ನನ್ನನ್ನು ಸೇರಿ 135 ಶಾಸಕರು ಹೈಕಮಾಂಡ್ ಪಾದದಲ್ಲಿದ್ದೇವೆ; ಡಿಕೆ ಶಿವಕುಮಾರ್

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಗಳಿಸಿದೆ. ಇದೀಗ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಈ ಮಧ್ಯೆ ಬಾಗಲೂರು ಬಳಿಯ ಫಾರ್ಮ್​ಹೌಸ್​ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಬೆಂಬಲಿಗರು ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, "ನಮ್ಮ ಬಳಿ 135 ಶಾಸಕರಿದ್ದಾರೆ. ನನ್ನನ್ನು ಸೇರಿದಂತೆ ಹೈಕಮಾಂಡ್ ಪಾದಕ್ಕೆ ಹಾಕಿದ್ದೇವೆ. ವರಿಷ್ಠರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ," ಎಂದು ಹೇಳಿದರು.

dk shivakumar

ಬಹುತೇಕ ಶಾಸಕರು ನನಗೇ ರಹಸ್ಯ ಮತದಾನ ಮಾಡಿದ್ದಾರೆ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಠಕ್ಕರ್ ನೀಡಿದ ಡಿ.ಕೆ. ಶಿವಕುಮಾರ್, "ಸಂತೋಷ.. ಯಾರು ಏನಾದರೂ ಹೇಳಲಿ. ನನ್ನ ಬಳಿ ಯಾವ ಶಾಸಕರೂ ಇಲ್ಲ. 135 ಶಾಸಕರು ನಮ್ಮವರೇ, ನಾನು ಸೇರಿದಂತೆ ಹೈಕಮಾಂಡ್ ಪಾದಕ್ಕೆ ಹಾಕಿದ್ದೀವಿ," ಎಂದರು.

ಭಾನುವಾರದ ಸಭೆಯಲ್ಲಿ ನಾವು ಒನ್ ಲೈನ್‌ ನಿರ್ಣಯ ಮಾಡಿದ್ದೇವೆ. ನನಗೆ ಯಾವ ಶಾಸಕರು ಏನ್ ಮಾಡಿದ್ದಾರೆ ಗೊತ್ತಿಲ್ಲ. ನನ್ನ ಜೊತೆಗೆ 135 ಶಾಸಕರು ಇದ್ದಾರೆ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇನೆ. ನನ್ನ ಹತ್ರ ಯಾರು ಇಲ್ಲ. ಕಾಂಗ್ರೆಸ್ ಪಕ್ಷದ 135 ಜನ ಶಾಸಕರಲ್ಲಿ ಯಾರು ಬೇಕಾದರೂ ಸಿಎಂ ಹುದ್ದೆಗೆ ಆಸೆ ಪಡಬಹುದು ಎಂದಿದ್ದಾರೆ.

"ಇಂದು ನನ್ನ ಹುಟ್ಟುಹಬ್ಬ, ಗುರುಗಳನ್ನು ಭೇಟಿ ಮಾಡಿದ ಬಳಿಕ ಸಂಜೆ 7 ಗಂಟೆಗೆ ದೆಹಲಿಗೆ ತೆರಳುತ್ತೇನೆ. ನಾನು ಯಾರ ಸಂಖ್ಯಾಬಲದ ಬಗ್ಗೆ ಮಾತನಾಡುವುದಿಲ್ಲ. ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗಳಿಸಿದೆ," ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷನಾಗಿರುವ ನನಗೆ ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ. ನಾನು ಏಕಾಂಗಿ, ಏಕಾಂಗಿಯಾಗಿಯೇ ಹೋರಾಟ ಮಾಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ.

"ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾನು ಮಾತು ಕೊಟ್ಟಿದ್ದೆ. ನಾನು ಯಾರ ಬಗ್ಗೆಯೂ ಮಾತನಾಡಲ್ಲ, ನಾನು ಸಿಂಗಲ್ ಮ್ಯಾನ್. ನಾನು ಧೈರ್ಯದಲ್ಲಿ, ವಿಶ್ವಾಸದಲ್ಲಿ ನಂಬಿಕೆಯಿಟ್ಟಿದ್ದೇನೆ. ಹಿಂದಿನ ಐದು ವರ್ಷಗಳಲ್ಲಿ ಏನಾಗಿದೆ ಎಂದು ಹೇಳುವುದಿಲ್ಲ, ಮುಂದಿನ ದಿನಗಳಲ್ಲಿ ಇದರ ಬಗ್ಗೆ ಮಾಡಿ ತೋರಿಸುತ್ತೇನೆ," ಎಂದರು.

"ಸೋತಾಗ ಧೈರ್ಯದಿಂದ ಇರಬೇಕು, ಗೆದ್ದಾಗ ಉದಾರ ಮನಸ್ಸಿನಿಂದ ಇರಬೇಕು ಎಂದು ಮಹಾತ್ಮ ಗಾಂಧಿಯವರು ಹೇಳಿದಂತೆ ನಡೆಯುತ್ತಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಅರಿವು ಇದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ವಿಶ್ವಾಸ ಇದೆ. ಈ ವಿಚಾರವನ್ನು ಅವರಿಗೆ ಬಿಡುತ್ತೇವೆ," ಎಂದು ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+