ಸುಪ್ರೀಂಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ ಡಿ. ಕೆ. ಶಿವಕುಮಾರ್

Recommended Video

      DK Shivakumar files caveat in supreme court | Oneindia Kannada

      ಬೆಂಗಳೂರು, ಅಕ್ಟೋಬರ್ 31 : ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಸುಪ್ರೀಂಕೋರ್ಟ್‌ಗೆ ಕೇವಿಯಟ್ ಸಲ್ಲಿಸಿದ್ದಾರೆ. ಜಾರಿ ನಿರ್ದೇಶನಾಲಯ ಅವರ ಜಾಮೀನು ರದ್ದು ಮಾಡಬೇಕು ಎಂದು ಈಗಾಗಲೇ ಅರ್ಜಿ ಸಲ್ಲಿಕೆ ಮಾಡಿದೆ.

      ಜಾರಿ ನಿರ್ದೇಶನಾಲಯ ಜಾಮೀನು ವಿರೋಧಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದ ಆಲಿಸದೇ ಯಾವುದೇ ತೀರ್ಪು ನೀಡಬಾರದು ಎಂದು ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ಕೇವಿಯಟ್ ಸಲ್ಲಿಸಿದ್ದಾರೆ.

      ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್ ಬಂಧಿಸಿತ್ತು. ದೆಹಲಿ ಹೈಕೋರ್ಟ್ ಅಕ್ಟೋಬರ್ 23ರಂದು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ತಿಹಾರ್ ಜೈಲಿನಲ್ಲಿದ್ದ ಅವರು ಬಿಡುಗಡೆಗೊಂಡಿದ್ದರು.

      DK Shivakumar Files Caveat In Supreme Court

      ಅಕ್ಟೋಬರ್ 25ರಂದು ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ಗೆ ಷರತ್ತುಬದ್ಧ ಜಾಮೀನು ನೀಡಿರುವ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಜಾಮೀನನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿತ್ತು.

      ಸುಪ್ರೀಂಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ? ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಆದರೆ, ಅದಕ್ಕೂ ಮೊದಲೇ ಡಿ. ಕೆ. ಶಿವಕುಮಾರ್ ಕೇವಿಯಟ್ ಸಲ್ಲಿಸಿದ್ದಾರೆ.

      ಡಿ. ಕೆ. ಶಿವಕುಮಾರ್ ಪ್ರಭಾವಿ ರಾಜಕೀಯ ನಾಯಕರಾಗಿದ್ದು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ, ಜಾಮೀನನ್ನು ರದ್ದುಗೊಳಿಸಬೇಕು ಎಂದು ಜಾರಿ ನಿರ್ದೇಶನಾಲಯ ಅರ್ಜಿಯಲ್ಲಿ ಮನವಿ ಮಾಡಿದೆ.

      ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ. ಕೆ. ಶಿವಕುಮಾರ್ 48 ದಿನಗಳ ಕಾಲ ಜೈಲಿನಲ್ಲಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಕೆ. ಸುರೇಶ್, ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾರನ್ನು ಸಹ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+