ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ನವೆಂಬರ್ 21 ರವರೆಗೆ ಅವಕಾಶ

ಬೆಂಗಳೂರು, ನವೆಂಬರ್‌ 15: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೆಯ ದಿನವಾಗಿತ್ತು. ಇದೀಗ ನವೆಂಬರ್ 21 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬಹುತೇಕ ಶಾಸಕರು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಹಲವು ಶಾಸಕರು ಮತ್ತು ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಅಲ್ಲದೇ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ 6 ದಿನಗಳ ಕಾಲ ಸಮಯ ವಿಸ್ತರಿಸಿದ್ದಾರೆ.

DK Shivakumar extends Application Last Date for ticket aspirants

ಕಾಂಗ್ರೆಸ್ ಪಕ್ಷವು ಟಿಕೆಟ್​ಗಾಗಿ ಅರ್ಜಿಗೆ 5,000 ರೂ. ಶುಲ್ಕ ನಿಗದಿಪಡಿಸಿದ್ದು,. ಅರ್ಜಿಯೊಂದಿಗೆ 2 ಲಕ್ಷ ರೂ. ಡಿಡಿ ನೀಡಬೇಕು ಎಂದು ಕಾಂಗ್ರೆಸ್ ಷರತ್ತು ವಿಧಿಸಿದೆ

ವಿಧಾನಸಭೆ ಚುನಾವಣೆಗೆ 224 ಕ್ಷೇತ್ರಗಳಿಗೆ ಈವರೆಗೆ 800 ಅರ್ಜಿಗಳು ಸಲ್ಲಿಕೆಯಾಗಿವೆ. ಒಟ್ಟು 1150 ಅರ್ಜಿಗಳನ್ನು ಆಕಾಂಕ್ಷಿಗಳು ಪಡೆದುಕೊಂಡಿದ್ದಾರೆ. ಈ ಪೈಕಿ ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ 14, ಬಳ್ಳಾರಿ ನಗರ 12, ಶಿವಮೊಗ್ಗ ನಗರ 17, ದೇವನಹಳ್ಳಿಗೆ 12 ಅರ್ಜಿಗಳು ಸಲ್ಲಿಕೆಯಾಗಿವೆ.

ಶಿವಾಜಿನಗರಕ್ಕೆ ನಲಪಾಡ್ ಅರ್ಜಿ

ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ನಲಪಾಡ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಶಿವಾಜಿನಗರದಲ್ಲಿ ಹಾಲಿ ಶಾಸಕರಾಗಿ ರಿಜ್ವಾನ್ ಹರ್ಷದ್ ಇದ್ದಾರೆ. ಹಾಗಿದ್ದರೂ ನಲಪಾಡ್ ಶಿವಾಜಿನಗರ ಮೇಲೆ ಕಣ್ಣು ಇಟ್ಟಿರುವುದು ಕುತೂಹಲಕ್ಕೆ ಕಾರಣವಾಗಿದೆ.

DK Shivakumar extends Application Last Date for ticket aspirants

ಇನ್ನೂ ಠೇವಣಿ ಬಾಂಡ್ ಸಲ್ಲಿಕೆ ಸಾಮಾನ್ಯ ಕಾರ್ಯಕರ್ತರಿಗೆ ತಲೆ ಬಿಸಿ ಉಂಟು ಮಾಡಿದೆ. ಪರಿಶಿಷ್ಟ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳು ಒಂದು ಲಕ್ಷ ರೂ, ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಗಳು 2 ಲಕ್ಷ ರೂ. ಠೇವಣಿ ಬಾಂಡ್ ನೀಡಬೇಕಿದೆ. ಕೆಲವು ಕ್ಷೇತ್ರಗಳಲ್ಲಿ ಐದಾರು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಕೆಲವು ಕಡೆ ಹಾಲಿ ಶಾಸಕರಿರುವ ಕ್ಷೇತ್ರಗಳಿಗೂ ಸ್ಥಳೀಯ ನಾಯಕರು ಅರ್ಜಿ ಹಾಕಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+