ಬೆಳಗಾವಿ ಜಿಲ್ಲೆ ವಿಭಜನೆ: ಮಹತ್ವದ ಅಪ್ಡೇಟ್ ನೀಡಿದ ಡಿ ಕೆ ಶಿವಕುಮಾರ್
ಬೆಳಗಾವಿ: ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ ನೂತನ ಜಿಲ್ಲೆ ಘೋಷಿಸುವ ಸಂಬಂಧ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ, ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತಾಡಿ, ನಮ್ಮೆಲ್ಲರಿಗೂ ದೊಡ್ಡ ಜವಾಬ್ದಾರಿ ಇದೆ. ನಮಗೆ ಎಲ್ಲಾ ಧರ್ಮ, ಜಾತಿ ಒಂದೇ. ನಮಗೆ ಎಲ್ಲದರ ಮೇಲೂ ನಂಬಿಕೆ ಇದೆ. ನಾವೆಲ್ಲರೂ ನಮಗೆ ಸಿಕ್ಕ ಅವಕಾಶದಲ್ಲಿ ಪರಿಸರ ಕಾಪಾಡಲು ನಮ್ಮ ಸರ್ಕಾರದ ಯೋಜನೆಯಲ್ಲಿ ಅನುದಾನ ನೀಡಲಾಗಿದೆ. ಬೈರತಿ ಸುರೇಶ್ ಅವರು ನಗರಾಭಿವೃದ್ಧಿ ಸಚಿವರಾದ ಬಳಿಕ ಸುಮಾರು 200 ಕೋಟಿ ರೂ. ಗಳಷ್ಟು ಅನುದಾನವನ್ನು ಅನೇಕ ಯೋಜನೆಗಳ ಮೂಲಕ ಈ ನಗರಕ್ಕೆ ನೀಡಿದ್ದಾರೆ ಎಂದು ಹೇಳಿದರು.

ಮುಂದೆ ನಮ್ಮ ಸರ್ಕಾರ ಈ ಪ್ರದೇಶದ ಅಭಿವೃದ್ಧಿ ಮಾಡಿ, ಉದ್ಯೋಗ ನೀಡಲು ಅಗತ್ಯ ಕ್ರಮ ಕೈಗೊಳ್ಳಲಿದೆ. ನಾವು ನೀವು ಜೊತೆಯಾಗಿ ಕೈ ಜೋಡಿಸಿ ಹೆಜ್ಜೆ ಹಾಕೋಣ" ಎಂದು ಕರೆ ನೀಡಿದರು. ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದ್ದರು. ಅದರ ಶತಮಾನೋತ್ಸವ ಹಿನ್ನೆಲೆಯಲ್ಲಿ ಕಳೆದ ವರ್ಷ ನಾವು ಬೆಳಗಾವಿಗೆ ಬಂದು ಗಾಂಧಿ ಭಾರತ ಎಂಬ ಕಾರ್ಯಕ್ರಮ ಮಾಡಿದೆವು. ಸ್ವಚ್ಛತೆ ಹಾಗೂ ಪರಿಸರ ಕಾಪಾಡುವುದು ಅವರ ಉದ್ದೇಶವಾಗಿತ್ತು. ನಾನು ಚಿಕ್ಕ ವಯಸ್ಸಿನಲ್ಲಿ ಕ್ರಾಸ್ ಕಂಟ್ರಿ ಓಡುತ್ತಿದ್ದೆ. ಈಗ ವಯಸ್ಸಾಗಿದೆ. ಆದರೆ ನನ್ನ ಮನಸ್ಸು ನಿಮ್ಮಷ್ಟೇ ತಾರುಣ್ಯವಾಗಿದೆ. ನನ್ನ ಕೈಲಾದಷ್ಟು ನಡೆಯುತ್ತೇನೆ. ನಿಮಗೆ ಒಳ್ಳೆಯದಾಗಲಿ ಎಂದು ತಿಳಿಸಿದರು.
ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿ. ದ್ವೇಷ ರಾಜಕಾರಣ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ಮಂಗಳವಾರ ಬಂದ ನ್ಯಾಯಾಲಯದ ಆದೇಶವೇ ಸಾಕ್ಷಿ. ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.
