ಕಾದಿದ್ದೇ ಸಾಕು, ಕೊಟ್ಟ ಮಾತು ಉಳಿಸಿಕೊಳ್ಳಿ: 6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಧರಣಿ
ಒಂದೂವರೆ ವರ್ಷ ಕಾದಿದ್ದೇ ಸಾಕು, ಕೊಟ್ಟ ಮಾತು ಉಳಿಸಿಕೊಳ್ಳಿ: 6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಧರಣಿ

ಬೆಲೆ ಏರಿಕೆ ಸಂದರ್ಭದಲ್ಲಿ ನಿಮ್ಮ ನೋವು, ಸಮಸ್ಯೆ ಏನು ಎಂದು ನಮಗೆ ಅರ್ಥವಾಗುತ್ತದೆ. ಇದೇ ಕಾರಣಕ್ಕೆ ಗ್ಯಾರಂಟಿ ನೀಡಲು ಮುಂದಾಗಿದ್ದೇವೆ. ಆರಂಭದಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೃಹಲಕ್ಷ್ಮಿ ಯೋಜನೆ ನೀಡಬಾರದು ಎಂಬ ಚರ್ಚೆಯಾಗಿತ್ತು. ಆದರೆ ನಿಮ್ಮ ಶ್ರಮ ಪರಿಗಣಿಸಿ ನಾವು ಯೋಜನೆ ನೀಡಿದೆವು. ನಾನು ಜಪಾನ್ ಪ್ರವಾಸದಿಂದ ಮರಳಿದ ಬಳಿಕ ನಿಮ್ಮನ್ನು ಭೇಟಿ ಮಾಡುವೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ಕರ್ನಾಟಕದ ಮೂಲಸೌಕರ್ಯ ಬಲ ಪಡಿಸಲು ಸಹಾಯಕ

ನಗರ ಯೋಜನೆ, ಮೂಲಸೌಕರ್ಯ ಮತ್ತು ಪರಿಸರ ನಿರ್ವಹಣೆಯಲ್ಲಿ ಜಾಗತಿಕ‌ ಮನ್ನಣೆ ಪಡೆದ ಇಂಥ ಮಾದರಿಗಳನ್ನು ಅರ್ಥಮಾಡಿಕೊಂಡು ಅಳವಡಿಸಿಕೊಳ್ಳುವುದು ರಾಜ್ಯ ಸರ್ಕಾರದ ಗುರಿಯಾಗಿದೆ. ಇಂತಹ ಘಟಕಗಳ ಅಧ್ಯಯನ ಮಾಡುವುದರಿಂದ ಕರ್ನಾಟಕದ ನಗರಗಳ ಮೂಲಸೌಕರ್ಯವನ್ನು ಬಲಪಡಿಸಲು, ವೈಜ್ಞಾನಿಕ ಮತ್ತು ದಕ್ಷ ತ್ಯಾಜ್ಯ ವಿಲೇವಾರಿಯನ್ನು ಉತ್ತೇಜಿಸಬಹುದು. ತ್ಯಾಜ್ಯದಿಂದ ಇಂಧನ ಪರಿಹಾರಗಳನ್ನು ಅನ್ವೇಷಿಸಲು ಮತ್ತು ಸ್ವಚ್ಛ, ಸುಸ್ಥಿರ ಹಾಗೂ ವಾಸಯೋಗ್ಯ ನಗರಗಳನ್ನು ನಿರ್ಮಿಸಲು ನೆರವಾಗುತ್ತದೆ ಎಂದು ಸಿಎಂ‌ ಹೇಳಿದರು.

"ನಮ್ಮ‌ ನಗರ ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರಗಳನ್ನು ಹುಡುಕುವುದು. ತ್ಯಾಜ್ಯದಿಂದ ವಿದ್ಯುತ್ ತಯಾರಿಸುವ ಜಾಗತಿಕ ವಿನೂತನ ಪದ್ಧತಿಗಳ ಬಗ್ಗೆ ಅಧ್ಯಯನ ಮಾಡುವುದು ಈ ಭೇಟಿಯ ಉದ್ದೇಶವಾಗಿದೆ" ಎಂದು ಸಿಎಂ‌ ಡಿಕೆ‌ ಶಿವಕುಮಾರ್ ಅವರು ತಿಳಿಸಿದರು.

ಜಪಾನ್‌ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದ ನಿಯೋಗ ಓಸಾಕಾದ ಮೈಶಿಮಾ ತ್ಯಾಜ್ಯ ದಹನ ಘಟಕಕ್ಕೆ ಮಂಗಳವಾರ ಭೇಟಿ ನೀಡಿ ಯೋಜಿತ ನಗರ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ಪರಿಶೀಲಿಸಿತು. ಮೈಶಿಮಾ ತ್ಯಾಜ್ಯ ದಹನ ಘಟಕದಲ್ಲಿ ದಿನಕ್ಕೆ 900 ಟನ್ ಪುರಸಭೆ ತ್ಯಾಜ್ಯವನ್ನು ವಿದ್ಯುತ್ ಆಗಿ ಪರಿವರ್ತಿಸುವ ಬಹಳ ಮುಂದುವರಿದ ತಂತ್ರಜ್ಞಾನದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+