ರಾಜ್ಯದ ಜನರಿಗೆ ಮತ್ತೊಂದು ಗುಡ್‌ನ್ಯೂಸ್ ಕೊಟ್ಟ ಡಿ.ಕೆ ಶಿವಕುಮಾರ್!
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಜನರಿಗೆ ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲಿಯೇ ರಾಜ್ಯದ ಜನರಿಗೆ ಮತ್ತೊಂದು ಗುಡ್‌ನ್ಯೂಸ್ ಕೊಟ್ಟಿದ್ದಾರೆ.
ಡಿ.ಕೆ ಶಿವಕುಮಾರ್ ಅವರು ಕನ್ನಡಿಗರಿಗೆ ಮತ್ತೊಂದು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ ಮೇಲೆ ಇದೀಗ ಅವರು ಮತ್ತೊಂದು ಭರ್ಜರಿ ಗುಡ್‌ನ್ಯೂಸ್ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕೆ ಸಂಬಂಧಿಸಿದಂತೆ ಭರ್ಜರಿ ಅಪ್ಡೇಟ್ಸ್ ಕೊಟ್ಟಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತಹ ಸರಿ ಸುಮಾರು 2 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ನಾವು ಸರ್ಕಾರಿ ಉದ್ಯೋಗಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರವು ನಮ್ಮದೇ ಆದ ಸಮಯವನ್ನು ನಿಗದಿ ಮಾಡಿಕೊಂಡಿದ್ದೇವೆ.
ಇನ್ನು ಶಿಕ್ಷಣ ಇಲಾಖೆಯಲ್ಲಿ 50,000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಒಳಮೀಸಲಾತಿ ವಿಚಾರ ಬಾಕಿ ಇರುವ ಕಾರಣಕ್ಕೆ ಒಂದಷ್ಟು ಭರ್ತಿ ಕೆಲಸ ಬಾಕಿ ಉಳಿದಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ನೀರಾವರಿ ಇಲಾಖೆಯ ವಾರ್ಷಿಕ ಬಜೆಟ್ 22 ಸಾವಿರ ಕೋಟಿ. ಇದರಲ್ಲಿ ಸುಮಾರು 5 ಸಾವಿರ ಕೋಟಿಯಷ್ಟು ಹೊಸ ಕೆಲಸಗಳನ್ನು ತೆಗೆದುಕೊಳ್ಳಬಹುದಿತ್ತು. ಆದರೆ ಈ ಹಿಂದೆ 25 ಸಾವಿರ ಕೋಟಿ ಮೊತ್ತದ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಯಾರ ಕಾಲದಲ್ಲಿ ಬಜೆಟ್‌ಗೂ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಯಿತು ಎ೦ದು ಪ್ರಸ್ತಾಪಿಸಿದರೆ ರಾಜಕೀಯ ಎ೦ದು ಎಲ್ಲರೂ ಮುಗಿಬೀಳುತ್ತಾರೆ.
ಸಮಗ್ರ ಕರ್ನಾಟಕದ ಅಭಿವೃದ್ಧಿಯೇ ನಮ್ಮ ಗುರಿ
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ವಿಶೇಷ ಪ್ರಾಮುಖ್ಯತೆ ನೀಡಿ, ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಉತ್ತರ ಕರ್ನಾಟಕದ ರೈತರ ಅಭಿವೃದ್ಧಿಗೆ ನಾವು ಸದಾ ಬದ್ಧರಾಗಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬದ್ಧತೆಗೆ ಒಂದು ಕಾಲಮಿತಿ ಇರಬೇಕಲ್ಲವೇ ಡಿಸಿಎಂ ಎಂದ ಆರ್. ಅಶೋಕ್
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಈ ಪ್ರತಿಕ್ರಿಯೆಗೆ ತಿರುಗೇಟು ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಬದ್ಧತೆಗೆ ಒಂದು ಕಾಲಮಿತಿ ಇರಬೇಕಲ್ಲವೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ ಎಂದು ಪ್ರಶ್ನೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ತಾವು ಹೇಳಿದ್ದು, ಒಂದು ವರ್ಷದೊಳಗೆ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿ ಅಂತ. ಈಗ ಯಾವುದೇ ನಿರ್ದಿಷ್ಟ ಕಾಲಮಿತಿ ಇಲ್ಲದೆ ಸುಮ್ಮನೆ "ಬದ್ಧ" ಎಂದು ಕಾಗೆ ಹಾರಿಸುತ್ತಿದ್ದೀರಿ.
ಹೋಗಲಿ ತಾವು ಮುಖ್ಯಮಂತ್ರಿ ಆದಮೇಲೆ ಒಂದು ವರ್ಷದೊಳಗೆ ಅಂತಲಾದರೂ ಹೇಳಿಬಿಡಿ ಸ್ವಾಮಿ. ಸುಮ್ಮನೆ ನಮ್ಮ ನಾಡಿನ ಯುವಕರು, ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಜೊತೆ ಯಾಕೆ ಚೆಲ್ಲಾಟ ಆಡುತೀರಿ ಎಂದು ಟೀಕೆ ಮಾಡಿದ್ದಾರೆ.












Click it and Unblock the Notifications