ಡಿ.ಕೆ.ಶಿವಕುಮಾರ್ ಗೆ ಜಾಮೀನು: ಇಂದು ನಡೆಯುವುದೇನೇನು?
ಬೆಂಗಳೂರು, ಅಕ್ಟೋಬರ್ 24: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನಿನ್ನೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಸತತ 50 ದಿನಗಳು ಜೈಲಿನಲ್ಲಿದ್ದ ಡಿ.ಕೆ.ಶಿವಕುಮಾರ್ ನಿನ್ನೆ ಹೊರಬಂದಿದ್ದಾರೆ.
ಜೈಲಿನಲ್ಲಿ ಕುದಿದು ಹೊರಗೆ ಬಂದಿರುವ ಡಿ.ಕೆ.ಶಿವಕುಮಾರ್ ಅವರ ಇಂದಿನ ನಡೆಗಳು ಅತ್ಯಂತ ಮಹತ್ವದ್ದಾಗಿದ್ದು, ಕುತೂಹಲದಿಂದ ಗಮನಿಸಬೇಕಾದುದ್ದಾಗಿದೆ.
Recommended Video
ಜಾಮೀನು ದೊರೆತು ನಿನ್ನೆ 10 ಗಂಟೆ ಸುಮಾರಿಗೆ ತಿಹಾರ್ ಜೈಲಿನಿಂದ ಹೊರಬಂದ ಡಿ.ಕೆ.ಶಿವಕುಮಾರ್ ಶಿವನ ದೇವಾಲಯಕ್ಕೆ ಪೂಜೆ ಸಲ್ಲಿಸಿ ದೆಹಲಿಯಲ್ಲಿಯೇ ತಮ್ಮ ನಿವಾಸದಲ್ಲಿ ಉಳಿದುಕೊಂಡಿದ್ದಾರೆ.

ಇಂದು ಡಿ.ಕೆ.ಶಿವಕುಮಾರ್ ಅವರು ರಾಜ್ಯಕ್ಕೆ ಬರಲಿದ್ದು, ಇಲ್ಲಿ ಅವರ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನೂ ಡಿ.ಕೆ.ಶಿವಕುಮಾರ್ ನಡೆಸಲಿದ್ದಾರೆ. ಗೋಷ್ಠಿಯಲ್ಲಿ ಯಾವ ವಿಷಯಗಳನ್ನು ಅವರು ಹಂಚಿಕೊಳ್ಳಲಿದ್ದಾರೆ. ಅವರ ಜೈಲು ಅನುಭವಗಳು ಹೇಗಿದ್ದವು ಮುಂತಾದ ಮಾಹಿತಿಗಳನ್ನು ಅವರು ಮಾಧ್ಯಮಗಳಿಗೆ ನೀಡಲಿದ್ದಾರೆ. ಡಿ.ಕೆ.ಶಿವಕುಮಾರ್ ಕುರಿತ ಕ್ಷಣ-ಕ್ಷಣದ ಮಾಹಿತಿಗಳು 'ಒನ್ ಇಂಡಿಯಾ ಕನ್ನಡ' ನೀಡಲಿದೆ.











Click it and Unblock the Notifications