ಐದು ವರ್ಷಗಳ ಕಾಲ ನಾನೇ ಸಿಎಂ ಎಂಬ ಸಿದ್ದರಾಮಯ್ಯ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ನವೆಂಬರ್‌ 02: ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ನಾನೇ ಐದು ವರ್ಷ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೆಗೆ ನಾನು ಈ ವಿಚಾರವಾಗಿ ಬಹಿರಂಗವಾಗಿ ಮಾತನಾಡುವುದಿಲ್ಲ. ಪಕ್ಷ ಹೇಳಿದ್ದನ್ನು ಪಾಲಿಸುವುದಷ್ಟೆ ನಮಗೆ ಗೊತ್ತು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.

ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕಿತ್ತಾಟ ಇಲ್ಲ. ಕಿತ್ತಾಟ ಇರೋದು ಬಿಜೆಪಿಯಲ್ಲಿ. ಹೀಗಾಗಿ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲು ಆಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

DK shivakumar: I Will Follow What The Party Says

ಕಾಂಗ್ರೆಸ್ ನಾಯಕರು ಕಚ್ಚಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿ ಯಾವುದೇ ಜಗಳ ಇಲ್ಲ. ಬಿಜೆಪಿ ಮುಖಂಡರು ತಮ್ಮ ವೈಫಲ್ಯ ಮುಚ್ಚಿಡಲು ಈ ರೀತಿ ಮಾತನಾಡುತ್ತಾರೆ. ನಮ್ಮ ಶಾಸಕರುಗಳಿಗೆ ಚಾಕೊಲೇಟ್ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದರು.

ಆಪರೇಶನ್ ಕಮಲ ಮಾಡುತ್ತಿಲ್ಲ, ಬೇಕಾದರೆ ಅವರೇ ತನಿಖೆ ಮಾಡಿಸಲಿ ಎಂಬ ಯಡಿಯೂರಪ್ಪ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದ ಅವರು, ಯಡಿಯೂರಪ್ಪ ಅವರ ಸಲಹೆ ಗಮನದಲ್ಲಿ ಇಟ್ಟುಕೊಳ್ಳುತ್ತೇವೆ ಎಂದು ತಿಳಿಸಿದರು.

ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸಪೇಟೆಯ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ದೇವರ ದರ್ಶನ ಪಡೆದ ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಲ್ಲಾರಿಗೂ ಅವರದ್ದೇ ನಂಬಿಕೆಗಳಿರುತ್ತವೆ. ಸಮಾಜಕ್ಕೆ ಒಳ್ಳೆಯದಾದರೆ ನಂಬೋಣ, ಅನಾನುಕೂಲವಾದರೆ ನಂಬುವ ಹಾಗಿಲ್ಲ ಎಂದರು.

ಕರ್ನಾಟಕ ಸಂಭ್ರಮ - 50 ಕ್ಕೆ ಚಾಲನೆ ನೀಡಿ ಇಡೀ ವರ್ಷ ಆಚರಣೆ ಯಾಗಲಿದೆ. ದೇವರಾಜ ಅರಸು ಅವರು 1973 ರಲ್ಲಿ ಮುಖ್ಯಮಂತ್ರಿಗಳಾಗಿದ್ದರು, ನಾನು 2023 ರಲ್ಲಿ ಮುಖ್ಯ ಮಂತ್ರಿಯಾಗಿರುವುದು ಕಾಕತಾಳೀಯ ಎಂದರು.ಅವರೂ ಇಲ್ಲಿಂದಲೇ ಚಾಲನೆ ನೀಡಿದ್ದರು, ನಾನೂ ಇಲ್ಲಿಂದಲೇ ಚಾಲನೆ ನೀಡಿದ್ದೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+