ಡಿಸಿಎಂ ಆದ ದಿನವೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಅಚ್ಚರಿ ಸಂಗತಿ ಬಿಚ್ಚಿಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ನವೆಂಬರ್ 19: ನಾನು ಈ ಹುದ್ದೆಯಲ್ಲಿ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ಈಗಾಗಲೇ ಐದೂವರೆ ವರ್ಷವಾಗಿದೆ, ಮಾರ್ಚ್ ಬಂದರೆ ಆರು ವರ್ಷವಾಗಲಿದೆ. ಬೇರೆಯವರಿಗೆ ಅವಕಾಶ ನೀಡಬೇಕು. ನಾನು ನಾಯಕತ್ವದಲ್ಲಿ ಇರುತ್ತೇನೆ, ತಲೆಕೆಡಿಸಿಕೊಳ್ಳಬೇಡಿ. ನಾನು ಉಪಮುಖ್ಯಮಂತ್ರಿಯಾದ ದಿನವೇ ಈ ಹುದ್ದೆ ಬಿಡಬೇಕು ಎಂದು ನಿರ್ಧರಿಸಿದ್ದೆ. ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಇನ್ನು ಸ್ವಲ್ಪ ದಿನ ಮುಂದುವರಿಯಲು ಹೇಳಿದ್ದಾರೆ. ನಾನು ನನ್ನ ಕರ್ತವ್ಯ ನಿಭಾಯಿಸುತ್ತಿದ್ದೇನೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಮುಂದುವರಿಯುವ ಬಗ್ಗೆ ಪಕ್ಷ ಏನು ಹೇಳುತ್ತದೆಯೋ ಅದನ್ನು ನಾನು ಪಾಲಿಸುತ್ತೇನೆ. ಪಕ್ಷದ ಅದ್ಯಕ್ಷರಾದವರು ಹೇಗೆ ಕೆಲಸ ಮಾಡಬೇಕು ಎಂದು ನಾನು ಉದಾಹರಣೆಯಾಗಬೇಕು, ಪಕ್ಷದಲ್ಲಿ ನಮ್ಮ ಗುರುತು ಬಿಟ್ಟುಹೋಗಬೇಕು. ನಾನು ಈ ವಿಚಾರವಾಗಿ ಮಾತನಾಡುತ್ತಿದ್ದೇನೆ ಹೊರತು, ತ್ಯಾಗ ಅಥವಾ ಓಡಿ ಹೋಗುವ ಬಗ್ಗೆ ಮಾತನಾಡುತ್ತಿಲ್ಲ. ನಾನು ಓಡಿ ಹೋಗುವ ಮನುಷ್ಯನಲ್ಲ. ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಅಧ್ಯಕ್ಷರು ಎಲ್ಲಿಯವರೆಗೂ ಜವಾಬ್ದಾರಿ ನಿಭಾಯಿಸಲು ಸೂಚಿಸುತ್ತಾರೋ ಅಲ್ಲಿಯವರೆಗೂ ನಾನು ಕರ್ತವ್ಯ ನಿಭಾಯಿಸುತ್ತೇನೆ ಎಂದು ತಿಳಿಸಿದರು.

ನೂತನ ಕಚೇರಿಗಳ ಶಂಕುಸ್ಥಾಪನೆ ಕುರಿತು ನಾನು ಎಐಸಿಸಿ ನಾಯಕರ ಬಳಿ ದಿನಾಂಕ ಕೇಳಿದ್ದೇನೆ. ಆದಷ್ಟು ಬೇಗ ನೀಡುವುದಾಗಿ ಹೇಳಿದ್ದು, ನಾನು ಅದಕ್ಕಾಗಿ ಕಾಯುತ್ತಿರುವೆ ಎಂದು ತಿಳಿಸಿದರು. ಸಧ್ಯದಲ್ಲಿ ನೂರು ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದಕ್ಕೆ ಯಾರು ಸಹಕಾರ ನೀಡಿದ್ದಾರೆ, ನೀಡಿಲ್ಲ ಎಂದು ಪಟ್ಟಿ ನೀಡಿ ಎಂದು ಎಐಸಿಸಿ ನಾಯಕರು ತಿಳಿಸಿದ್ದಾರೆ. ಕೆಲವರು ಆಸಕ್ತಿ ತೋರಿದ್ದಾರೆ, ಕೆಲವರು ಆಸಕ್ತಿ ತೋರಿಲ್ಲ. ಕೆಲವರಿಗೆ ಕೇವಲ ಅಧಿಕಾರ ಮಾತ್ರ ಬೇಕು.
