ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ವಿರುದ್ಧ ಡಿಕೆ ಶಿವಕುಮಾರ್ ದೂರು

|
Google Oneindia Kannada News

ಬೆಂಗಳೂರು, ಜು.19: ರಾಷ್ಟ್ರಪತಿ ಸ್ಥಾನಕ್ಕೆ ಜು.18ರಂದು ನಡೆದ ಚುನಾವಣೆಯಲ್ಲಿ ಚುನಾವಣೆಯಲ್ಲಿ ಬಿಜೆಪಿಯವರು ಎಲ್ಲ ಶಾಸಕರನ್ನು ಬೆಂಗಳೂರಿನ ಹೊಟೇಲ್‌ಗೆ ಕರೆಸಿ ಆಹಾರ, ಪಾನೀಯ, ಮನರಂಜನೆ ನೀಡಿದ್ದಾರೆ. ಇದು ಚುನಾವಣಾ ಆಮಿಷವಾಗಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯಬೇಕು. ಯಾವುದೇ ಆಮಿಷ, ಒತ್ತಡ ಹಾಕಬಾರದು. ಹಾಕಿದರೆ ಅದು ಅಪರಾಧವಾಗುತ್ತದೆ. ಇದು ಜನತಾ ಪ್ರಾತಿನಿದ್ಯ ಕಾಯ್ದೆ, ಐಪಿಸಿ ಸೆಕ್ಷನ್ ಹಾಗೂ ಅಧ್ಯಕ್ಷೀಯ ಚುನಾವಣಾ ಕಾಯ್ದೆಯಲ್ಲಿ ಪ್ರಸ್ತಾಪವಾಗಿದೆ.

ಚುನಾವಣೆ ನಡೆದ ದಿನದಂದು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ರಾಜ್ಯದ ಮುಖ್ಯಮಂತ್ರಿಗಳು, ಮಂತ್ರಿಗಳು, ಶಾಸಕರು ಚುನಾವಣಾ ಅಪರಾಧ ಮಾಡಿದ್ದು, ಅವರ ವಿರುದ್ಧ ಸೆಕ್ಷನ್ 171 ಬಿ, 171ಸಿ, 171 ಇ, 171ಎಫ್ ಪ್ರಕಾರ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

DK Shivakumar writes to Election Commission complaining against NDA President Candidate Draupadi Murmu

ಬಿಜೆಪಿಯವರು ಭಾನುವಾರ ಎಲ್ಲ ಶಾಸಕರನ್ನು ಬೆಂಗಳೂರಿನ ಹೊಟೇಲ್‌ಗೆ ಕರೆಸಿ ಆಹಾರ, ಪಾನೀಯ, ಮನರಂಜನೆ ನೀಡಿದ್ದಾರೆ. ಇದೆಲ್ಲದರ ವೆಚ್ಚವನ್ನು ಮುಖ್ಯಮಂತ್ರಿ ಹಾಗೂ ಬಿಜೆಪಿ ವಹಿಸಿಕೊಂಡಿದ್ದು, ಅವರಿಗೆ ಇದೇ ರೀತಿ ಮತದಾನ ಮಾಡಬೇಕು ಎಂದು ತರಬೇತಿ ನೀಡಲಾಗಿದೆ. ಜತೆಗೆ ಅವರನ್ನು ಕರೆದೊಯ್ಯಲು ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಗ್ರಾಮ ಪಂಚಾಯಿತಿ ಮತದಾರರನ್ನು ಬಸ್‌ನಲ್ಲಿ ಕೆರೆದೊಯ್ದಿದ್ದರೆ ಅವರ ವಿರುದ್ಧ ಕೇಸ್ ದಾಖಲಾಗುತ್ತಿತ್ತು. ಎನ್‌ಡಿಎ ಅಭ್ಯರ್ಥಿ ಸಮ್ಮತಿ ಆಧಾರದ ಮೇಲೆ ಇದನ್ನು ಮಾಡಿದ್ದು, ಈ ವಿಚಾರವಾಗಿ ಪ್ರಕರಣ ದಾಖಲಿಸಬೇಕು. ಹೀಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಅಲ್ಲದೆ ರಾಜ್ಯ ವಿಧಾನಸೌದದಲ್ಲಿ ನಡೆದ ಮತದಾನದಲ್ಲಿ ಎನ್‌ಡಿಎ ಅಭ್ಯರ್ಥಿಗೆ ದಾಖಲಾಗಿರುವ ಎಲ್ಲ ಮತಗಳನ್ನು ಅಸಿಂಧು ಎಂದು ಪರಿಗಣಿಸಬೇಕು. ಇಲ್ಲಿನ ಸಿಇಒ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಮ್ಮ ದೂರನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.

DK Shivakumar writes to Election Commission complaining against NDA President Candidate Draupadi Murmu

ಈ ರೀತಿ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ಚುನಾವಣಾ ಪ್ರಕ್ರಿಯೆಗೆ ಅಪಚಾರ ಎಸಗಲಾಗಿದೆ. ಸರ್ವಾಧಿಕಾರಿ ಮನಸ್ಥಿತಿ ಮೂಲಕ ಚುನಾವಣೆಯನ್ನು ತಮ್ಮ ಮೂಗಿನ ನೇರಕ್ಕೆ ತಿರುಗಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ.

ಬಿಜೆಪಿಯು ಶಾಸಕರನ್ನು ಕರೆಸಿ ಹೊಟೇಲ್‌ನಲ್ಲಿ ಇಟ್ಟಿರುವ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ. ಯಾವ ಹೊಟೇಲ್‌ನಲ್ಲಿ ಕೊಠಡಿ ಮಾಡಿದ್ದಾರೆ, ಅದರ ದಾಖಲೆಗಳನ್ನು ಪರಿಶೀಲಿಸಬಹುದು. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವಂತೆ ಮಾಧ್ಯಮಗಳು ಪ್ರಸಾರ ಮಾಡಿರುವ ಎಲ್ಲ ದಾಖಲೆಗಳನ್ನು ನಾವು ಸಲ್ಲಿಸಿದ್ದೇವೆ. ಅಧಿಕಾರಿಗಳು ಇದನ್ನು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸುತ್ತಾರೆ ಎಂದು ಭಾವಿಸಿದ್ದೇವೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

English summary
DK Shivakumar writes to Election Commission of India complaining against NDA President Candidate Draupadi Murmu. He has alleged all the MLAs were summoned to a 5 star hotel & provided luxurious rooms, food, liquor, etc in the guise of training MLAs to vote. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X