ಸರ್ಕಾರದ ಆಡಳಿತದಲ್ಲಿ ಕೆ ಸಿ ವೇಣುಗೋಪಾಲ್ ಹಸ್ತಕ್ಷೇಪ : ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: ಎಐಸಿಸಿ ಜನರಲ್ ಸೆಕ್ರೆಟರಿ ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಟೀಕೆಗಳ ಹೆಚ್ಚಾಗಿ ಕೇಳಿ ಬರುತ್ತಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಕೆ.ಸಿ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ವೇಣುಗೋಪಾಲ್ ಅವರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅವರು ನಮ್ಮ ನಾಯಕರು, ನಮಗೆ ಸಲಹೆ ನೀಡುವ ಎಲ್ಲಾ ಅಧಿಕಾರ ಅವರಿಗಿದೆ. ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲಿ ರಾಷ್ಟ್ರೀಯ ನಾಯಕರು ಸಲಹೆ ನೀಡುತ್ತಾರೆ. ಈ ಹಿಂದೆಯೂ ಅನೇಕ ಸಲಹೆ ನೀಡಿದ್ದಾರೆ, ಈಗಲೂ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ ಎಂದು ತಿಳಿಸಿದರು.

ಇನ್ನು ಸಂತ್ರಸ್ತರ ಪುನರ್ವಸತಿ ಬಗ್ಗೆ ಮಾತನಾಡಿ, ಅನೇಕರು ತಮಗೆ ಬೇರೆ ಕಡೆ ಮನೆಗಳಿದ್ದರೂ ಇಲ್ಲಿ ಗುಡಿಸಲು ಹಾಕಿಕೊಂಡಿದ್ದರು. ಉದ್ಯೋಗ ಅರಸಿ ಬಂದು ಇಲ್ಲಿ ವಾಸವಾಗಿದ್ದಾರೆ. ಯಾರಿಗೆ ನಿಜವಾಗಿಯೂ ವಾಸಕ್ಕೆ ಮನೆ ಇಲ್ಲವೊ ಅವರಿಗೆ ಮುಖ್ಯಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ ನೀಡಲಾಗುವುದು. ಇದಕ್ಕೆ ಅವರು ಒಂದೂವರೆಯಿಂದ ಎರಡು ಲಕ್ಷ ಹಣ ಪಾವತಿಸಬೇಕು. ಇದಕ್ಕೆ ಸಾಲ ಸೌಲಭ್ಯ ಕಲ್ಪಿಸುವ ಜವಾಬ್ದಾರಿಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ವಹಿಸಲಾಗಿದೆ. ನಾವು ಮನೆ ನೀಡುವ ಮುನ್ನ, ಅವರು ಯಾರು, ಎಲ್ಲಿಂದ ಬಂದಿದ್ದಾರೆ ಎಂದೆಲ್ಲಾ ಆಧಾರ್ ಹಾಗೂ ಇತರೆ ದಾಖಲೆ ಪರಿಶೀಲಿಸುತ್ತೇವೆ. ಅಲ್ಲಿಯವರೆಗೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಮಾನವೀಯತೆ ದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.
ಮುಂಬರುವ ಕೇರಳ ವಿಧಾನಸಭಾ ಚುನಾವನಣೆಯಲ್ಲಿ ಸೋಲುವ ಭೀತಿಯಿಂದ ಕೇರಳ ಸಿಎಂ ಅವರು ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ವಿಚಾರದಲ್ಲಿ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ " ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಕೋಗಿಲು ಬಡಾವಣೆಯಲ್ಲಿರುವ ಕ್ವಾರಿ ಜಾಗವನ್ನು ಘನತ್ಯಾಜ್ಯ ವಿಲೇವಾರಿ ಮಾಡಲು ಸರ್ಕಾರ ಒಂಬತ್ತು ವರ್ಷಗಳ ಹಿಂದೆಯೇ ನೀಡಿತ್ತು. ಕೆಲವರು ಈಗ ಬಂದು ಇಲ್ಲಿನ ಜಾಗ ಒತ್ತುವರಿ ಮಾಡಿ ಗುಡಿಸಲು, ಶೆಡ್ ಹಾಕಿದ್ದಾರೆ. ಇದು ಸರ್ಕಾರಿ ಜಾಗವಾಗಿರುವ ಕಾರಣ ಮತದಾರರ ಚೀಟಿ ನೀಡಿಲ್ಲ. ಇಲ್ಲಿನ ಅಕ್ಕಪಕ್ಕ ಪ್ರದೇಶದವರಿಗೆ ಮತದಾರರ ಚೀಟಿ ನೀಡಲಾಗಿದೆ ಎಂದರು.
ಇಲ್ಲಿ ಒತ್ತುವರಿ ತೆರವುಗೊಳಿಸುವ ಮುನ್ನ ಅಧಿಕಾರಿಗಳು ಇವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಶಾಸಕರು ಈ ವಿಚಾರವಾಗಿ ಚರ್ಚೆ ಮಾಡಿದ್ದಾರೆ. ಆದರೆ ಕೆಲವರು ನಮಗೆ ಇಲ್ಲೇ ಜಾಗ ನೀಡಿ ಎಂದು ಮನವಿ ಮಾಡಿದ್ದರು. ಆದರೆ ಇದು ತ್ಯಾಜ್ಯ ವಿಲೇವಾರಿ ಜಾಗ ಆಗಿರುವ ಕಾರಣ ವಾಸಕ್ಕೆ ಯೋಗ್ಯ ಪ್ರದೇಶವಲ್ಲ. ಅವರ ಆರೋಗ್ಯ ದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಿದರು.
ಕೆಲವರು ಈ ವಿಚಾರದಲ್ಲಿ ರಾಜಕೀಯ ಬೆರೆಸುತ್ತಿದ್ದಾರೆ. ಕಮ್ಯುನಿಸ್ಟ್ ಪಕ್ಷದವರು ಚುನಾವಣೆ ಸೋಲಿನ ಭಯದಿಂದ ಅಲ್ಪಸಂಖ್ಯಾತರ ಸಿಂಪತಿ ಪಡೆಯಲು ಈ ರೀತಿ ಮಾಡುತ್ತಿದ್ದಾರೆ. ಕೇರಳ ಸಿಎಂ ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆಯಬೇಕು. ಇದು ನಮ್ಮ ರಾಜ್ಯದ ಸ್ಥಳೀಯ ವಿಚಾರ. ಇಲ್ಲಿ ವಾಸ ಮಾಡಿದರೆ ಆರೋಗ್ಯ ಸಮಸ್ಯೆ ಉದ್ಭವಿಸುತ್ತದೆ. ನಾನು ಇಲ್ಲಿಗೆ ಬಂದಾಗ ಅಲ್ಪಸಂಖ್ಯಾತ ಸಮುದಾಯದವರು ಜೈಕಾರ ಹಾಕುತ್ತಿದ್ದಾರೆ. ನಾವು ತಪ್ಪು ಮಾಡಿದ್ದರೆ ಅವರು ಧಿಕ್ಕಾರ ಹಾಕುತ್ತಿದ್ದರು ಎಂದರು.
-
ಆರ್ಟಿಐನಡಿ ಮಾಹಿತಿ ನೀಡದೆ ನಿರ್ಲಕ್ಷ್ಯ: ಬಿಡಿಎ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿದ ಮಾಹಿತಿ ಆಯೋಗ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications