Gruha Lakshmi Scheme: 24 ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆ: ಬಿಗ್ ಅಪ್‌ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಬೆಳಗಾವಿ, ಡಿಸೆಂಬರ್ 19: ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸದನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಬಿಜೆಪಿ ಆರೋಪ ಮಾಡಿದ್ದು, ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಪರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬ್ಯಾಟ್ ಬೀಸಿದ್ದಾರೆ. ಅಲ್ಲದೇ 23 ನೇ ಕಂತಿನ ಹಣ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಯ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು, 24 ಕಂತಿನ ಹಣ ಬಿಡುಗಡೆ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಕಳೆದ 24 ತಿಂಗಳಿನಿಂದ ಗೃಹಲಕ್ಷ್ಮಿ ಹಣವನ್ನು ಈ ರಾಜ್ಯದ ಮಹಿಳೆಯರಿಗೆ ನೀಡಿದ್ದೇವೆ. ಅವರು ಯಾವ ತಪ್ಪು ಮಾಹಿತಿ ನೀಡಿದ್ದಾರೆ? ಆರ್ಥಿಕ ಇಲಾಖೆಯಿಂದ ಹಣ ಬಿಡುಗಡೆಯಾಗಿದೆ. ಅದನ್ನು ಮಹಿಳೆಯರಿಗೆ ನೀಡಲಾಗುತ್ತದೆ. ಇದರಲ್ಲಿ ಯಾವುದೇ ತಪ್ಪು ಮಾಹಿತಿಯಿಲ್ಲ. ಆದಷ್ಟು ಶೀಘ್ರದಲ್ಲಿ 24 ಕಂತಿನ ಹಣ ಬಿಡುಗಡೆಯಾಗಲಿದೆ ಎಂದು ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ನಾವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿರುವ ವಿಚಾರ ಚರ್ಚೆ ತೆಗೆದುಕೊಳ್ಳುತ್ತೇವೆ ಎಂದು ಪ್ರತಿಪಕ್ಷಗಳು ದಾರಿ ತಪ್ಪಿಸಲು ಗೃಹಲಕ್ಷ್ಮಿ ಯೋಜನೆಯ ವಿಚಾರ ಎತ್ತುಕೊಂಡಿದ್ದಾರೆ ಎಂದರು. ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಅವರ ತಂದೆ ಹೆಸರು ಇಳಿಯಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು.
ರಾಜ್ಯದ ಖಜಾನೆ ಖಾಲಿ ಮಾಡಿ ಹೈಕಮಾಂಡ್ ಅನ್ನು ತೃಪ್ತಿಪಡಿಸಲಾಗುತ್ತಿದೆ, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎನ್ನುವ ವಿಜಯೇಂದ್ರ ಅವರ ಆರೋಪದ ಬಗ್ಗೆ ಕೇಳಿದಾಗ, "ಯಾವ ಖಜಾನೆ ಖಾಲಿಯಾಗಿದೆ? ಕಲೆಕ್ಷನ್, ಅವರ ಅಕೌಂಟ್ ಗಳು, ವಹಿವಾಟುಗಳನ್ನು ಬಿಚ್ಚಿಡಬೇಕೆ? ಎಂದರು. ಅವರು ವಿಧಾನಸಭೆಯಲ್ಲಿ ಮಾತನಾಡಿದರೆ ಏನೇನು ಮಾತನಾಡಬೇಕು ಎಂದು ನನಗೂ ಗೊತ್ತಿದೆ. ಪಕ್ಷದ ಅಧ್ಯಕ್ಷರಾಗಿ ಇತಿಮಿತಿಯಿಂದ ಮಾತನಾಡಲಿ. ಮೊದಲು ವಿಧಾನಸಭೆಗೆ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಇರುವುದಲ್ಲ. ಇಲ್ಲಿ ಬಂದು ಮಾತನಾಡಲಿ. ವಿಜಯೇಂದ್ರ ಅವರಿಗೆ ಅನುಭವವಿಲ್ಲ. ಯಾವ ಖಜಾನೆ ಖಾಲಿಯಾಗಿದೆ? ಎಂದು ಕುಟುಕಿದರು.
ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಹೊರೆಯಾಗುತ್ತಿದ್ದರು ನಮ್ಮ ಸರ್ಕಾರ ರೈತರ ಪರವಾಗಿ ತೀರ್ಮಾನ ತೆಗೆದುಕೊಂಡಿದ್ದೇವೆ. ಕಬ್ಬು, ಮೆಕ್ಕೆಜೋಳದ ಬೆಲೆಗಳ ಬಗ್ಗೆ ಇದ್ದ ಸಮಸ್ಯೆಗಳನ್ನು ನಾವು ಬಗೆಹರಿಸಿದ್ದೇವೆ. ಸರ್ಕಾರ ರೈತಪರವಾಗಿ ತೆಗೆದುಕೊಂಡಿರುವ ನಿರ್ಧಾರವನ್ನು ರೈತರು ಗಮನದಲ್ಲಿಟ್ಟುಕೊಳ್ಳಬೇಕು ಎಂದುಪ್ರಾರ್ಥಿಸುತ್ತೇನೆ ಎಂದು ಹೇಳಿದರು. ಮುಖ್ಯಮಂತ್ರಿಯವರು ಹಾಗೂ ಕಂದಾಯ ಸಚಿವರು ಉತ್ತರ ಕರ್ನಾಟಕದ ವಿಚಾರವಾಗಿ ನಡೆದಿರುವ ಚರ್ಚೆಗಳಿಗೆ ಉತ್ತರ ನೀಡುತ್ತಾರೆ. ಈ ಭಾಗದ ನೀರಾವರಿ ಯೋಜನೆಗಳಾದ ಯುಕೆಪಿ, ಮಹದಾಯಿ ವಿಚಾರಗಳ ಬಗ್ಗೆ ಅವಕಾಶ ಸಿಕ್ಕರೆ ಉತ್ತರಿಸುತ್ತೇನೆ ಎಂದರು.
ಕೇಂದ್ರ ಸರ್ಕಾರ ಏಕೆ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡಿಲ್ಲ. ನರೇಗಾ ಅನುದಾನವನ್ನೂ ಇದುವರೆಗೂ ನೀಡಿಲ್ಲ. ಜಲಜೀವನ ಮಿಷನ್ ಹಣವನ್ನೂ ನೀಡಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನಗಳು, ಜಿಎಸ್ ಟಿ ಪರಿಹಾರ ಸಿಕ್ಕಿಲ್ಲ. ಈಗ ಇವರು ಗೃಹಲಕ್ಷ್ಮಿ ಹಣದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು. ಬಿಜೆಪಿಯವರು ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳಲು ಆಗಿಲ್ಲ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications