ಮಹಿಳೆಯರಿಗೆ ಮೀಸಲಾತಿ: ಡಿ ಕೆ ಶಿವಕುಮಾರ್ ಮಹತ್ವ ಮಾಹಿತಿ
ಬೆಂಗಳೂರು, ಡಿಸೆಂಬರ್ 04: ಮಹಿಳೆಯರು ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್. ಪಂಚಾಯ್ತಿಯಲ್ಲಿ ನಾವು 50% ಮೀಸಲಾತಿ ನೀಡಿದ್ದು, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ. ಇದರಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 70 ಕ್ಷೇತ್ರಗಳಲ್ಲಿ ಮಹಿಳಾ ಶಾಸಕಿಯರು ಆಯ್ಕೆಯಾಗಲಿದ್ದಾರೆ. ನಾಯಕತ್ವ ಗುಣ ಇರುವ ಸರ್ಕಾರಿ ಮಹಿಳಾ ನೌಕರರಿಗೆ ನಾವು ಟಿಕೆಟ್ ನೀಡಿ ಗೆಲ್ಲಿಸಿದ್ದೇವೆ. ಹಲವರು ಶಾಸಕಿಯರಾಗಿದ್ದಾರೆ. ಮೀಸಲಾತಿ ಬಂದ ನಂತರ ಯಾರು ನಾಯಕಿಯರಾಗುತ್ತೀರೋ ಗೊತ್ತಿಲ್ಲ ಎಂದು ಹೇಳಿದರು.

ಮಹಿಳಾ ನೌಕಕರ ಸಂಘಕ್ಕೆ ಜಾಗದ ಮನವಿ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಎಂ ಹಾಗೂ ನನ್ನ ಬಳಿ ಪ್ರಸ್ತಾಪ ಮಾಡಿದರು. ಸಿಎಂ ಅವರು ಜಾಗ ನೀಡಿ ಎಂದು ಮುಕ್ತವಾಗಿ ಹೇಳಿದ್ದಾರೆ. ನಿಮಗೆ ಅಗತ್ಯವಾಗಿರುವ ಜಾಗವನ್ನು ನೀಡುತ್ತೇವೆ. ಹೆಣ್ಣು ಮಗು ಕಲಿತರೆ ಒಂದು ಕುಟುಂಬ ಹಾಗೂ ಸಮಾಜವೇ ಕಲಿತಂತೆ ಎಂದು ನೆಹರೂ ಅವರು ನಮಗೆ ಸಂದೇಶ ನೀಡಿದ್ದಾರೆ. ಮಹಿಳೆಯರು ಸಹಕಾರ ನೀಡದಿದ್ದರೆ ನಮಗೆ ರಾಜಕಾರಣ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.
ಮುಂದಿನ ಒಂದು ವರ್ಷದಲ್ಲಿ ಅರಮನೆ ಮೈದಾನದಲ್ಲಿ ದೊಡ್ಡ ಮಟ್ಟದ ಮಹಿಳಾ ಸಮಾವೇಶವನ್ನು ಮಾಡಲು ನೀವು ರೂಪುರೇಷೆ ಸಿದ್ಧಮಾಡಿಕೊಳ್ಳಿ. ಅದಕ್ಕೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು. ಈ ಬಾರಿಯ ಚಳಿಗಾಲದ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತಂದು ಮಹಿಳೆಯರಿಗೆ ಶಕ್ತಿ ತುಂಬಬೇಕು ಎಂದು ಹೆಚ್.ಕೆ ಪಾಟೀಲ್ ಅವರು ನನ್ನ ಬಳಿ ಹೇಳಿದ್ದಾರೆ ಎಂದು ತಿಳಿಸಿದರು.
ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ. ನಾನು ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದಾಗಿನಿಂದ. ಅಂದರೆ 40 ವರ್ಷಗಳಿಂದ ಈ ಸಂಘವನ್ನು ಗಮನಿಸಿಕೊಂಡು ಬಂದಿದ್ದೇನೆ. ನಿಮ್ಮ ಒಗ್ಗಟ್ಟು ಬಿಡಬೇಡಿ. ಲಿಂಗಾಯತರ, ಹಿಂದುಳಿದ ವರ್ಗಗಳ, ಒಕ್ಕಲಿಗರ, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಸಂಘ ಎಂದು ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಈ ಆಲೋಚನೆಯನ್ನು ನಿಮ್ಮ ತಲೆಯಿಂದ ತೆಗೆದುಹಾಕಿ ಎಂದು ಕಿವಿಮಾತು ಹೇಳಿದರು.
ಸಂಘಟನೆ ಬಹಳ ಮುಖ್ಯ. ಶಿಕ್ಷಣ ಇಲಾಖೆಯಲ್ಲಿ 50%ಗೂ ಹೆಚ್ಚು ಜನ ಇದ್ದೀರಿ. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು. ನಾನಾಗಲಿ, ಸಿದ್ದರಾಮಯ್ಯ ಅವರಾಗಲಿ, ಯಾವುದೇ ವ್ಯಕ್ತಿಯಾಗಲಿ ಮಹಿಳೆಯರ ಕೊಡುಗೆ ಇಲ್ಲದೆ ಯಾವುದೇ ಪುರುಷ ಯಶಸ್ವಿಯಾಗಲಾರ. ನಾವೆಲ್ಲರೂ ರಾಜಕಾರಣ ಮಾಡಿಕೊಂಡು ಮನೆಗೆ ಸಮಯ ನೀಡುವುದಿಲ್ಲ. ನಮ್ಮ ಮನೆ ನಡೆಸಿ ನಿಭಾಯಿಸುತ್ತಿರುವವರು ಮಹಿಳೆಯರು. ನನಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನನಗಿಂತ ಹೆಚ್ಚು ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಅವರು ಈಗ ಮಾಡಿರುವ ಸಾಧನೆ ನಾನು ಆ ವಯಸ್ಸಿನಲ್ಲಿ ಮಾಡಿರಲಿಲ್ಲ ಎಂದು ಬಣ್ಣಿಸಿದರು.
ಮಹಿಳೆಯರು ಪುರುಷರಿಗಿಂತ ಹೆಚ್ಚು ಸಮರ್ಥರಿದ್ದೀರಿ. ಡಿಜಿಯಾಗಿ, ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ಆಡಳಿತದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ನೀವು ಯಾರಿಗೂ ಕಮ್ಮಿ ಇಲ್ಲ ಎಂದು ಸಾಬೀತುಪಡಿಸಿದ್ದೀರಿ. ನೀವುಗಳು ದೂರಿನ ಪೆಟ್ಟಿಗೆಯಂತೆ ಆಗಬಾರದು. ನಿಮ್ಮ ಹಕ್ಕನ್ನು ಚಲಾಯಿಸಬೇಕು. ಹೆಣ್ಣು ಕುಟುಂಬದ ಕಣ್ಣು ಎಂದು ನಾವು ನಂಬಿದ್ದೇವೆ. ನಾವು ಎಲ್ಲೇ ಹೋದರು, ಗ್ರಾಮ ದೇವತೆ ಯಾವುದು ಎಂದು ಕೇಳುತ್ತೇವೆ. ಬೆಂಗಳೂರಿನ ಗ್ರಾಮ ದೇವತೆ ಅಣ್ಣಮ್ಮ. ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ. ನಾಡ ದೇವತೆ ಚಾಮುಂಡೇಶ್ವರಿ ಎಂದು ಪರಿಗಣಿಸಿದ್ದೇವೆ. ಹೀಗೆ ಮಹಿಳೆಯರಿಗೆ ಉನ್ನತ ಸ್ಥಾನ ನೀಡಲಾಗಿದೆ ಎಂದು ತಿಳಿಸಿದರು.
ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ.
-
Siddaramaiah: ಡಿಕೆ ಶಿವಕುಮಾರ್ದು ಕಾಂಗ್ರೆಸ್ಗೆ ರಾಜಿಯಿಲ್ಲದ ನಿಷ್ಠೆ: ಸಿದ್ದರಾಮಯ್ಯ, ಸಿಎಂ ಕುರ್ಚಿ ಚರ್ಚೆ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications