ಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆ: ಮಹತ್ವ ಮಾಹಿತಿ ಕೊಟ್ಟ ಡಿ ಕೆ ಶಿವಕುಮಾರ್

ನವದೆಹಲಿ, ಮಾರ್ಚ್‌ 28: ರಾಜ್ಯ ರಾಜಕೀಯದಲ್ಲಿ ಮಾರ್ಚ್‌ ಬಳಿಕ ಭಾರೀ ಬದಲಾವಣೆಯಾಗಲಿದೆ ಎಂದು ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿತ್ತು. ಬಜೆಟ್‌ ಅಧಿವೇಶನದ ಬಳಿಕ ಮುಖ್ಯಮಂತ್ರಿ ಬದಲಾವಣೆಯಾಗುತ್ತಾ ಅಥವಾ ಕೆಪಿಸಿಸಿ ಅಧ್ಯಕ್ಷರು ಬದಲಾಗುತ್ತಾರಾ ಎನ್ನುವ ಗುಸು ಗುಸು ಕೇಳಿ ಬಂದಿತ್ತು. ಇದೀಗ ಕೆಪಿಸಿಸಿಯಲ್ಲಿ ಮಹತ್ವದ ಬದಲಾವಣೆಯನ್ನ ತರಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ.

ಈ ಕುರಿತು ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. ಪಕ್ಷವು ಸರ್ಕಾರಕ್ಕಿಂತ ದೊಡ್ಡದು, ಹೀಗಾಗಿ ಹೈಕಮಾಂಡ್ ನಾಯಕರು ಜಿಲ್ಲಾ ಅಧ್ಯಕ್ಷರಿಗೆ ವಿಶೇಷ ಕಾರ್ಯಕ್ರಮ ನೀಡಿದ್ದಾರೆ ಎಂದು ಹೇಳಿದರು.

DK Shivakumar informed about significant changes in KPCC

ಈ ಸಭೆ ವೇಳೆ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮಾಡುವ ಸಂದರ್ಭದಲ್ಲಿ ನಿಮ್ಮ ಅಭಿಪ್ರಾಯ ಪಡೆಯಲಾಯಿತೇ?, ನಿಮ್ಮನ್ನು ವಿಶ್ವಾಸಕ್ಕೆ ಪಡೆದರೆ ಎಂದು ಕೇಳಿದ್ದಾರೆ. ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು. ಸದಸ್ಯತ್ವ ಅಭಿಯಾನ ಹೇಗೆ ಮಾಡಬೇಕು, ಮತದಾರರ ಪಟ್ಟಿ ಪರಿಶೀಲನೆ, ಬಿಎಲ್ ಓಗಳ ನೇಮಕ, ಸಾಮಾಜಿಕ ಜಾಲತಾಣಗಳ ಪರಿಣಾಮ ಬಳಕೆ, ಪಕ್ಷಕ್ಕೆ ದೇಣಿಗೆ ಸಂಗ್ರಹ ಸೇರಿದಂತೆ ಅನೇಕ ಮಾರ್ಗದರ್ಶನ ನೀಡಿದರು. ಮುಂದೆ ಗುಜರಾತಿನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಶಕ್ತಿ ತುಂಬುವ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

Take a Poll

ಜಿಲ್ಲಾ ಉಸ್ತುವಾರಿ ಸಚಿವರು, ತಮ್ಮ ಉಸ್ತುವಾರಿ ಜಿಲ್ಲೆಗೆ ಭೇಟಿ ನೀಡಿದಾಗ ಅಲ್ಲಿನ ಕಾಂಗ್ರೆಸ್ ಕಚೇರಿಗೆ ಹೋಗಿ ಕಾರ್ಯಕರ್ತರನ್ನು ಭೇಟಿ ಮಾಡಬೇಕು. ಜಿಲ್ಲಾ ಪ್ರವಾಸ ಮಾಡುವಾಗ ಜಿಲ್ಲಾ ಅಧ್ಯಕ್ಷರನ್ನು ಜತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಅಧ್ಯಕ್ಷರುಗಳು ಕೂಡ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದು, ನೀವು ಯಾರ ಮೇಲೂ ಅವಲಂಬಿತರಾಗಬೇಡಿ ನಾವು ನಿಮಗೆ ರಕ್ಷಣೆ ನೀಡುವುದಾಗಿ ಧೈರ್ಯ ತುಂಬಿದರು. ಪಕ್ಷ ಸಂಘಟನೆಗೆ ಹೊಸ ಸ್ವರೂಪ ನೀಡಲು ಮಲ್ಲಿಕಾರ್ಜುನ ಖರ್ಗೆ ಅವರು ಕೈಗೊಂಡಿರುವ ಹೊಸ ಕ್ರಮಗಳನ್ನು ನಾನು ಸ್ವಾಗತಿಸುತ್ತೇನೆ" ಎಂದರು.

ಹಾಲಿನ ದರ ಏರಿಕೆ ಹೆಚ್ಚಳ ವಿರೋಧಿಸಿ, ಇದು ಈಸ್ಟ್ ಇಂಡಿಯಾ ಸರ್ಕಾರ ಎಂಬ ಕುಮಾರಸ್ವಾಮಿ ಟೀಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಕುಮಾರಸ್ವಾಮಿ ಅವರು ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ? ಅವರಿಗೆ ಕಾಳಜಿ ಇದ್ದರೆ, ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್ ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ ಎಂದು ತಿರುಗೇಟು ನೀಡಿದರು. ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ, ಸರ್ಕಾರಕ್ಕೆ ಹೋಗಲಿದೆ ಎಂಬ ಕುಮಾರಸ್ವಾಮಿ ಆರೋಪದ ಕುರಿತು ಮಾತನಾಡಿ, ರಾಜ್ಯ ಸರ್ಕಾರಕ್ಕೆ ಹೇಗೆ ಹೋಗುತ್ತದೆ. ಹಾಗಿದ್ದರೆ ಕುಮಾರಸ್ವಾಮಿ ಅವರಿಗೆ ಹಾಲು ಒಕ್ಕೂಟದ ವ್ಯವಸ್ಥೆ ಬಗ್ಗೆ ಗೊತ್ತೇ ಇಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರು ತಮ್ಮ ಸಹೋದರನ ಬಳಿ ಮಾಹಿತಿ ಪಡೆಯಲಿ ಎಂದು ಹರಿಹಾಯ್ದರು.

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಪತ್ರ ಬರೆದಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಈ ಪತ್ರ ನೋಡುತ್ತೇವೆ, ಪರಿಶೀಲನೆ ಮಾಡಿ, ಚರ್ಚಿಸುತ್ತೇವೆ. ಆನಂತರ ತೀರ್ಮಾನ ಮಾಡುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+