ಈ ಕಾಂಗ್ರೆಸ್ ಕಚೇರಿ ದೇವಾಲಯ ಎಂಬುದನ್ನು ಕೆಲವರು ಮರೆತಿದ್ದಾರೆ. ಇದಕ್ಕೆ ನಾನು ಉತ್ತರ ನೀಡುವುದಿಲ್ಲ. ದೆಹಲಿ ನಾಯಕರು ಸರಿಯಾದ ಸಮಯದಲ್ಲಿ ಉತ್ತರ ನೀಡುತ್ತಾರೆ. ನಾನು ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ನಾನು ಅವಧಿಯಲ್ಲಿ ನೂರು ಕಾಂಗ್ರೆಸ್ ಕಚೇರಿ ಮಾಡಬೇಕು ಎಂಬುದು ನನ್ನ ಬಯಕೆ. ಈ ಸಂದರ್ಭದಲ್ಲಿ ಗಾಂಧಿ ಭಾರತ ಎಂಬ ಪುಸ್ತಕ ಬಿಡುಗಡೆ ಮಾಡಿಸಲಾಗುವುದು. ನೂರು ವರ್ಷಗಳ ಹಿಂದೆ ಗಾಂಧಿಜಿ ಅವರ ಅಧ್ಯಕ್ಷತೆಯಡಿ ಬೆಳಗಾವಿಯಲ್ಲಿ ನಡೆದ ಅಧಿವೇಶನದ ಕಾರ್ಯಕ್ರಮದ ದಾಖಲೆ ಆಧರಿಸಿ ಹಾಗೂ ನಮ್ಮ ಕಾರ್ಯಕ್ರಮಗಳನ್ನೂ ಸೇರಿಸಿ ಪುಸ್ತಕ ರಚಿಸಲಾಗಿದೆ ಎಂದು ತಿಳಿಸಿದರು.
ಇಂದಿರಾ ಗಾಂಧಿ ಅವರು ಬಡತನ ನಿರ್ಮೂಲನೆಗೆ 20 ಅಂಶಗಳ ಮೂಲಕ ಹೋರಾಟ ಆರಂಭಿಸಿದರು. ಉಳುವವನಿಗೆ ಭೂಮಿ ಕೊಟ್ಟಿದ್ದರೆ ಅದು ಇಂದಿರಾ ಗಾಂಧಿ ಅವರು. ಈ ಯೋಜನೆಯಲ್ಲಿ ಲಕ್ಷಾಂತರ ಜನ ಫಲಾನುಭವಿಗಳಿದ್ದಾರೆ. ರಾಜ್ಯದಲ್ಲಿ ಭಾರತ ಜೋಡೋ ಯಾತ್ರೆ ಮಾಡುವಾಗ ಮೊಳಕಾಲ್ಮೂರು ಸಮೀಪ ವೃದ್ಧ ಮಹಿಳೆಯೊಬ್ಬರು ಬಂದು ರಾಹುಲ್ ಗಾಂಧಿ ಅವರಿಗೆ ಸೌತೇಕಾಯಿ ತಂದು ಕೊಟ್ಟು, ಇದು ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದು ಎಂದು ಹೇಳಿದರು. ಇಂದಿರಾ ಗಾಂಧಿ ಅವರ ಕೆಲಸಗಳ ಪೈಕಿ ಬ್ಯಾಂಕುಗಳ ರಾಷ್ಟ್ರೀಕರಣ ಬಹು ದೊಡ್ಡ ನಿರ್ಧಾರ. ಅದು ಇಲ್ಲವಾಗಿದ್ದರೆ ನಮಗೆ ಸಾಲ ಕೊಡುವವರೇ ಇರುತ್ತಿರಲಿಲ್ಲ.
