ಮಂಡ್ಯ ಜಿಲ್ಲೆಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಜೂನ್ 30: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ. ಮೂರು ವರ್ಷಗಳಿಗೊಮ್ಮೆ ನೀರು ಹರಿವಿನ ಪ್ರಮಾಣ ಕಡಿಮೆಯಾಗುವುದನ್ನು ಅಂಕಿಅಂಶಗಳನ್ನು ನೋಡಿದರೆ ತಿಳಿಯುತ್ತದೆ ಎಂದರು.

ನಾನು ಭಕ್ತಿ, ವಿನಮ್ರತೆಯಿಂದ ಕಾವೇರಿ ಆರತಿ ವಿರೋಧ ಮಾಡುವವರಲ್ಲಿ ಅಡ್ಡಿ ಪಡಿಸಬೇಡಿ. ವಿರೋಧ ಮಾಡಲೇಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಸಹಕಾರ ನೀಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ನೀರಿಗೆ ಜಾತಿ, ಧರ್ಮವಿಲ್ಲ. ನೀರನ್ನು ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ. ಈ ರಾಜ್ಯದ ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಅನೇಕ ಅನುದಾನ ನೀಡುತ್ತಿದೆ. 19,700 ಕೋಟಿ ಹಣವನ್ನು ರೈತರಿಗೆ ನೀಡುವ ಉಚಿತ ವಿದ್ಯುಚ್ಛಕ್ತಿಗಾಗಿ ನಮ್ಮ ಸರ್ಕಾರ ನೀಡುತ್ತಿದೆ ಎಂದರು.
ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ? ಯಾರದ್ದಾದರೂ ಅನುಮತಿ ಬೇಕೆ? ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ ಎಂದು ಹೇಳಿದರು.
ಭಕ್ತ ಹಾಗೂ ಭಗವಂತನಿಗೆ ವ್ಯಾವಹಾರ ನಡೆಯುವ ಸ್ಥಳ ದೇವಸ್ಥಾನ. ಇಲ್ಲಿ ಜನ ಕುಳಿತುಕೊಳ್ಳಲು ಸ್ಥಳ ಮಾಡಲಾಗುತ್ತಿದೆ. ನೀವು ಏಕೆ ಮನೆಯಲ್ಲಿ ಪ್ರತಿದಿನ ದೇವರ ಪೂಜೆ ಮಾಡುತ್ತೀರಿ. ದೇವರು ಇಲ್ಲದಿದ್ದರೂ ಸೂರ್ಯನಿಗೆ ಏಕೆ ನಮಸ್ಕಾರ ಮಾಡುತ್ತೀರಿ. ನನ್ನ ಮಾತುಗಳು ನೇರ, ದಿಟ್ಟವಾಗಿ ಇರಬಹುದು ಯಾರೂ ಸಹ ಅನ್ಯತಾ ಭಾವಿಸಬಾರದು ಎಂದು ಹೇಳಿದರು.
ಬೃಂದಾವನ ಉದ್ಯಾನವನ್ನು ಅತ್ಯಂತ ಹೆಚ್ಚು ಆಕರ್ಷಣೀಯಗೊಳಿಸುವುದು ನಮ್ಮ ಉದ್ದೇಶ. ಮೈಸೂರು ದಸರಾ ರೀತಿ ಅತ್ಯುತ್ತಮ ದೀಪಾಲಂಕಾರ ಮಾಡಲಾಗಿದೆ. ಅತ್ಯುತ್ತಮ ಕಾರಂಜಿಗಳನ್ನು ತರಿಸಲಾಗಿದೆ. ವಿದೇಶಗಳಿಂದ ಅಲಂಕಾರಿಕ ಸಸ್ಯಗಳನ್ನು ತರಿಸಲಾಗಿದೆ. ನಮ್ಮ ಮುಖ್ಯಮಂತ್ರಿಗಳು ಇದನ್ನು ಅತ್ಯುತ್ತಮ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಸಂಕಲ್ಪ ಮಾಡಿದ್ದಾರೆ. ಇದಕ್ಕೆ ಖಾಸಗಿಯವರು ಬಂಡವಾಳ ಹೂಡಬಹುದು ಎಂದು ಆಹ್ವಾನ ಮಾಡಿದ್ದೇವೆ ಎಂದು ಹೇಳಿದರು.
