KPCC President: ಜೋರಾಯ್ತು ಕೆಪಿಸಿಸಿ ಅಧ್ಯಕ್ಷಗಿರಿ ಬದಲಾವಣೆ ಚರ್ಚೆ, ಯಾರೆಲ್ಲ ರೇಸಿನಲ್ಲಿದ್ದಾರೆ? ಸಚಿವರು ಹೇಳಿದ್ದೇನು!

ಬೆಂಗಳೂರು, ನವೆಂಬರ್ 28: ಕರ್ನಾಟಕ ರಾಜ್ಯ ಕಾಂಗ್ರೆಸ್ ಉಪ ಚುನಾವಣೆ ಗೆದ್ದ ಬೆನ್ನಲ್ಲೆ, ಸಂಪುಟದಲ್ಲಿ ಮೇಜರ್ ಸರ್ಜರಿ ಮಾಡಲು ಮುಂದಾಗಿದೆ. ಇದರ ಬೆನ್ನಲ್ಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ 05 ವರ್ಷ ಪೂರ್ಣಗೊಂಡಿದೆ. ಹೀಗಾಗಿ ಅವರ ಸ್ಥಾನ ಬದಲಾವಣೆ ಆಗುತ್ತಾ? ಕೆಪಿಸಿಸಿ ಅಧ್ಯಕ್ಷಗಿರಿಯಿಂದ ಕನಕಪುರ ಬಂಡೆ ಕೆಳಗೆ ಇಳಿಯುತ್ತಾರೆ? ಈ ಕುರಿತು ಸಚಿವರೇ ಹೇಳಿದ ಮಾತುಗಳು ಇಲ್ಲಿವೆ.

ಸಂಪುಟ ಪುನಾಚರಣೆ ನಡುವೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲಿದೆ ಎಂಬ ಚರ್ಚೆಗಳು ಜೋರಾಗಿವೆ. ಈಗಾಗಲೇ ಅವರ ಅವಧಿ ಮುಗಿದಿದೆ ಎಂದು ಸ್ವಪಕ್ಷದ ನಾಯಕರಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಮಾತನಾಡಿದ್ದಾರೆ. ಸಿಎಂ ಆಗುವ ಆಸೆಯಲ್ಲಿರುವ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಇಳಿಯುತ್ತಾರಾ? ಹೈಕಮಾಂಡ್ ಈ ಬಗ್ಗೆ ಯಾವ ನಿರ್ಧಾರ ಪ್ರಕಟಿಸಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿ ನಾಯಕರ ಭೇಟಿಗೆ ತೆರಳಿದ್ದಾರೆ.

DK Shivakumar Completes Five Years as KPCC President Will He Step Down from his Position

ಗಮನಿಸಬೇಕಾದ ವಿಷಯವೆಂದರೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಡೆಯಲು ಸಹ ಹಲವು ಮುಂದಿದ್ದಾರೆ. ಸಿಎಂ ಸಿದ್ದರಾಮಯ್ಯ ನವರ ಆಪ್ತ ಸತೀಶ್ ಜಾರಕಿಹೊಳಿ ಅವರು ಈ ರೇಸಿನಲ್ಲಿ ಮುಂದಿದ್ದಾರೆ. ಈ ಹಿಂದೆ ಅದೇ ಹುದ್ದೆ ನಿರ್ವಹಿಸಿದ್ದ ದಿನೇಶ್ ಗುಂಡೂರಾವ್ ಅವರು ಮತ್ತೊಮ್ಮೆ ಆ ಹುದ್ದೆಯ ಆಕಾಂಕ್ಷಿ ಎನ್ನಲಾಗುತ್ತಿದೆ. ಸದ್ಯ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಐದು ವರ್ಷದ ಅವಧಿ ಪೂರ್ಣಗೊಂಡಿದೆ. ಈ ಕುರಿತು ಕೆಂದ್ರ ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡೋಣ ಎಂದಿದ್ದಾರೆ.

ಕಾಂಗ್ರೆಸ್‌ ಶಾಸಕಾಂಗ ಸಭೆಯ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ವರಿಷ್ಠರ ಜೊತೆಗೆ ಜೊತೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ನಾಲ್ವರು ಎಂಎಲ್‌ಸಿಗಳ ನಾಮನಿರ್ದೇಶನ ಮತ್ತು ಸಂಪುಟ ಪುನಾರಚನೆ ಬಗ್ಗೆ ಮಹತ್ವದ ಚರ್ಚೆ ನಡೆಸುವ ನಿರೀಕ್ಷೆಗಳು ಇವೆ.

ಕರ್ನಾಟಕ ಉಪ ಚುನಾವಣೆ ಗೆಲುವಿನ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಲ ಹೆಚ್ಚಾಗಿದೆ. ಹೀಗಾಗಿ ಅವರ ಆಪ್ತರಿಗೆ ಕೆಪಿಸಿಸಿ ಮಹತ್ವದ ಸ್ಥಾನ ಹೋಗಲಿದೆ ಎಂದು ಹೇಳಲಾಗುತ್ತಿದೆ.

ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಸಿಎಂ ಸಿದ್ದರಾಮಯ್ಯನವರ ಆಪ್ತರಾದ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸುವುದು ಸುಲಭವಲ್ಲ. ಅದೊಂದು ಕಲ್ಲು ಮುಳ್ಳಿನಿಂದ ತುಂಬಿದ ಹಾದಿಯಾಗಿದೆ. ಸದ್ಯ ಸಂಪುಟ ಪುನಾರಚನೆ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ನಮ್ಮ ಮುಂದೆ ಇಲ್ಲ. ಆದರೆ ಆ ಬಗ್ಗೆ ಚರ್ಚೆ ಆಗಿದ್ದರು ನಿಜ. ಮುಂದಿನ ದಿನಗಳಲ್ಲಿ ಏನೆಲ್ಲ ಆಗಲಿದೆ ಎಂದು ನೋಡೋಣ ಎಂದು ಅವರು ಸಂಪುಟ ಪುನಾರಚನೆಗೆ ಸರ್ಕಾರ ಗಮನ ಹರಿಸಲಿದೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+