DK Shivakumar Chopper: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್‌ಗೆ ರಣಹದ್ದು ಡಿಕ್ಕಿ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್‌ಗೆ ರಣಹದ್ದು ಡಿಕ್ಕಿಯಾಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿನಿಂದ ಮುಳಬಾಗಿಲು ಕ್ಷೇತ್ರಕ್ಕೆ ತೆರಳುವ ಸಂದರ್ಭದಲ್ಲಿ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕ್ಯಾಪ್ಟರ್ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ.

ಹೆಚ್‌ಎಎಲ್‌ನಿಂದ ಮುಳಬಾಗಿಲಿಗೆ ಹೋಗುವ ಸಂದರ್ಭದಲ್ಲಿ ಹೋಸಕೋಟೆ ಹತ್ತಿರ ಈ ಘಟನೆ ಸಂಭವಿಸಿದೆ. ಮುಂಭಾಗದ ಗಾಜು ಪುಡಿ ಪುಡಿಯಾಗುತ್ತಿದ್ದಂತೆ ಚಾಲಕ ಹೆಲಿಕ್ಯಾಪ್ಟರ್ ಅನ್ನು ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಂತರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, "ಯಾವುದೇ ಅವಘಡವಾಗಿಲ್ಲ, ಪೈಲಟ್ ನಿಧಾನವಾಗಿ ಹೆಚ್‌ಎಎಲ್‌ನಲ್ಲಿ ಹೆಲಿಕ್ಯಾಪ್ಟರ್ ಅನ್ನು ಸುರಕ್ಷಿತವಾಗಿ ಇಳಿಸಿದ್ದಾರೆ. ರಣಹದ್ದು ಡಿಕ್ಕಿಯಿಂದ ಗಾಜು ಪುಡಿಯಾಗಿದೆ" ಎಂದು ಹೇಳಿದ್ದಾರೆ.
ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ, ಹೆಲಿಕ್ಯಾಪ್ಟರ್ ನಲ್ಲಿದ್ದ ಟಿವಿ 9 ಕ್ಯಾಮೆರಾಮೆನ್‌ಗೆ ಸಣ್ಣ ಗಾಯವಾಗಿದೆ ಎಂದು ವರದಿಯಾಗಿದೆ. ಘಟನೆ ಬಗ್ಗೆ ಕರ್ನಾಟಕ ಕಾಂಗ್ರೆಸ್ ಕೂಡ ಟ್ವೀಟ್ ಮಾಡಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಮಾಹಿತಿ ನೀಡಿದೆ.
ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.
— Karnataka Congress (@INCKarnataka) May 2, 2023
ಯಾವುದೇ ಅಹಿತಕರ ಘಟನೆ ನಡೆಯದೆ ಎಲ್ಲರೂ ಸುರಕ್ಷಿತವಾಗಿದ್ದಾರೆ. pic.twitter.com/nwMDlazxU1
ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, "ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿಯಾದ ಪರಿಣಾಮ ಗಾಜು ಒಡೆದಿದ್ದು ಯಾವುದೇ ಅನಾಹುತ ಸಂಭವಿಸದಂತೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದೆ ಎಲ್ಲರೂ ಸುರಕ್ಷಿತವಾಗಿದ್ದಾರೆ." ಎಂದು ಹೇಳಿದೆ.












Click it and Unblock the Notifications