ಯಾವುದೇ ಜಿಲ್ಲೆಯ ಉಸ್ತುವಾರಿ ಬೇಡ: ಸಿಎಂಗೆ ಪತ್ರದ ಮೂಲಕ ಕಾರಣ ಬಿಚ್ಚಿಟ್ಟ ಜಮೀರ್‌

ವಿಜಯನಗರ: ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ವಿಜಯನಗರ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿಧಾನಸಭಾ ಉಪಚುನಾವಣೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಮಯ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡದಂತೆ ಸಚಿವರು ಮನವಿ ಮಾಡಿದ್ದಾರೆ.

ಈ ಹಿಂದೆ ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಅಧ್ಯಯನ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನು ತಮಗೆ ನೀಡಲಾಗಿತ್ತು. ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

DK Shivakumar I Don t Want Charge of Any District Minister Zameer Writes to Karnataka CM

ಸಚಿವ ಜಮೀರ್ ಬರೆದ ಪತ್ರದಲ್ಲೇನಿದೆ?

ದಿನಾಂಕ 11.08.2026 ರ ಆದೇಶದನ್ವಯ ನನ್ನನ್ನು ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಯನ್ನು ನೀಡಿರುವುದು ಸರಿಯಷ್ಟೇ. ಆದರೆ, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿಭಾಯಿಸಲು ಸಮಯದ ಅಭಾವ ಇರುತ್ತದೆ. ಆದುದರಿಂದ ನನಗೆ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡದಂತೆ ತಮ್ಮಲ್ಲಿ ಕೋರುತ್ತೇನೆ.

ಮುಂದುವರೆದಂತೆ ದಿನಾಂಕ: 15.08.2026 ರಂದು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಹೊಣೆಗಾರಿಕೆ ನೀಡಿದ್ದು, ನಾನು ಹಾಜರಾಗಲು ಸಾಧ್ಯವಾಗದ ಕಾರಣ ಅದರಿಂದ ವಿನಾಯಿತಿ ನೀಡಲು ತಮ್ಮಲ್ಲಿ ಕೋರಲಾಗಿದೆ. ಇನ್ನು ಸದರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ನೀಡಲಾಗಿದ್ದು, ಈಗಾಗಲೇ ಈ ಸಂಬಂಧ ವರದಿಯನ್ನು ಸಲ್ಲಿಸಲಾಗಿರುತ್ತದೆ" ಎಂದು ಜಮೀರ್ ಅವರು ತಮ್ಮ ಪತ್ರದಲ್ಲಿ ಸವಿಸ್ತಾರವಾಗಿ ಉಲ್ಲೇಖಿಸಿದ್ದಾರೆ.

ಧ್ವಜಾರೋಹಣದ ಸಚಿವರ ಪಟ್ಟಿಯಲ್ಲಿ ಬದಲಾವಣೆ

ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಲ್ಲಿಸಿದ್ದ ಲಿಖಿತ ಮನವಿಗೆ ಮುಖ್ಯಮಂತ್ರಿ ತಕ್ಷಣ ಸ್ಪಂದಿಸಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರ ಮನವಿಯನ್ನು ಪರಿಗಣಿಸಿ, ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸಲಿರುವ ಸಚಿವರ ಪಟ್ಟಿಯಿಂದ ಅವರ ಹೆಸರನ್ನು ಕೈಬಿಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ಯಾವುದೇ ಅಡಚಣೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಹೊಸ ಆದೇಶವನ್ನು ಹೊರಡಿಸಲಾಗಿದೆ.

ಹೊಸ ಆದೇಶದಂತೆ, ಈ ಹಿಂದೆ ಉಡುಪಿ ಜಿಲ್ಲೆಯಲ್ಲಿ ಧ್ವಜಾರೋಹಣಕ್ಕೆ ನಿಯೋಜಿಸಲಾಗಿದ್ದ ಸಚಿವ ಬಸವಂತಪ್ಪ ಅವರನ್ನು ವಿಜಯನಗರ ಜಿಲ್ಲೆಗೆ ವರ್ಗಾಯಿಸಲಾಗಿದೆ. ಬಸವಂತಪ್ಪ ಅವರ ಬದಲಾವಣೆಯಿಂದ ತೆರವಾದ ಉಡುಪಿ ಜಿಲ್ಲೆಯ ಧ್ವಜಾರೋಹಣದ ಜವಾಬ್ದಾರಿಯನ್ನು ಸಚಿವ ರಿಜ್ವಾನ್ ಅರ್ಷದ್ ಅವರಿಗೆ ವಹಿಸಲಾಗಿದೆ. ಈ ಮೂಲಕ ಜಿಲ್ಲಾವಾರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಗಳಿಗೆ ಅಗತ್ಯವಿರುವ ಪರ್ಯಾಯ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+