ಮತ್ತೆ ಹೈಕೋರ್ಟ್‌ ಮೊರೆ ಹೋದ ಮಾಜಿ ಸಚಿವ ಡಿಕೆ ಶಿವಕುಮಾರ್

Recommended Video

      DK Shivakumar : ಮತ್ತೊಮ್ಮೆ ಹೈ ಕೋರ್ಟ್ ಮೊರೆ ಹೋದ ಡಿಕೆಶಿ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 10 : ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಮತ್ತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರನ್ನು ಇಡಿ ಬಂಧಿಸಿದ್ದು, ಸೆ.13ರ ತನಕ ಇಡಿ ವಶಕ್ಕೆ ನ್ಯಾಯಾಲಯ ನೀಡಿದೆ.

      ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸುವಂತೆ ಡಿ. ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈಗ ವಿಭಾಗೀಯ ಪೀಠದ ಮುಂದೆ ಅರ್ಜಿ ಹಾಕಿದ್ದಾರೆ.

      ತಮ್ಮ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ಅರ್ಜಿಯಲ್ಲಿ ಡಿ. ಕೆ. ಶಿವಕುಮಾರ್ ಪರ ವಕೀಲರು ಮನವಿ ಮಾಡಿದ್ದರು. ಹೈಕೋರ್ಟ್ ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ಸೆ. 11ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

      DK Shivakumar

      ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರಿದ್ದ ವಿಭಾಗೀಯ ಪೀಠ ಅರ್ಜಿ ವಿಚಾರಣೆಗೆ ಒಪ್ಪಿಗೆ ಕೊಟ್ಟಿದೆ. ಡಿ. ಕೆ. ಶಿವಕುಮಾರ್ ಈಗಾಗಲೇ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು ಸೆ. 13ರಂದು ಅವರನ್ನು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

      ಜಾಮೀನಿಗಾಗಿ ಪ್ರಯತ್ನ : ಸೆ.13ರ ಶುಕ್ರವಾರ ಇಡಿ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಡಿ. ಕೆ. ಶಿವಕುಮಾರ್ ಪ್ರಯತ್ನ ನಡೆಸಲಿದ್ದಾರೆ. ಒಂದು ವೇಳೆ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ಜೈಲು ಸೇರಬೇಕಾಗುತ್ತದೆ. ಆದ್ದರಿಂದ, ಜಾಮೀನು ಪಡೆಯಲು ಪ್ರಯತ್ನ ನಡೆಸಲಿದ್ದಾರೆ.

      4 ದಿನಗಳ ಕಾಲ ಸತತವಾಗಿ ಡಿ. ಕೆ. ಶಿವಕುಮಾರ್ ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳನ್ನು 5ನೇ ದಿನ ಅವರನ್ನು ಬಂಧಿಸಿದ್ದರು. ಇಡಿ ವಿಶೇಷ ನ್ಯಾಯಾಲಯ ಸೆ. 13ರ ತನಕ ಅವರನ್ನು ಇಡಿ ವಶಕ್ಕೆ ನೀಡಿದ್ದು, ನವದೆಹಲಿಯ ಇಡಿ ಕಚೇರಿಯಲ್ಲಿ ಪ್ರತಿದಿನ ವಿಚಾರಣೆ ನಡೆಯುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+