ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ: ಮಧ್ಯಾಹ್ನ ಭವಿಷ್ಯ ನಿರ್ಧಾರ
Recommended Video

ನವದೆಹಲಿ, ಸೆಪ್ಟೆಂಬರ್ 15: ತಮ್ಮ ದೆಹಲಿ ಫ್ಲ್ಯಾಟ್‌ನಲ್ಲಿ 4 ಕೋಟಿ ರೂ. ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ನಡೆಯುತ್ತಿದೆ.
ಬೆಳಿಗ್ಗೆ ಅರ್ಜಿಯನ್ನು ಕೈಗೆತ್ತಿಕೊಂಡ ಆರ್ಥಿಕ ಅಪರಾಧಗಳ ನ್ಯಾಯಾಲಯ, ಅದರ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ಅಕ್ರಮ ಹಣ ಪತ್ತೆಯಾಗಿರುವ ಪ್ರಕರಣದಲ್ಲಿ ಇನ್ನೂ ಐವರ ವಿರುದ್ಧ ಆದಾಯ ತೆರಿಗೆ ಇಲಾಖೆ ಪ್ರಕರಣ ದಾಖಲಿಸಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಜಾಮೀನು ನೀಡದಂತೆ ಆದಾಯ ಇಲಾಖೆಯ ಪರ ವಕೀಲರು ನ್ಯಾಯಾಲಯವನ್ನು ಕೋರಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ ಅಕ್ರಮ ಹಣವನ್ನು ವಶಪಡಿಸಿಕೊಂಡಿತ್ತು.
ಆರೋಪಗಳು ಐಟಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ತೆರಿಗೆ ನೀಡದೆ ಉಳಿಸಿದ ಕೋಟ್ಯಂತರ ರೂ. ಹಣ ಪತ್ತೆಯಾಗಿದೆ. ಅವರಿಗೆ ಜಾಮೀನು ನೀಡಿದರೆ ದೇಶಬಿಟ್ಟು ಹೋಗಬಹುದು. ಅಂತಹ ಸಾಕಷ್ಟು ಪ್ರಕರಣಗಳು ನಡೆದಿವೆ ಎಂದು ಐಟಿ ಪರ ವಕೀಲ ಎಎಸ್‌ಜಿ ಪ್ರಭುಲಿಂಗ್ ನಾವಡ್ಗಿ ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.












Click it and Unblock the Notifications