ಬೆಂಗಳೂರು ಕೇಂದ್ರದಲ್ಲಿ 12 ಲಕ್ಷ ಮತದಾರರ ಹೆಸರು ಡಿಲೀಟ್‌: ಲೋಕಸಭೆ ಸೋಲಿನ ಲೆಕ್ಕ ಮುಂದಿಟ್ಟ ಡಿಕೆಶಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ 31 ಸಾವಿರ ಮತಗಳಿಂದ ಸೋತಿದ್ದರು ಹಾಗೂ ಈ ಕ್ಷೇತ್ರವೊಂದರಲ್ಲೇ ಇಂದಿನ ಮಾಹಿತಿಯಂತೆ 12 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿಕುಮಾರ್‌ ಲೆಕ್ಕವನ್ನ ಮುಂದಿಟ್ಟಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿ ಬಳಿಕ ಶಿವಕುಮಾರ್ ಅವರು ಕರ್ನಾಟಕ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ಎಸ್ ಐ ಆರ್ ವಿಚಾರ ಈಗ ರಾಷ್ಟ್ರದ ವಿಚಾರವಾಗಿದೆ. ನಮ್ಮ ನಾಯಕರು ಎಸ್ ಐ ಆರ್ ನ ಬಗ್ಗೆ ಹಲವು ಆತಂಕಗಳನ್ನು ವ್ಯಕ್ತಪಡಿಸಿರುವುದು ಅವರ ಬದ್ಧತೆಗೆ ಸಾಕ್ಷಿಯಾಗಿದ್ದು, ನಾವೆಲ್ಲರೂ ಅವರೊಂದಿಗಿದ್ದೇವೆ ಎಂದರು.‌

DK Shivakumar CM DKS Claims 12 Lakh Voters Removed From Bengaluru Central Lok Sabha Constituency List

ರೈತ ಚೈತನ್ಯ ಯಾತ್ರೆ ನನ್ನ ಕ್ಷೇತ್ರದಿಂದಲೇ ಮಾಡಲಿ

ವಿರೋಧಪಕ್ಷದವರ ರೈತ ಚೈತನ್ಯ ಯಾತ್ರೆಯನ್ನು ನನ್ನ ಕ್ಷೇತ್ರದಿಂದಲೇ, ನನ್ನ ಮನೆಯಿಂದಲೇ ಪ್ರಾರಂಭಿಸಲಿ, ನಾನು ಬೇಡ ಎನ್ನುವುದಿಲ್ಲ. ಅವರು ರಾಜಕಾರಣ ಮಾಡಲಿ, ನಾವು ಬೇಡ ಎನ್ನಲಾಗುವುದಿಲ್ಲ. ಅವರ ಎಲ್ಲ ಚಟುವಟಿಕೆಗಳ ಬಗ್ಗೆ ನನಗೆ ಮಾಹಿತಿಗಳು ಬರುತ್ತವೆ. ಹೋರಾಟ ಮಾಡುವವರಿಗೆ ಬೇಡ ಎನ್ನುವುದಿಲ್ಲ. ಪಾದಯಾತ್ರೆ ಅವರು ಮಾಡಿಕೊಳ್ಳಲಿ ಎಂದು ಹೇಳಿದರು.

ವಿರೋಧಪಕ್ಷದವರನ್ನು ಕಸ್ತೂರಿ ರಂಗನ್ ಮತ್ತು ಬರದ ವಿಚಾರದ ಬಗ್ಗೆ ಚರ್ಚೆ ಮಾಡಲು ಕರೆದಿದ್ದೇವೆ. ಕೆಲವು ನಮ್ಮನ್ನು ಮೂದಲಿಸಿದ್ದಾರೆ. ಸಲಹೆಯನ್ನೂ ನೀಡಿದ್ದಾರೆ. ಈ ವಿಚಾರವಾಗಿ ಸರ್ವಪಕ್ಷದ ನಿಯೋಗ ದೆಹಲಿಗೆ ತೆರಳೋಣವೆಂದು ಹೇಳಿದ್ದೇನೆ. ನಮಗೆ ರಾಜ್ಯದ ಜನರ ಹಿತ ಮುಖ್ಯ. ವಿರೋಧಪಕ್ಷದವರು ಸರ್ವಪಕ್ಷ ನಿಯೋಗದಲ್ಲಿ ಬರಲು ಒಪ್ಪಿದರೆ ಅವರು ರೈತರೊಂದಿಗೆ ಇದ್ದಾರೆ, ಇಲ್ಲವಾದರೆ ಅವರು ರೈತರೊಂದಿಗೆ ಇಲ್ಲ ಎಂದು ಸಾಬೀತಾಗುತ್ತದೆ ಎಂದರು.

ಬರಪರಿಹಾರಕ್ಕೆ ಮನವಿ ಮಾಡಲಾಗಿದೆ

ರಾಜ್ಯದಲ್ಲಿ 200 ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತವಾಗಿವೆ. 101 ತಾಲ್ಲೂಕುಗಳಿಗೆ 700 ಕೋಟಿ ಅನುದಾನ ಕೋರಲಾಗಿತ್ತು. ಪ್ರಸ್ತುತ ಬರಪೀಡಿತ ತಾಲೂಕುಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಪರಿಹಾರದ ಮೊತ್ತವೂ ಏರಿಕೆಯಾಗಲಿದೆ. ಅಕ್ಟೋಬರ್ 3 ರಂದು ಕೇಂದ್ರದ ತಂಡ ಬರ ಪರಿಶೀಲನೆಗಾಗಿ ರಾಜ್ಯಕ್ಕೆ ಆಗಮಿಸಲಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಮನವಿ

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆಯೂ ಕೇಂದ್ರಕ್ಕೆ ಮನದಟ್ಟು ಮಾಡಿಕೊಡಲಾಗಿದೆ. ಮೂರು ನಾಲ್ಕು ವರ್ಷಗಳಿಂದ ಕೇವಲ ಮಾತುಗಳನ್ನೇ ಆಡಿದ್ದು ಅನುದಾನ ಬಿಡುಗಡೆಯಾಗಿಲ್ಲ ಎಂದು ತಿಳಿಸಲಾಗಿದೆ. ವಿಚಾರ ಸಚಿವ ಸಂಪುಟ ಸಭೆಯಲ್ಲಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಮಾಡಲು ತೀರ್ಮಾನ ಕೈಗೊಳ್ಳಲು ಒತ್ತಾಯಿಸಲಾಗಿದೆ ಎಂದರು.‌

DK Shivakumar: ಬೆಂಗಳೂರಿನಲ್ಲಿ ಹಸಿರು ಉದ್ಯಾನವನ

ಬೆಂಗಳೂರಿನ ಇಬ್ಬಲೂರಲ್ಲಿ 700ಎಕರೆ ರಕ್ಷಣಾ ಇಲಾಖೆಯ ಭೂಮಿ ಖಾಲಿ ಇದೆ. ಹಸಿರು ಉದ್ಯಾನವನ ಪ್ರಾರಂಭಿಸಲು ಸರ್ಕಾರ ಯೋಜಿಸಿದೆ. ಇದಕ್ಕೆ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಹೇಳಿದರು.

ಇದರ ಜೊತೆಗೆ ಉದ್ಯಾನವನ, ಮೇಕ್ರಿ ಸರ್ಕಲ್ ಹಾಗೂ ಸರ್ಜಾಪುರ ರಸ್ತೆ ಅಗಲೀಕರಣಕ್ಕೆ ಇಲಾಖೆ ಜಮೀನು ಹಸ್ತಾಂತರಕ್ಕೆ ಮನವಿ ಮಾಡಲಾಗಿದೆ. ಬೆಂಗಳೂರಿನ ರಕ್ಷಣಾ ಜಮೀನಿನಲ್ಲಿರುವ ಕೊಳಚೆ ಪ್ರದೇಶಗಳ ಅಭಿವೃದ್ಧಿ, ಅವಳಿ ಸುರಂಗ ಯೋಜನೆ, ಅಗರ- ಸರ್ಜಾಪುರ ರಸ್ತೆ ವಿಸ್ತರಣೆ, ಏರ್ಪೋರ್ಟ್ ರಸ್ತೆಯಿಂದ (ಬಳ್ಳಾರಿ ರಸ್ತೆ) ಸರೋವರ ಲೇಔಟ್ಗೆ ಲಿಂಕ್ ರಸ್ತೆ ನಿರ್ಮಾಣಕ್ಕೆ ನೆರವು, ಮೇಕ್ರಿ ಸರ್ಕಲ್ ರಸ್ತೆ ಅಗಲೀಕರಣಕ್ಕೆ ರಕ್ಷಣಾ ಇಲಾಖೆ ಜಮೀನು ಹಸ್ತಾಂತರದ ಬಗ್ಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಗವಿಸಿದ್ದೇಶ್ವರ ಸ್ವಾಮೀಜಿ: ತಪ್ಪಿತಸ್ಥರ ವಿರುದ್ಧ ಕ್ರಮ

ಗವಿಸಿದ್ದೇಶ್ವರ ಸ್ವಾಮೀಜಿಗಳನ್ನು ನಾನೇ ಖುದ್ದಾಗಿ ಆಹ್ವಾನಿಸಿದ್ದೇನೆ. ಅವರಲ್ಲದೆ ಇನ್ನೂ ಹಲವು ಸ್ವಾಮೀಜಿಗಳನ್ನು ಆಹ್ವಾನಿಸಿದ್ದೇನೆ. ರಾಜ್ಯದ ನಾಡದೇವತೆಗೆ ಪ್ರಾರ್ಥಿಸಲು ಅವರು ಬರಲಿದ್ದಾರೆ. ಕೆಲವರಿಗೆ ಅಸೂಯೆ ಇರುತ್ತದೆ. ಆದ್ದರಿಂದ ತಪ್ಪು ಸಂದೇಶ ನೀಡಿದ್ದಾರೆ. ಪೊಲೀಸರು ಇದನ್ನು ತನಿಖೆ ಮಾಡುತ್ತಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+