DK Shivakumar On Narendra Modi: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಎಕ್ಸ್‌ಪೈರ್; ಇದು ಸೋಲಿನ ಹತಾಶೆ ಎಂದ ಡಿ.ಕೆ.ಶಿವಕುಮಾರ್
ಬೆಂಗಳೂರು,ಏಪ್ರಿಲ್27: ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲು ಅನುಭವಿಸಲಿದೆ ಎಂದು ಅರಿತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹತಾಶರಾಗಿ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳಿಗೆ ಬಿಜೆಪಿ ಭರವಸೆಗಳ ಬಗ್ಗೆ ಗೊತ್ತಿಲ್ಲವೇ. ನಾವು ಬಿಜೆಪಿಯವರಂತೆ ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿಲ್ಲ. ಬಿಜೆಪಿ ಪ್ರಣಾಳಿಕೆ ತೆಗೆದು ನೋಡಿ. ಅವರು 1 ಲಕ್ಷದವರೆಗೂ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ರೈತರ ಪಂಪ್ ಸೆಟ್ ಗೆ ನೀಡುವ ವಿದ್ಯತ್ ಅನ್ನು 7 ತಾಸಿನಿಂದ 10 ತಾಸಿಗೆ ಹೆಚ್ಚಳ ಮಾಡುವುದಾಗಿ ಹೇಳಿದ್ದರು.

ಜನವರಿ 16ರಂದು ಬೊಮ್ಮಾಯಿ ಅವರ ಸರ್ಕಾರ ಪತ್ರಿಕೆಗಳಿಗೆ ಕೊಟ್ಟಿರುವ ಜಾಹೀರಾತು ನೋಡಿ. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವ ಭರವಸೆ ನೀಡಿದ್ದಾರೆ. ಇಂದು ಪ್ರಧಾನಮಂತ್ರಿಗಳು ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡಿರುವುದು ಬಹಳ ಸಂತೋಷವಾಗಿದೆ. ನಮ್ಮ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮೋದಿ ಅವರು ತಮ್ಮ ಸರ್ಕಾರ ಜನರ ವಿಶ್ವಾಗಳಿಸಲು ವಿಫಲವಾಗಿದೆ ಎಂದು ಒಪ್ಪಿಕೊಂಡಿದ್ದಾರೆ.
ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಬೆಲೆ ಏರಿಕೆ ನಿಯಂತ್ರಿಸಲು ವಿಫಲವಾಗಿವೆ. ಅವರು 2014ರ ಚುನಾವಣೆ ಸಮಯದಲ್ಲಿ ದೇಶದ ಮತದಾರರಿಗೆ ಮತದಾನ ಮಾಡುವ ಮುನ್ನ ಅಡುಗೆ ಅನಿಲ ಸಿಲಿಂಡರ್ ಗೆ ನಮಿಸಿ ಮತ ಹಾಕಿ ಎಂದಿದ್ದರು. ಈಗ ಅದನ್ನೇ ಮಾಡಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಿದ್ದೇವೆ.
ಕಾಂಗ್ರೆಸ್ ಪಕ್ಷದ ನಾಲ್ಕು ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷಿ, ಅನ್ನಭಾಗ್ಯ, ಯುವನಿಧಿ ಯೋಜನೆ ಜಾರಿ ಮಾಡುವುದು ನಿಶ್ಚಿತ. ಮೇ 10ರಂದು ಕೇವಲ ಮತದಾನದ ದಿನವಲ್ಲ, ರಾಜ್ಯದ ಭವಿಷ್ಯ ಬದಲಿಸುವ ದಿನ, ಈ ಗ್ಯಾರಂಟಿ ಯೋಜನೆಗಳಿಗೆ ಮುದ್ರೆ ಹಾಕುವ ದಿನ. ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿ ಈ ಯೋಜನೆ ಜಾರಿ ಮಾಡುತ್ತೇವೆ. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಅವರು ಆತಂಕಪಡುವ ಅಗತ್ಯವಿಲ್ಲ ಎಂದರು.
ಲೋಕಸಭೆ ಚುನಾವಮೆಯಲ್ಲಿ ನನಗೆ ಕಣ್ಣೀರು ಹಾಕಿಸಿದವರಿಗೆ ನೀವು ಕಣ್ಣೀರು ಹಾಕಿಸಿ ಎಂಬ ದೇವೇಗೌಡರ ಹೇಳಿಕೆ ಕುರಿತು ಮಾತನಾಡಿ, ಅವರು ಹಿರಿಯರು, ಅವರ ಅನುಭವ, ಚಾಣಕ್ಯತೆ ಜತೆ ನಾವು ಸ್ಪರ್ಧೆ ಮಾಡಲು ಆಗುವುದಿಲ್ಲ. ಅವರಿಗೆ ಒಳ್ಳೆಯದಾಗಲಿ, ಅವರ ಆರೋಗ್ಯ ಉತ್ತಮವಾಗಿರಲಿ, ಇಷ್ಟು ಇಳಿವಯಸ್ಸಾದರೂ ಅವರು ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರ ಛಲ, ಹೋರಾಟವನ್ನು ನಾವು ನೋಡಿ ಕಲಿಯಬೇಕಿದೆ ಎಂದು ತಿಳಿಸಿದರು.
ಪಕ್ಷದ ಬಂಡಾಯ ಅಭ್ಯರ್ಥಿಗಳಿಗೆ ಬರೆದಿರುವ ಪತ್ರದ ಕುರಿತು ಮಾತನಾಡಿ, ನಾನು ಈಗಲೂ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಗಳಿಗೆ ಮುಂದಿನ ಎರಡು ಮೂರು ದಿನಗಳಲ್ಲಿ ಚುನಾವಣೆ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದ್ದೇನೆ. ಅವರು ಮಾಡದಿದ್ದರೆ, ಪಕ್ಷದ ಚೌಕಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಲಬೇಕೋ ಕೈಗೊಳ್ಳುತ್ತೇವೆ ಎಂದರು.
ಮೀಸಲಾತಿ ವಿಚಾರವಾಗಿ ಮಾತನಾಡಿ, ಮೀಸಲಾತಿ ಎಲ್ಲಿದೆ? ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅವರು ತಮ್ಮ ಆದೇಶಕ್ಕೆ ತಡೆ ನೀಡಿದ್ದು, ಮೀಸಲಾತಿ ಹೆಸರಿನಲ್ಲಿ ಜನರಿಗೆ ಚಾಕಲೇಟ್ ನೀಡಿ ಮೋಸ ಮಾಡಿದ್ದಾರೆ ಎಂದು ತಿಳಿಸಿದರು.












Click it and Unblock the Notifications