ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮಾಜಿ ಕೇಂದ್ರ ಸಚಿವ ಬೂಟಾ ಸಿಂಗ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ
ಬೆಂಗಳೂರು, ಜ.02: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬೂಟಾ ಸಿಂಗ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ನಿಧನ
ಕಾಂಗ್ರೆಸ್ ಹಿರಿಯ ನಾಯಕ ಬೂಟಾ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ದಿ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಬೂಟಾ ಸಿಂಗ್ ಅವರು, ಅನುಭವಿ ರಾಜಕಾರಣಿ. ಬಡವರು ಮತ್ತು ದೀನದಲಿತರ ಧ್ವನಿಯಾಗಿ ಅವರ ಕಲ್ಯಾಣಕ್ಕೆ ಶ್ರಮಿಸಿದ್ದ ಅವರು ಅಪಾರ ಅಭಿಮಾನಿ ಬಳಗ ಹೊಂದಿದ್ದರು. ಜತೆಗೆ ಬಿಹಾರ ಹಾಗೂ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿಯೂ ಅವರು ಸೇವೆ ಸಲ್ಲಿಸಿದ್ದರು.
ಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಡಿ.ಕೆ. ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅವ್ರು ನಾಶ ಆಗಿ ಹೋಗ್ತಾರೆ ಅಂತ ಹೇಳಿದ್ದು ಯಾರಿಗೆ ?? | Manjunath HS | Youth Congress Interview Part 2