Gruha Lakshmi Scheme: ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಹಣ ಶೀಘ್ರವೇ ಬಿಡುಗಡೆ: ಗುಡ್‌ ನ್ಯೂಸ್‌ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಫೆಬ್ರವರಿ 17: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗದ ಕಾರಣ ಹಲವಾರು ಮಹಿಳೆಯರು ಆತಂಕಗೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಈ ಬಾಕಿ ಹಣ ಪಾವತಿ ಕುರಿತು ಸ್ಪಷ್ಟತೆ ನೀಡಿದ್ದು, ಎಲ್ಲಾ ಪೆಂಡಿಂಗ್ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ ಎಂದು ಭರವಸೆ ನೀಡಿದೆ.

ಈ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಗೃಹಲಕ್ಷ್ಮಿ ಹಣ ಮೂರು ತಿಂಗಳಿಂದ ಬಂದಿಲ್ಲ. ಈ ಹಣವನ್ನು ನಾವು ಹಾಕುತ್ತೇವೆ. ಗೃಹ ಲಕ್ಷ್ಮೀ ಯೋಜನೆಯ 3 ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಅಕೌಂಟಿಗೆ ಹಾಕಲಿದ್ದೇವೆ.ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಹ ಪ್ರತಿಕ್ರಿಯಿಸಿದ್ದು, ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದರು.

DK Shivakumar Gave Information About The Release Of Money

ನಿಮ್ಮ ಬೆಂಗಳೂರು ಸಿಟಿ ರೌಂಡ್ ಅನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಫೋಟೋ ಶೂಟ್ ಎಂಬ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಬಿಜೆಪಿವರು ಇರುವುದೇ ಟೀಕೆ ಮಾಡಲು. ಬಿಜೆಪಿಗೆ ಬೇರೆ ಏನು ಕೆಲಸ ಇದೆ. ನಾವು ನಮ್ಮ ಕರ್ತವ್ಯ ಮಾಡುತ್ತಿದ್ದೇವೆ. ಇದು ದೊಡ್ಡ ಮೊತ್ತದ ಯೋಜನೆ, ಇದರ ಗುಣಮಟ್ಟ ಸರಿಯಾಗಿದೆಯೇ? ಸಧ್ಯ 150 ಕಿ.ಮೀ ಉದ್ದದ ರಸ್ತೆ ಕಾಮಗಾರಿ ನಡೆಯುತ್ತಿದೆ. 1,700 ಕೋಟಿ ಮೊತ್ತದ ಯೋಜನೆ. ಇದನ್ನು ಕಾಲಮಿತಿಯೊಳಗೆ ಮುಗಿಸುವ ಗುರಿ ಹೊಂದಿದ್ದೇವೆ.

ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರು ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮುಂದೆಯೂ ಇಂತಹ ಯೋಜನೆ ಕೈಗೆತ್ತಿಕೊಳ್ಳುವ ಉದ್ದೇಶವಿದೆ. ಈ ವಿಚಾರವಾಗಿ ಸ್ಥಳೀಯ ಶಾಸಕರ ಅಭಿಪ್ರಾಯ ಏನಿದೆ ಎಂದು ಚರ್ಚೆ ಮಾಡಿದ್ದೇನೆ. ಮತ್ತೆ ಕೆಲವು ಯೋಜನೆ ಕಾಮಗಾರಿ ಆದೇಶ ಆಗಿಲ್ಲ. ಬೆಂಗಳೂರಿನ ರಸ್ತೆಗಳನ್ನು ಸುಧಾರಿಸಲು 600 ಕೋಟಿ ಮೊತ್ತದ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರು ಬೆಂಗಳೂರಿನ ಕೆಲವು ಸಂಚಾರಿ ಯೋಜನೆಗಳ ಬಗ್ಗೆ ಎತ್ತಿರುವ ಪ್ರಶ್ನೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಅವರು ಏನು ಹೇಳಿದ್ದಾರೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಒಳ್ಳೆಯ ಸಲಹೆ ಕೊಟ್ಟಿದ್ದರೆ ತೆಗೆದುಕೊಳ್ಳುತ್ತೇವೆ. ರಾಜಕಾರಣ ಇದ್ದರೆ ನಾವು ಅದನ್ನು ನಿಭಾಯಿಸುತ್ತೇವೆ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ಎಐಸಿಸಿಯನ್ನು ನೀವು ದುರ್ಬಳಕೆ ಮಾಡಿಕೊಳ್ಳುತ್ತಿದ್ದೀರಿ ಎಂದು ರಾಜಣ್ಣ ಹೇಳಿದ್ದಾರೆ ಎಂದು ಕೇಳಿದಾಗ, "ಈಗ ಚರ್ಚೆ ಬೇಡ, ನಾನು ಪಕ್ಷದ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೇರಳಕ್ಕೆ ಹೋಗುತ್ತಿದ್ದೇನೆ. ನಂತರ ರಾಜಸ್ಥಾನದಲ್ಲಿ ಸಚಿವರುಗಳ ಸಭೆ ಇದ್ದು, ಅಧಿಕಾರಿಗಳ ಸಮೇತ ಪ್ರಯಾಣ ಮಾಡುತ್ತಿದ್ದೇನೆ. ಅಲ್ಲಿಂದ ಬಂದ ನಂತರ ಮಾತನಾಡುತ್ತೇನೆ" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+