ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆದ್ರೆ ನೀವೇ ಹೊಣೆ: ಜಿಲ್ಲಾಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ
CM DK Shivakumar: ನೀಟ್ ಪ್ರಶ್ನೆ ಪತ್ರಿ ಸೋರಿಕೆ ಪ್ರಕರಣ ಸಂಬಂಧ ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇದೀಗ ಕೊನೆಗೂ ಎಚ್ಚತ್ತುಕೊಂಡ ಧರ್ಮೇಂದ್ರ ಪ್ರಧಾನ್ ಶನಿವಾರ (ಜುಲೈ 25) ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ಡಿಕೆ ಶಿವಕುಮಾರ್ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಈ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಧಿಕಾರಿಗಳಿಗೆ ಖಡಕ್ ಸೂಚನೆ
ಚಿತ್ರದುರ್ಗದ ಮುರುಘಾ ಮಠದ ಅನುಭವ ಮಂಟಪದಲ್ಲಿ ಶನಿವಾರ (ಜುಲೈ 25) ನಡೆದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ನಂತರ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಶಾಸಕರು ಮುಂದಿಟ್ಟ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿದರು. ಶೀಘ್ರ ಬಗೆಹರಿಸಬಹುದಾದ ಸಮಸ್ಯೆಗಳನ್ನು ದಾಖಲಿಸಿಕೊಳ್ಳಬೇಕು. ಶಾಸಕರು ಹೇಳಿದ ಎಲ್ಲ ಅಂಶಗಳು ದಾಖಲಾಗಬೇಕೆಂದು ಅಧಿಕಾರಿಗಳಿಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ
'ಇದೀಗ ರಾಜ್ಯದಲ್ಲಿ ನೇಮಕಾತಿಗಳನ್ನು ಘೋಷಣೆ ಮಾಡಲಾಗಿದೆ. ಸುಮಾರು 70,000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೇಮಕಾತಿ ಪರೀಕ್ಷೆ ನಡೆಯುವ ಕಡೆಗಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಸಬೇಕು. ಪ್ರಶ್ನೆ ಪತ್ರಿಕೆಗೆ ಹೆಚ್ಚಿನ ಭದ್ರತೆ ಒದಗಿಸಬೇಕು. ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಕೆ, ಹಂಚಿಕೆ ಹೀಗೆ ಪ್ರತಿಯೊಂದು ಹಂತವೂ ದಾಖಲಾಗಬೇಕು. ನೀಟ್ ಹಗರಣ ಎಲ್ಲರ ಗಮನದಲ್ಲಿರಲಿ. ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಅಧಿಕಾರಿಗಳೇ ಹೊಣೆ,' ಎಂದು ಎಚ್ಚರಿಕೆ ಸಂದೇಶ ನೀಡಿದರು.
ಮುಂದುವರಿದು ಮಾತನಾಡಿದ ಅವರು, 'ಸರ್ಕಾರ ಜನರ ಮನೆ ಬಾಗಿಲಿಗೆ ಹೋಗಬೇಕು. ಜನರು ಸರ್ಕಾರದ ಬಾಗಿಲಿಗೆ ಬರಬಾರದು. ಅಧಿಕಾರಿಗಳು ಸಮಸ್ಯೆಗಳಿಗೆ ಪರಿಹಾರ ಹುಡುಕಬೇಕು. ಸುಮ್ಮನೆ ಸಮಸ್ಯೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಅಧಿಕಾರ ದುರುಪಯೋಗ ಮಾಡಿಕೊಂಡರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯ ಸೂಚನೆ ನೀಡಿದ್ದಾರೆ. ಇನ್ನೂ 'ಹೊಸ ಬೋರ್ ವೆಲ್ ಕೊರೆಯುವ ಮುಂಚಿನ ಹಾಗೂ ನಂತರದ ವಿಡಿಯೋ, ಫೋಟೋಗಳನ್ನು ದಾಖಲಿಸಬೇಕು. ಜಿಪಿಎಸ್ ಸಹ ನಮೂದಿಸಬೇಕು. ಬೋರ್ ವೆಲ್ ಆಳದ ಬಗ್ಗೆಯೂ ದಾಖಲಿಸಬೇಕು. ಅಕ್ರಮಕ್ಕೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.


Click it and Unblock the Notifications
