BPL Card: ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ, ಯಾರೂ ಆತಂಕಪಡುವ ಅಗತ್ಯವಿಲ್ಲ: ಡಿ ಕೆ ಶಿವಕುಮಾರ್

ಬೆಂಗಳೂರು, ನವೆಂಬರ್‌ 20: ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ ನೀಡಿದರು.

ಆರ್ಹರ ಬಿಪಿಎಲ್ ಕಾರ್ಡ್ ಗಳು ಕೂಡ ರದ್ದಾಗುತ್ತಿವೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿ, ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರ್ಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರ್ಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದರು.

DK Shivakumar If The BPL Card Of The Eligible Person Is Cancelled We Will Reissue It

ಕಾರ್ಡ್ ನೀಡುವಾಗ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ, ಅದೇ ರೀತಿ ಕಾರ್ಡ್ ರದ್ದು ಮಾಡುವಾಗ ಮಾಡಬಹುದಲ್ಲವೇ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಂಬಂಧಪಟ್ಟ ಸಚಿವರ ಜತೆ ಚರ್ಚೆ ಮಾಡಿ ನಿರ್ದೇಶನ ನೀಡಿದ್ದಾರೆ. ಯಾರ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂದು ಆಯಾ ಕ್ಷೇತ್ರಗಳ ಶಾಸಕರಿಗೆ ಪಟ್ಟಿ ರವಾನಿಸುತ್ತೇವೆ. ಅವರು ಒಂದು ತಂಡ ರಚಿಸಿ ಯಾವ ಅರ್ಹರಿಗೆ ಕಾರ್ಡ್ ರದ್ದಾಗಿದೆ ಎಂದು ಪರಿಶೀಲನೆ ಮಾಡುತ್ತಾರೆ. ಇನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ತಂಡದವರಿಗೂ ಮನೆ ಮನೆಗೆ ಹೋಗಿ, ಯಾರಿಗಾದರೂ ಅನ್ಯಾಯ ಆಗಿದ್ದರೆ ಅದನ್ನು ಸರಿಪಡಿಸುವಂತೆ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಮುಖ್ಯಮಂತ್ರಿಗಳು ಹಾಲಿನ ವಿಚಾರವಾಗಿ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ನಮ್ಮ ನಂದಿನಿ ಹಾಲಿನ ಮಾರುಕಟ್ಟೆ ವಿಸ್ತರಿಸಲು ತೆರಳುತ್ತಿದ್ದಾರೆ. ನಾನು ಕೂಡ ಇದಕ್ಕೆ ತೆರಳಬೇಕಾಗಿತ್ತು. ಆದರೆ ನಾಳೆ ಮೀನುಗಾರರ ದಿನ ಕಾರ್ಯಕ್ರಮ ಇರುವುದರಿಂದ ನಾನು ಮುರುಡೇಶ್ವರಕ್ಕೆ ತೆರಳುತ್ತಿದ್ದೇನೆ. ನಂದಿನಿ ಹಾಲಿಗೆ ಮಾರುಕಟ್ಟೆ ವಿಸ್ತರಣೆ ಮಾಡಿದರೆ ನಮ್ಮ ರೈತರಿಗೆ ನೆರವಾಗುತ್ತದೆ. ಹೀಗಾಗಿ ಈ ಭೇಟಿಗೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ನಕ್ಸಲ್ ನಾಯಕ ವಿಕ್ರಂ ಗೌಡ ಅವರ ಎನ್ ಕೌಂಟರ್ ಖಂಡಿಸಿ ಎಡಪಂಥೀಯರು ಸರ್ಕಾರದ ವಿರುದ್ಧ ನಿಂತಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಗೃಹಮಂತ್ರಿಗಳು ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ತಿಳಿಸಿದರು. ಕೆಲವು ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವನ್ನು ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+