ನಾನು ಆರಂಭದಲ್ಲಿ ಮೊಟಾರ್ ಸೈಕಲ್ ಖರೀದಿ ಮಾಡಲು ಸೇಠುಗಳ ಬಳಿ ಹೋಗಿ ಬೇರೆಯವರ ಗ್ಯಾರಂಟಿ ನೀಡಬೇಕಿತ್ತು. ಈ ನಿರ್ಧಾರದಿಂದ ಬ್ಯಾಂಕುಗಳು ಜನರಿಗೆ ಸಾಲ ಸೌಲಭ್ಯ ನೀಡಿದರು. ಇಲ್ಲಿ ಜನಾರ್ದನ ಪೂಜಾರಿ ಅವರು ಎಲ್ಲಾ ಜನರಿಗೆ ಸಾಲ ಸಿಗುವಂತೆ ಮಾಡಿ, ಸಾಲದ ಪೂಜಾರಿ ಎಂದೇ ಹೆಸರು ಮಾಡಿದರು. ಅದರ ಪರಿಣಾಮವಾಗಿ ಇಂದು ಬ್ಯಾಂಕುಗಳು ಜನರ ಮನೆ ಬಾಗಿಲಿಗೆ ತಲುಪುವಂತಾಗಿದೆ. ಪ್ರಪಂಚದ ಅನೇಕ ದೊಡ್ಡ ಬ್ಯಾಂಕುಗಳು ಮುಳುಗಿದರೂ ನಮ್ಮ ದೇಶದ ಬ್ಯಾಂಕುಗಳು ಮುಳುಗಿಲ್ಲ. ಮನಮೋಹನ್ ಸಿಂಗ್ ಅವರ ದಿಟ್ಟ ನಿರ್ಧಾರಗಳ ಪರಿಣಾಮ ನಮ್ಮ ಬ್ಯಾಂಕುಗಳು ಸದೃಢವಾಗಿವೆ" ಎಂದರು.
ಇನ್ನು ಮಾಲೀನ್ಯ ನಿಯಂತ್ರಣ ಮಂಡಳಿಗಳನ್ನು ಆರಂಭಿಸಿದ್ದು, ಇಂದಿರಾ ಗಾಂಧಿ ಅವರು. ಅಂಗನವಾಡಿ ಆರಂಭಿಸಿದರು. ದೇಶದಲ್ಲಿ ಅಂಗನವಾಡಿ ಕಾರ್ಯಕರ್ತರ ನೇಮಕ ಮಾಡಿದ್ದು ಇಂದಿರಾ ಗಾಂಧಿ ಅವರು. ವೃದ್ಧಾಪ್ಯ, ವಿಧವಾ ಪಿಂಚಣಿ ಕೊಟ್ಟಿದ್ದು ಇಂದಿರಾ ಗಾಂಧಿ ಅವರು. ಅವರ ಯೋಜನೆಗಳನ್ನು ಯಾವುದೇ ಸರ್ಕಾರ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ. ನಮ್ಮ ಕಾಂಗ್ರೆಸ್ ಸರ್ಕಾರದಲ್ಲಿ ಆಹಾರ ಭದ್ರತಾ ಕಾಯ್ದೆ, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು 371ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಕೃಷ್ಣ ಆವರ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ ಲಾಲ ಕೃಷ್ಣಾ ಆಡ್ವಾಣಿ ಅವರು ಇದು ಸಾಧ್ಯವಿಲ್ಲ ಎಂದು ಬರೆದರು.ಆದರೆ ಕಾಂಗ್ರೆಸ್ ಸರ್ಕಾರ ಸಂವಿಧಾನದ ಮೂಲಕ ಜಾರಿಗೆ ತಂದಿತು ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
ಬೆಂಗಳೂರಲ್ಲಿ 'ಹೊಸ ಪಾದಚಾರಿ ನೀತಿ': ನೋಂದಣಿ ಆಗದವರ ವ್ಯಾಪಾರಕ್ಕಿಲ್ಲ ಅವಕಾಶ: ಡಿಕೆ ಶಿವಕುಮಾರ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications