Government Employees: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಜುಲೈ 21: ಸರ್ಕಾರಿ ನೌಕರರಿಗೆ OPS ಜಾರಿಗೆ ಬಗ್ಗೆ ಸಮಿತಿ ವರದಿ ಬಂದ ಬಳಿಕ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಆ ಮೂಲಕ ಒಪಿಎಸ್‌ ಜಾತಿ ನಿರೀಕ್ಷೆಯಲ್ಲಿದ್ದಂತ ರಾಜ್ಯ ಸರ್ಕಾರಿ ನೌಕರರಿಗರ ಗುಡ್‌ ನ್ಯೂಸ್‌ ನೀಡಲಿದೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು.

ನನ್ನನ್ನು ಭೇಟಿ ಮಾಡಲು ಪ್ರತಿದಿನವೂ ಶಾಸಕರು ಬರುತ್ತಿರುತ್ತಾರೆ. ಪ್ರತಿದಿನವನ್ನೂ ಶಾಸಕರಿಗೆ ಮೀಸಲಾಗಿ ಇಟ್ಟಿದ್ದೇನೆ. ಬೆಂಗಳೂರನ್ನು ಐದು ಹೋಳು ಮಾಡಿ ಓಳು ಬಿಡುತ್ತಿದ್ದಾರೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ಬಗ್ಗೆ ಈಗಾಗಲೇ ಸದನದಲ್ಲಿ ಮಾತನಾಡಿದ್ದೇವೆ. ಎಲ್ಲರ ಬಳಿಯೂ ಇದರ ಬಗ್ಗೆ ಮಾತನಾಡಿಯೇ ತೀರ್ಮಾನ ತೆಗೆದುಕೊಂಡಿದ್ದೇವೆ. ಆದರೂ ಅವರು ರಾಜಕೀಯ ಮಾಡಬೇಕಲ್ಲ ಎಂದು ಮಾತನಾಡುತ್ತಿದ್ದಾರೆ ಎಂದರು.

DK Shivakumar Gave Great Good News To Government Employees

ಬಿಬಿಎಂಪಿ, ವಿದ್ಯುತ್ ಸಂಪರ್ಕ, ಬಿ ಖಾತಾ ವಿಚಾರಗಳ ಬಗ್ಗೆ ಒಂದಷ್ಟು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತೇನೆ. ನಾನು ಯಾವುದಕ್ಕೂ ಉತ್ತರ ನೀಡದೆ ಓಡಿ ಹೋಗುವುದಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಒಂದಷ್ಟು ತೀರ್ಮಾನ ಮಾಡುತ್ತಿದ್ದೇವೆ. ಎಲ್ಲದಕ್ಕೂ ಉತ್ತರ ನೀಡುತ್ತೇವೆ ಎಂದರು. ಧರ್ಮಸ್ಥಳ ಸರಣಿ ಸಾವುಗಳ ಬಗ್ಗೆ ಎಸ್ ಐಟಿ ರಚನೆ ಮಾಡಿರುವ ಬಗ್ಗೆ ನನಗೆ ಇನ್ನೂ ಸರಿಯಾದ ಮಾಹಿತಿ ಲಭ್ಯವಿಲ್ಲ. ಗೃಹಸಚಿವರ ಬಳಿ ಇದರ ಬಗ್ಗೆ ಮಾತನಾಡಿ ಮಾಹಿತಿ ಪಡೆಯುತ್ತೇನೆ. ಎಲ್ಲ ವಿಚಾರಗಳಿಗೂ ಬಾಯಿ ಹಾಕುವುದು ಸೂಕ್ತವಲ್ಲ ಎಂದರು.

ಮೈಸೂರು ಕಾರ್ಯಕ್ರಮದಲ್ಲಿ ಸಿಎಂ ನಿಮಗೆ ಅಪಮಾನ ಮಾಡಿದರು ಎನ್ನುವ ವರದಿಗಳ ಬಗ್ಗೆ ಮಾತನಾಡಿ, ಈಗಾಗಲೇ ಇದರ ಬಗ್ಗೆ ಶನಿವಾರ ಹಾಗೂ ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿಗಳೇ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ನನ್ನ ಕೆಲಸ ನಾನು‌ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಎರಡು ದಿನ ಕನಕಪುರ ಕ್ಷೇತ್ರದ ಜನರಿಗೆ ನಾನು ಸಮಯ ನೀಡಲು ಆಗುತ್ತಿಲ್ಲ. ಅದಕ್ಕೆ ಎರಡು ದಿನ ಅಲ್ಲಿಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತೇನೆ ಎಂದು ಹೇಳಿದರು.

ಜಿಬಿಎ ಅಡಿಯಲ್ಲಿ 5 ಪಾಲಿಕೆ ಮಾಡುವುದನ್ನು ಪ್ರಶ್ನಿಸಿ ಪಿಐಎಲ್ ಅರ್ಜಿ ಹಾಕಿರುವ ಬಗ್ಗೆ ಮಾತನಾಡಿ, ಯಾರು ಬೇಕಾದರೂ ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು. ಇದರಲ್ಲಿ ತಪ್ಪೇನಿಲ್ಲ ಇದು ಅವರ ಹಕ್ಕು. ಅದನ್ನು ಮೊಟಕುಗೊಳಿಸಲು ಆಗುವುದಿಲ್ಲ. ನಾವು ಏನಾದರೂ ತಪ್ಪು ಮಾಡಿದ್ದಾರೆ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಬೆಂಗಳೂರಿನಲ್ಲಿ ಐದು ಪಾಲಿಕೆ ಮಾಡಲು ಸರ್ಕಾರ ಬದ್ಧವಾಗಿದೆ. ನಾನು ಬಿಜೆಪಿ ನಾಯಕರ ಸಭೆ ಕರೆದು ಚರ್ಚಿಸಿ ಸಲಹೆಗಳನ್ನು ಸ್ವೀಕರಿಸಿದ್ದೇನೆ. ಜಂಟಿ ಸದನ ಸಮಿತಿ ರಚಿಸಿ ಚರ್ಚೆ ಮಾಡಲಾಗಿದೆ. ಈಗಲೂ ಅವರು ತಮ್ಮ ಆಕ್ಷೇಪಣೆ ಸಲ್ಲಿಸಬಹುದು. ಅವರು ರಾಜಕೀಯ ಕಾರಣಕ್ಕೆ ಧ್ವನಿ ಎತ್ತುತ್ತಿದ್ದಾರೆ. ಬೆಂಗಳೂರಿನ ಹಿತಕ್ಕಾಗಿ ಐದು ಪಾಲಿಕೆ ಮಾಡಲು ಮುಂದಾಗಿದ್ದೇವೆ. ಮುಂದಿನ ಒಂದೆರಡು ದಿನಗಳಲ್ಲಿ ಮಾಧ್ಯಮಗೋಷ್ಠಿ ಕರೆದು ಎ ಖಾತಾ, ಬಿ ಖಾತಾ ವಿಚಾರ, ಇ-ಖಾತಾ ಅಭಿಯಾನ, ತೆರಿಗೆ ಹಾಗೂ ಪಾಲಿಕೆ ವಿಚಾರವಾಗಿ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+