ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿಗೆ ಶರಾವತಿ ನೀರು : ಡಿ.ಕೆ.ಶಿವಕುಮಾರ್ ಹೇಳಿದ್ದೇನು?

|
Google Oneindia Kannada News

ಬೆಂಗಳೂರು, ಜುಲೈ 03 : 'ಬೆಂಗಳೂರಿಗೆ ಶರಾವತಿ ನದಿ ನೀರು ತರುವ ಯೋಜನೆ ವಿಚಾರ ಇನ್ನೂ ಚರ್ಚೆಯ ಹಂತದಲ್ಲಿದೆ, ಹಿಂದೆಯೂ ಈ ಬಗ್ಗೆ ಚರ್ಚೆ ನಡೆದಿತ್ತು' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, 'ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಶರಾವತಿ ನದಿ ನೀರು ತರುವ ವಿಚಾರದ ಬಗ್ಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಗಮನ ಹರಿಸುತ್ತಾರೆ' ಎಂದರು.

ಶಿವಮೊಗ್ಗ : ತುಂಗಾ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಶಿವಮೊಗ್ಗ : ತುಂಗಾ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

 DK Shivakumar comment on Sharavathi water to Bengaluru

'ಹಿಂದೆಯೂ ಬೆಂಗಳೂರಿಗೆ ಶರಾವತಿ ನದಿ ನೀರು ತರುವ ಬಗ್ಗೆ ಚರ್ಚೆಗಳು ನಡೆದಿದ್ದವು. ಇಡೀ ಪ್ರಪಂಚ ಬೆಂಗಳೂರನ್ನು ನೋಡುತ್ತಿದೆ. ದೇಶಕ್ಕೆ ಅತ್ಯಧಿಕ ಆದಾಯ ನೀಡುವ ನಗರ ಬೆಂಗಳೂರು. ಬೆಂಗಳೂರಿಗೆ ಹೆಚ್ಚಿನ ಒತ್ತು ನೀಡಬೇಕಿದೆ' ಎಂದು ಸಚಿವರು ಹೇಳಿದರು.

ಬೆಂಗಳೂರಿಗೆ ಶರಾವತಿ ನೀರು : ಶಿವಮೊಗ್ಗದಲ್ಲಿ ಹೋರಾಟಕ್ಕೆ ವೇದಿಕೆ ಸಿದ್ಧಬೆಂಗಳೂರಿಗೆ ಶರಾವತಿ ನೀರು : ಶಿವಮೊಗ್ಗದಲ್ಲಿ ಹೋರಾಟಕ್ಕೆ ವೇದಿಕೆ ಸಿದ್ಧ

'ಮೆಕೇದಾಟು ಯೋಜನೆ ಇನ್ನೂ ಜಾರಿಯ ಹಂತದಲ್ಲಿದೆ. ಕಳೆದ ಭಾರಿ ಕೆಆರ್‌ಎಸ್‌ನಲ್ಲಿ 30 ಟಿಎಂಸಿ ನೀರಿತ್ತು. ಈ ವರ್ಷ 10.9 ಟಿಎಂಸಿ ಅಡಿ ನೀರಿದೆ. ಮೇಕೆದಾಟು ಯೋಜನೆ ಬಗ್ಗೆ ಕೇಂದ್ರದ ನಾಲ್ವರು ಮಂತ್ರಿಗಳಿಗೆ ತಿಳಿಸಿದ್ದೇನೆ' ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿಗೆ ಶರಾವತಿ ನೀರು, ಯೋಜನೆ ವಿರುದ್ಧ ಪತ್ರ ಚಳವಳಿಬೆಂಗಳೂರಿಗೆ ಶರಾವತಿ ನೀರು, ಯೋಜನೆ ವಿರುದ್ಧ ಪತ್ರ ಚಳವಳಿ

'ಮೇಕೆದಾಟು ಯೋಜನೆ ಜಾರಿ ವಿಚಾರದಲ್ಲಿ ಕೇಂದ್ರ ಸಚಿವರು ಸಹಾಯ ಮಾಡಲಿದ್ದಾರೆ. ಯೋಜನೆಯ ಡಿಪಿಆರ್ ಅನ್ನು ಅವರಿಗೆ ತಲುಪಿಸಿದ್ದೇವೆ. ಜಲಶಕ್ತಿ ಕಾರ್ಯಾಗಾರದಲ್ಲೂ ಗಮನಕ್ಕೆ ತಂದಿದ್ದೇವೆ. ಯೋಜನೆ ವಿರೋಧಿಸುತ್ತಿರುವ ತಮಿಳುನಾಡಿನವರು ಸುಪ್ರೀಂಕೋರ್ಟ್ ತೀರ್ಪಿನಂತೆ ನಡೆದುಕೊಳ್ಳಬೇಕು' ಎಂದರು.

English summary
Sharavathi water to Bengaluru project in the discussion point said Karnataka Water resources minister D.K.Shivakumar. Various organizations of Shivamogga protesting against Sharavathi water to Bengaluru project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X