ಡಿಕೆಶಿ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ: ಧೈರ್ಯ ತುಂಬಿದ ಸಿದ್ದರಾಮಯ್ಯ
Recommended Video

ಬೆಂಗಳೂರು, ಜೂನ್ 1: ಗುರುವಾರ ಮಾಜಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅವರ ಆಪ್ತರು ಮತ್ತು ಸಂಬಂಧಿಕರ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಒಟ್ಟು 11 ಕಡೆಗಳಲ್ಲಿ ದಾಳಿ ನಡೆದಿತ್ತು.
ಈ ಸಂಬಂಧ ಟ್ಟೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ಡಿ.ಕೆ. ಶಿವಕುಮಾರ್ ಒಬ್ಬಂಟಿಯಲ್ಲ. ಕಾಂಗ್ರೆಸ್ ಪಕ್ಷ ಅವರ ಜೊತೆಗಿದೆ," ಎಂದು ಧೈರ್ಯ ತುಂಬಿದ್ದಾರೆ.
ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ. ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ.@INCKarnataka @INCIndia
— Siddaramaiah (@siddaramaiah) June 1, 2018
"ರಾಜಕೀಯ ದ್ವೇಷ ಸಾಧನೆಗೆ ನರೇಂದ್ರ ಮೋದಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ," ಎಂದು ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.

ಜೊತೆಗೆ, "ಇಂತಹ ಬೆದರಿಕೆಗೆ ಕಾಂಗ್ರೆಸ್ ನಾಯಕರು ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಡಿ.ಕೆ.ಶಿವಕುಮಾರ್ ಒಬ್ಬಂಟಿಯಲ್ಲ, ಕಾಂಗ್ರೆಸ್ ಪಕ್ಷ ಜತೆಗಿದೆ," ಎಂದು ಮಾಜಿ ಮುಖ್ಯಮಂತ್ರಿ ಧೈರ್ಯ ತುಂಬಿದ್ದಾರೆ.












Click it and Unblock the Notifications