"Justice for Congress, Face loss for BJP. End of BJP Conspiracy, Victory for Democracy. ಬಿಜೆಪಿ ಎಷ್ಟೇ ಪಿತೂರಿ ಮಾಡಿದರೂ ನಮಗೆ ನ್ಯಾಯ ಸಿಕ್ಕಿದೆ. ಬಿಜೆಪಿ ಎಂದರೆ ಬುರುಡೆ ಜನತಾ ಪಕ್ಷವಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಲು ಪಿತೂರಿ ಮಾಡಲಾಗಿದೆ. ಈ ದ್ವೇಷ ರಾಜಕಾರಣ ಇಲ್ಲಿಗೆ ಕೊನೆಯಾಗಬೇಕು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಪ್ರತಿಭಟನೆ ಮುಂದುವರಿಯಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಜೊತೆ ನಿಂತು ಅವರ ಕೈ ಬಲಪಡಿಸೋಣ ಎಂದು ಕರೆ ನೀಡಿದರು.
ಇಂದು ಸತ್ಯಕ್ಕೆ ಜಯ ಸಿಕ್ಕಿದೆ. 1937ರಲ್ಲಿ ನಮ್ಮ ನಾಯಕರಾಗಿದ್ದ ಜವಹಾರ್ ಲಾಲ್ ನೆಹರು ಅವರು ಜನರ ಧ್ವನಿಯಾಗಬೇಕು ಎಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಆರಂಭಿಸಿದರು. ಆಮೂಲಕ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೆರವಾಗಲು ಈ ಸಂಸ್ಥೆ ಆರಂಭಿಸಿದರು. ಈ ಸಂಸ್ಥೆ ಮಹಾತ್ಮಾ ಗಾಂಧಿ ಅಥವಾ ನೆಹರು ಅವರ ಆಸ್ತಿಯಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ಪಕ್ಷದಲ್ಲಿ ಯಾರೇ ಅಧ್ಯಕ್ಷರಾದರೂ ಈ ಸಂಸ್ಥೆಯ ಷೇರುದಾರರಾಗುತ್ತಾರೆ. ಇದರ ಜವಾಬ್ದಾರಿ ಹೊರುತ್ತಾರೆ. ಆದರೆ ಬಿಜೆಪಿಯವರು ಯಂಗ್ ಇಂಡಿಯಾ ಸಂಸ್ಥೆ ಹಾಗೂ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಯನ್ನು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ತಮ್ಮ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿ ನೀಡದ ದೂರಿನ ಮೇಲೆ ನಮ್ಮ ನಾಯಕ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ ಇ.ಡಿ ತನಿಖಾ ಸಂಸ್ಥೆ ಮೂಲಕ ತನಿಖೆ ಮಾಡಿಸುತ್ತಿದ್ದಾರೆ" ಎಂದು ಹೇಳಿದರು.
ಈ ಪ್ರಕರಣದಲ್ಲಿ ಇ.ಡಿ ಸಂಸ್ಥೆ ನನಗೆ, ನನ್ನ ಸಹೋದರನಿಗೆ, ದಿವಂಗತ ಶಾಮನೂರು ಶಿವಶಂಕರಪ್ಪ ಹಾಗೂ ಅವರ ಕುಟುಂಬದವರಿಗೆ ನೋಟೀಸ್ ನೀಡಿತ್ತು. ಈ ಸಂಸ್ಥೆಗೆ ನಮ್ಮ ಅನೇಕ ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ. ಆಸ್ಕರ್ ಫರ್ನಾಂಡೀಸ್ ಅವರು ಈ ಸಂಸ್ಥೆಯ ಮಂಡಳಿಯ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ನಮ್ಮ ಜೊತೆಯಲ್ಲಿ ಸಿಎಂ ಇದ್ದಾರೆ. ನನ್ನ ನೀರಾವರಿ ಇಲಾಖೆಯ ಅನೇಕ ನಿಗಮಗಳಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿದ್ದಾರೆ. ನಮ್ಮ ಅನೇಕ ಶಾಸಕರು, ಕಾರ್ಯಕರ್ತರು ವಿವಿಧ ನಿಗಮ ಮಂಡಳಿ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಇವರುಗಳು ಅಧ್ಯಕ್ಷರಾಗಿರುವ ಕಾರಣ ಅವರ ಹೆಸರಿಗೆ ಒಂದೆರಡು ಷೇರುಗಳನ್ನು ನೀಡಲಾಗುತ್ತದೆ. ನಮ್ಮ ಅಧಿಕಾರ ಹೋದ ಬಳಿಕ ಈ ಅಧಿಕಾರ ವರ್ಗಾವಣೆಯಾಗುತ್ತದೆ ಎಂದು ವಿವರಿಸಿದರು.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ












Click it and Unblock the Notifications