DK Shivakumar: ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದ ಡಿ.ಕೆ ಶಿವಕುಮಾರ್: ನೆಟ್ಟಿಗರು ಹೇಳಿದ್ದೇನು ?

DK Shivakumar: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಹೇಳಿರುವುದು ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ. ಹಲವರು ಇದು ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಸಿಗುವುದಿಲ್ಲ ಎನ್ನುವುದರ ಮುನ್ಸೂಚನೆಯೇ ಎಂದೂ ಪ್ರಶ್ನೆ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಸ್ಟೇಟ್‌ಮೆಂಟ್ ಏನು, ಇದಕ್ಕೆ ನೆಟ್ಟಿಗರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮಾತನಾಡಿರುವ ವಿಚಾರವು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎನ್ನುವ ಹೇಳಿಕೆಯನ್ನು ಡಿ.ಕೆ ಶಿವಕುಮಾರ್ ಅವರು ಪುನರುಚ್ಚರಿಸಿದ್ದಾರೆ. ನಾನು ಯಾವಾಗಲೂ ಪಕ್ಷದ ಶಿಸ್ತಿನ ಸಿಪಾಯಿ. ನಾನು ಅಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ.

DK Shivakumar I Am a Soldier of Party Discipline Here s What Netizens Said

ಕಾಂಗ್ರೆಸ್ ಪಕ್ಷ ಎಲ್ಲಿಯ ವರೆಗೂ ನನ್ನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಕೆಲಸ ಮಾಡಲು ಹೇಳುತ್ತಾರೋ, ಅಲ್ಲಿಯ ವರೆಗೆ ನಾನು ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡಿಕೊಂಡು ಹೋಗುತ್ತೇನೆ. ಮುಂದೆಯೂ ಪಕ್ಷ ಅಧಿಕಾರಕ್ಕೆ ಬರುವಂತೆ ದುಡಿಯುವವನು ನಾನು ಎಂದಿದ್ದಾರೆ. ಇದಕ್ಕೆ ಸಾರ್ವಜನಿಕರ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಿಮ್ಮ ಬೆಂಬಲಕ್ಕೆ ನಾವಿದ್ದೇವೆ ಎಂದು ಕೆಲವರು ಕಮೆಂಟ್ ಮಾಡಿದ್ದರೆ, ಇನ್ನೂ ಕೆಲವರು ಸರ್ ನಿಮ್ಮನ್ನು ಕಾಂಗ್ರೆಸ್ ಪಕ್ಷದಲ್ಲಿ ಕಡೆಗಣಿಸುತ್ತಿದ್ದಾರೆ. ತಿರುಗಿ ಬೀಳಿ ಎಂದೂ ಕೆಲವರು ಕಮೆಂಟ್ ಮಾಡಿದ್ದಾರೆ. ಒಮ್ಮೆಯಾದರೂ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಬೇಕು. ಕಾಂಗ್ರೆಸ್ ಪಕ್ಷ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಕ್ಕೆ ಡಿ.ಕೆ ಶಿವಕುಮಾರ್ ಅವರು ಸಹ ಪ್ರಮುಖ ಕಾರಣರಾಗಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಅವರ ಮತ್ತೊಬ್ಬ ಅಭಿಮಾನಿ ಟ್ವೀಟ್ ಮಾಡಿದ್ದಾರೆ.

ಹೀಗೂ ವಿಶ್ಲೇಷಣೆ ಮಾಡಬಹುದು. ಡಿಕೆಶಿ ಮಾತಿನಲ್ಲಿ ಹತಾಶೆ ಕಾಣಿಸ್ತಾ ಇದೆ. "ನನ್ನಿಂದ ಏನೂ ಮಾಡೋಕೆ ಆಗಲ್ಲ" ಅನ್ನೋ ಅರ್ಥ. ಬೇರೆ ಪಕ್ಷದಿಂದ ಬಂದು, ಆ ಪಕ್ಷದ ಎಲ್ಲರ ವಿಶ್ವಾಸ ಗಳಿಸಿದ್ದಾರೆ ಎಂದರೆ ಸಿದ್ದರಾಮಯ್ಯ ನಿಜಕ್ಕೂ ಬಲಶಾಲಿ ಅಥವಾ ಪಕ್ಷದ ಕಾರ್ಯಕರ್ತರಿಗೆ ಇವರಿಗಿಂತಾ ಹೆಚ್ಚು ಅವರ ಮೇಲೆ ನಂಬಿಕೆ ಇರಬಹುದೇನೋ ಎಂದು ನೆಟ್ಟಿಗರೊಬ್ಬರು ಪ್ರಶ್ನೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+