BREAKING: ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಹೈಕೋರ್ಟ್‌ನಿಂದ 'ಬಿಗ್ ರಿಲೀಫ್'
ಬೆಂಗಳೂರು, ಆಗಸ್ಟ್ 29: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹಾಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಪ್ ನೀಡಿದೆ. ಸಿಬಿಐ ತನಿಖೆಗೆ ವಹಿಸಿದ್ದನ್ನು ವಾಪಾಸ್ ಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಹಾಗೂ ಸಿಬಿಐನಿಂದ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ಸದ್ಯ ಡಿಕೆ ಶಿವಕುಮಾರ್ ಅವರಿಗೆ ವಿಭಾಗೀಯ ಪೀಠ ಬಿಗ್ ರಿಲೀಫ್ ನೀಡಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆ ಅನುಮತಿ ವಿಚಾರ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಸಿಬಿಐ ಹಾಗೂ ಬಿಜೆಪಿ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಕರಣ ವಿಚಾರಣೆಗೆ ಅರ್ಹವಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತು ಸುಪ್ರೀಂ ಕೋರ್ಟ್ ತಿರ್ಮಾನಿಸಬೇಕು ಎಂದು ಹೇಳಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ತೀರ್ಪು ಪ್ರಕಟಿಸಿದೆ.
ಕೇಂದ್ರದ ತನಿಖಾ ಸಂಸ್ಥೆಗಳ ಮೇಲೆ ಕಾಂಗ್ರೆಸ್ ನಾಯಕರಿಗೆ ನಂಬಿಕೆ ಇಲ್ಲ. ಈ ಬಗ್ಗೆ ಅವರೇ ಹೇಳಿಕೊಂಡಿದ್ದಾರೆ. ಹೀಗಿದ್ದಾಗ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಅಂದಿನ ರಾಜ್ಯ ಬಿಜೆಪಿ ಸರ್ಕಾರ ನೀಡಿತ್ತು. ಬಳಿಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಸಿಬಿಐಗೆ ನೀಡಿದ್ದ ತನಿಖೆಯ ಅನುಮತಿ ಹಿಂಪಡೆದು ಸರ್ಕಾರ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಅಧಿಕಾರಿಗಳು ರಾಜ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.
ಡಿಕೆ ಶಿವಕುಮಾರ್ ನಿರಾಳ
ಇದೀಗ ಹೈಕೋರ್ಟ್ ವಿಭಾಗೀಯ ಪೀಠವು ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಅರ್ಜಿಯನ್ನು ವಜಾಗೊಳಿಸಿದೆ. ಈ ತೀರ್ಪಿನಿಂದ ಡಿಕೆ ಶಿವಕುಮಾರ್ ಅವರು ತುಸು ನಿರಾಳರಾಗಿದ್ದಾರೆ. ಇಂದು ಬೆಳಗ್ಗೆ ಪ್ರತಿಕ್ರಿಯಿಸಿದ್ದ ಅವರು, ಹೈಕೋರ್ಟ್ ಯಾವುದೇ ತೀರ್ಪು ಕೊಟ್ಟರು ಅದನ್ನು ಸ್ವೀಕರಿಸುವೆ. ನನಗೆ ದೇವರು ಹಾಗೂ ನ್ಯಾಯಾಂಗ ಮೇಲೆ ನಂಬಿಕೆ ಇದೆ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications