DK Shivakumar: ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನದ ಟಾರ್ಗೆಟ್: ಶಾಸಕರಿಗೆ ಡಿ ಕೆ ಶಿವಕುಮಾರ್ ಕೊಟ್ಟ ಸೂಚನೆಗಳೇನು?
ಬೆಂಗಳೂರು, ಮೇ 24: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳ ಮೂಲಕ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಯ ಬಳಿಕ ಹೆಚ್ಚು ಸಕ್ರಿಯರಾಗಿದ್ದು, ಬುಧವಾರ ಶಾಸಕಾಂಗ ನಾಯಕರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.
ಈಗಾಗಲೇ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯ ಮೇಲೆ ಕಣ್ಣೀಟ್ಟಿದ್ದು, ಅತೀ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ. ಈಗಾಗಲೇ ಸೋಲಿನ ಹತಾಶೆಯಲ್ಲಿರುವ ಬಿಜೆಪಿ ನಾಯಕರು ಸಹ 2024 ರ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ.

ಇನ್ನೂ ಮೈಯೆಲ್ಲಾ ಕಣ್ಣಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಶಾಸಕಾಂಗ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲಲೇಬೇಕು. ವಿಧಾನಸಭೆ ಚುನಾವಣೆ ಗೆದ್ದೆವು ಎಂದು ಸುಮ್ಮನೆ ಕೂರುವಂತಿಲ್ಲ.ಲೋಕಸಭೆ ಚುನಾವಣೆಯಲ್ಲೂ ಈ ಗೆಲುವಿನ ಯಾನ ಮುಂದುವರೆಯಬೇಕು, ಹೀಗಾಗಿ ಪಕ್ಷ ಸಂಘಟನೆಯತ್ತ ಕೆಲಸ ಮಾಡಿ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಇತ್ತ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಮುಂಬರುವ ಬಿಬಿಎಂಪಿ ಚುನಾವಣೆಯಲ್ಲೂ ವಿಜಯ ಸಾಧಿಸಬೇಕು. ಈ ನಿಟ್ಟಿನಲ್ಲಿ ಬೆಂಗಳೂರು ಭಾಗದ ಶಾಸಕರು ಎಲ್ಲಾ ಒಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದ್ದು, ಜಿಲ್ಲಾ ಸಚಿವರು ಆಗುವವರು ಪ್ರತಿ ಜಿಲ್ಲೆಯಲ್ಲಿ ಹಾಗೂ ಶಾಸಕರು ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಪಕ್ಷದ ಕಚೇರಿ ಸ್ಥಾಪಿಸಲೇಬೇಕು. ನಮಗೆ ಪಕ್ಷದ ಕಚೇರಿಯೇ ದೇಗುಲ. ಅದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಇನ್ನೂ ಪಕ್ಷದಲ್ಲಿ ಎಲ್ಲರಿಗೂ ಅಧಿಕಾರ ಸಿಗದಿರಬಹುದು. ಆದರೆ ನಿಮ್ಮ ಶ್ರಮಕ್ಕೆ ಗೌರವ ಸಿಗುತ್ತದೆ. ಪಕ್ಷದ ಕೆಲಸವನ್ನು ದೇವರ ಕೆಲಸ ಎಂದು ಮಾಡಬೇಕು. ಚುನಾವಣೆಯಲ್ಲಿ ನಿಮ್ಮ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರನ್ನು ಮರೆಯಬಾರದು, ರಾಜ್ಯದ ಜನರಿಗೆ ಸ್ವಚ್ಛ ಆಡಳಿತ ನೀಡಲು ಸಹಕರಿಸಬೇಕು ಎಂದು ನೂತನ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.












Click it and Unblock the Notifications