ಡಿ. ಕೆ. ಶಿವಕುಮಾರ್ ಅಭಿಮಾನಿಗಳಿಗೆ ಕುಟುಂಬದವರ ಮನವಿ

Recommended Video

      DK Shivakumar family has a special request | Oneindia Kannada

      ಬೆಂಗಳೂರು, ನವೆಂಬರ್ 12 : ಮಾಜಿ ಸಚಿವ, ಕನಕಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಿ. ಕೆ. ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಟುಂಬದ ಸದಸ್ಯರು ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿಯೊಂದನ್ನು ಮಾಡಿದ್ದಾರೆ.

      ಸೋಮವಾರ ತಡರಾತ್ರಿ ಡಿ. ಕೆ. ಶಿವಕುಮಾರ್ಗೆ ಎದೆ ನೋವು ಕಾಣಿಸಿಕೊಂಡಿತ್ತು. ಅವರನ್ನು ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ತದೊತ್ತಡ ಸಹ ಇದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

      ಡಿ. ಕೆ. ಶಿವಕುಮಾರ್‌ ಕಡ್ಡಾಯವಾಗಿ ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಸೂಚನೆ ನೀಡಿದ್ದಾರೆ. ಆದ್ದರಿಂದ, ಕುಟುಂಬ ಸದಸ್ಯರು ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಆಸ್ಪತ್ರೆಗೆ ಅವರನ್ನು ನೋಡಲು ಬರಬಾರದು ಎಂದು ಮನವಿ ಮಾಡಿದ್ದಾರೆ.

      DK Shivakumar

      ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಸುಮಾರು 48 ದಿನ ಜೈಲು ವಾಸ ಅನುಭವಿಸಿದ್ದ ಡಿ. ಕೆ. ಶಿವಕುಮಾರ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ದೆಹಲಿ ತಿಹಾರ್ ಜೈಲಿನಿಂದ ಅವರು ಬಿಡುಗಡೆಗೊಂಡ ಬಳಿಕ ಹಲವು ಗಣ್ಯರು ಅವರನ್ನು ಭೇಟಿಯಾಗುತ್ತಿದ್ದಾರೆ.

      ಡಿ. ಕೆ. ಶಿವಕುಮಾರ್ ನಿವಾಸಕ್ಕೆ ಅಭಿಮಾನಿಗಳು, ಕಾರ್ಯಕರ್ತರು, ಗಣ್ಯರು ಪ್ರತಿದಿನ ಆಗಮಿಸುತ್ತಿದ್ದಾರೆ. ಆದ್ದರಿಂದ, ಡಿ. ಕೆ. ಶಿವಕುಮಾರ್ ಕುಟುಂಬ ಸದಸ್ಯರು ಮೂರು ದಿನ ಯಾರೂ ಭೇಟಿಗೆ ಆಗಮಿಸಬಾರದು ಎಂದು ಮನವಿ ಮಾಡಿದ್ದಾರೆ.

      ನವೆಂಬರ್ 1ರಂದು ರಕ್ತದೊತ್ತಡ, ಬೆನ್ನು ನೋವಿನ ಕಾರಣದಿಂದಾಗಿ ಡಿ. ಕೆ. ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಅವರು ಡಿಸ್ಚಾರ್ಜ್ ಆಗಿದ್ದರು. ವೈದ್ಯರು ಮೂರು ವಾರಗಳ ವಿಶ್ರಾಂತಿ ಪಡೆಯಲು ಸೂಚಿಸಿದ್ದರು.

      ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಡಿ. ಕೆ. ಶಿವಕುಮಾರ್ ಮಂಡ್ಯ, ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದರು. ಬಳಿಕ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಗಳಲ್ಲಿಯೂ ಪಾಲ್ಗೊಂಡಿದ್ದರು.

      ಡಿ. ಕೆ. ಶಿವಕುಮಾರ್ ಭೇಟಿಯಾಗಲು ಸದಾಶಿವ ನಗರದ ನಿವಾಸಕ್ಕೆ ಅಭಿಮಾನಿಗಳು, ಕಾರ್ಯರ್ತರು ಆಗಮಿಸುತ್ತಲೇ ಇದ್ದಾರೆ. ಈಗ ಅವರು ಕಡ್ಡಾಯವಾಗಿ ವಿಶ್ರಾಂತಿ ಪಡೆಯಬೇಕಿದೆ. ಆದ್ದರಿಂದ, ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+