ರಾಜ್ಯದ ಅಣೆಕಟ್ಟುಗಳ ಗೇಟ್ ಗಳನ್ನು ದುರಸ್ತಿಗೊಳಿಸಲು ಈಗಾಗಲೇ ತಾಂತ್ರಿಕ ಸಮಿತಿಯನ್ನು ರಚನೆ ಮಾಡಿದ್ದೇವೆ. ಆ ಸಮಿತಿಯಿಂದ ವರದಿ ತೆಗೆದುಕೊಂಡು ಹಂತ, ಹಂತವಾಗಿ ರಾಜ್ಯದ ಅಣೆಕಟ್ಟುಗಳ ಗೇಟ್ ದುರಸ್ತಿಯನ್ನು ಮಾಡಬೇಕು ಎಂದು ಮುಂದಾಗಿದ್ದೇವೆ. ಕೃಷ್ಣ ಟ್ರಿಬ್ಯೂನಲ್ ಅವಾರ್ಡ್ ಗೆ ಒಮ್ಮೆ ಮಹಾರಾಷ್ಟ್ರದವರು ಅಡ್ಡಗಾಲು ಹಾಕಿದ್ದರು. ಈಗ ಆಂಧ್ರ ಪ್ರದೇಶದವರು ಇದನ್ನು ಮುಂದೂಡಿಸಿದ್ದಾರೆ ಎಂದರು.
ಬಜೆಟ್ ಮಂಡಿಸಿ ಒಂದು ತಿಂಗಳಾಗಿದೆ ತಾಳ್ಮೆಯಿಂದ ಇದ್ದರೆ ಅನುದಾನ ಬಂದೇ ಬರುತ್ತದೆ. ನಾವು ಕೊಟ್ಟ ಮಾತನ್ನು ತಪ್ಪುವವರಲ್ಲ. ಆರ್ಥಿಕ ಇಲಾಖೆಯವರು ಆರ್ಥಿಕ ಶಿಸ್ತಿಗಾಗಿ ಹಂತ, ಹಂತವಾಗಿ ಹಣ ಬಿಡುಗಡೆ ಮಾಡುತ್ತಾರೆ. ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಕಾಲದಲ್ಲಿ ಬಜೆಟ್ ಗಿಂತ ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ. ಅದಕ್ಕಾಗಿ ಗುತ್ತಿಗೆದಾರರು ಸ್ವಲ್ಪ ತಾಳ್ಮೆಯಿಂದ ವರ್ತನೆ ಮಾಡಬೇಕು. ನಮ್ಮನ್ನು ಟೀಕೆ ಮಾಡುವವರಿಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕು. ಮಂಡ್ಯ, ಮೈಸೂರು, ಬೆಂಗಳೂರು ಭಾಗಕ್ಕೆ ಅವರ ಕೊಡುಗೆ ಏನು ಎಂದು ಕೇಳಬೇಕು ಎಂದು ಹೇಳಿದರು.
ತುಂಗಾಭದ್ರಾ ಅಣೆಕಟ್ಟಿನ ಗೇಟ್ ಒಡೆದು ಹೋದಾಗ ಪ್ರತಿ ಪಕ್ಷಗಳು ಇಲ್ಲ ಸಲ್ಲದ ಟೀಕೆ ಮಾಡಿದರು. ಇಡೀ ಡ್ಯಾಂ ಒಡೆದು ಹೋಗುತ್ತದೆ ಎಂದು ಆರೋಪ ಮಾಡಿದರು. ನಾವು ತಕ್ಷಣ ತೀರ್ಮಾನ ತೆಗೆದುಕೊಂಡು ಆ ಗೇಟ್ ಅನ್ನು ದುರಸ್ತಿಗೊಳಿಸಿ ರೈತರ ಎರಡನೇ ಬೆಳೆಗೂ ನೀರು ನೀಡಿದ ಇತಿಹಾಸ ಈ ಕಾಂಗ್ರೆಸ್ ಸರ್ಕಾರಕ್ಕಿದೆ. ಆ ಗೇಟ್ ದುರಸ್ತಿಗೆ ದುಡಿದ ಪ್ರತಿಯೊಬ್ಬ ಕಾರ್ಮಿಕನಿಗೂ ನಾನು ಹಾಗೂ ಸಿದ್ದರಾಮಯ್ಯ ಅವರು ಸನ್ಮಾನಿಸಿದೆವು. ಮುಖ್ಯ ಎಂಜಿನಿಯರ್ ಒಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿದೆವು ಎಂದು ಹೇಳಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications