ಮಹಿಳೆಯರಿಗೆ ಮತ್ತೊಂದು ಗುಡ್‌ ನ್ಯೂಸ್‌: ಗೃಹಲಕ್ಷ್ಮಿ‌ ಡಿಜಿಟಲ್ ಮಾರ್ಕೆಟಿಂಗ್ ಗೆ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಹಣವನ್ನ ಜಮಾ ಮಾಡುತ್ತಿದೆ. ಈಗಾಗಲೇ ಸರ್ಕಾರ ಗೃಹ ಲಕ್ಷ್ಮಿ ಸಹಾಕರ ಬ್ಯಾಂಕ್‌ ಮೂಲಕ 3 ಲಕ್ಷದವರೆಗೂ ಸಾಲ ನೀಡುವ ಯೋಜನೆಗೆ ಮುಂದಾಗಿದ್ದು, ಇದೀಗ ಮಹಿಳೆಯರಿಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರಿನ ರಾಜಾಜಿನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ಮಣಿ ಉತ್ಸವ 2026 ದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಗೆ ಚಾಲನೆ ನೀಡಿದರು.

DK Shivakumar launches Grihalakshmi Digital Marketing

ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಗೆ ಚಾಲನೆ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾತನಾಡಿ, ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಡಿಜಿಟಲ್ ಮಾರ್ಕೆಟಿಂಗ್ ಗ್ರಾಮಾಂತರ ಮಹಿಳೆಯರಿಗೆ ಅನುಕೂಲ ಆಗಲಿದೆ, ಮುಂದಿನ ದಿನಗಳಲ್ಲಿ ಆ್ಯಪ್ ಬಗ್ಗೆ ತಿಳಿಸಲು ಕಾರ್ಯಗಾರ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೆ ತರುತ್ತದೆ. ಕಾಂಗ್ರೆಸ್ ಪಕ್ಷದ ಸರ್ಕಾರಗಳು ಮಹಿಳೆಯರ ಪರ ಸದಾ ಚಿಂತಿಸುತ್ತದೆ‌. ಅಂಗನವಾಡಿ ಕೇಂದ್ರಗಳನ್ನು ಆರಂಭಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಏಳಿಗೆಗೆ ಶ್ರಮಿಸಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳಿದರು. ‌ನಿಗಮದ ಅಧ್ಯಕ್ಷರಾದ ಪದ್ಮಾವತಿ ಅವರು ಐದು ಬಾರಿ ಕಾರ್ಪೋರೆಟರ್ ಆಗಿ ಬೆಂಗಳೂರಿನಲ್ಲಿ ಮನೆ ಮನೆಗೆ ಪರಿಚಿತರು. ಮಹಿಳೆ ರಾಜಕೀಯಕ್ಕೆ ಬರುವುದು ವಿರಳ, ಪದ್ಮಾವತಿ ಅವರು ರಾಜಾಜಿನಗರದಲ್ಲಿ ಐದು ಬಾರಿ ಕಾರ್ಪೋರೆಟರ್ ಆಗಿದ್ದು ಸಾಧನೆಯೇ. ಚಾಕ ಚಕ್ಯತೆ, ಚಾಣಾಕ್ಷತನದಿಂದ ಪದ್ಮಾವತಿ ಅವರು ಕೆಲಸ ಮಾಡುತ್ತಿದ್ದಾರೆ ಎಂದರು.

ಮಹಿಳಾ ಸಬಲೀಕರಣಕ್ಕಾಗಿ ಕರ್ಮಣಿ ಉತ್ಸವ, ಗೃಹಲಕ್ಷ್ಮಿ ಡಿಜಿಟಲ್ ಅನಾವರಣ ಮಾಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ನಮ್ಮ ಸರ್ಕಾರ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ ಎಂದರು. ಇನ್ನೂ ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ, ಚಿತ್ರನಟಿ ರಾಗಿಣಿ ದ್ವಿವೇದಿ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+