Get Updates
Get notified of breaking news, exclusive insights, and must-see stories!

ನರೇಗಾ ಉಳಿಸಲು ರಾಜಭವನ ಚಲೋ; ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸಿ: ಡಿ ಕೆ ಶಿವಕುಮಾರ್‌

ಬೆಂಗಳೂರು: ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಬೇಕಿತ್ತು. ಆದರೆ ನಾವು ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ನಮ್ಮ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸಬೇಕು. ಈ ಹೋರಾಟ ಪ್ರತಿ ಪಂಚಾಯ್ತಿಯಲ್ಲಿರುವ ನರೇಗಾ ಉದ್ಯೋಗ ಕಾರ್ಡ್ ಹೊಂದಿರುವವರಿಗೆ ಈ ಹೋರಾಟ ತಲುಪಬೇಕು. ರಾಜ್ಯ, ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಈ ಪ್ರತಿಭಟನೆ ನಡೆಸಲಾಗುವುದು.

dk shivakumar

ನರೇಗಾ ಕಾರ್ಮಿಕರ ಜೊತೆಗೆ ಪಂಚಾಯಿತಿಗಳ ಹಾಲಿ, ಮಾಜಿ ಸದಸ್ಯರುಗಳು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಜಿಲ್ಲಾ ಮಂತ್ರಿಗಳು ಹಾಗೂ ಶಾಸಕರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಬೇಕು. ಎಲ್ಲಿ ಶಾಸಕರಿಲ್ಲವೋ ಅಲ್ಲಿ ವಿಧಾನ ಪರಿಷತ್ ಸದಸ್ಯರನ್ನು ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು. 20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ.

ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ ಎಂದರು. ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ. ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದರು.

ಯಾವ ರೀತಿಯ ನಿರ್ಣಯ ತೆಗೆದುಕೊಳ್ಳಲಾಗುವುದು ಎಂಬ ಪ್ರಶ್ನೆಗೆ ಉತ್ತರಿಡಿ, ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದರು.

ಜೆಡಿಎಸ್ ಮನರೇಗಾ ಬದಲಾವಣೆ ಬಗ್ಗೆ ವಿರೋಧ ವ್ಯಕ್ತಪಡಿಸದೇ ಇರುವ ಕುರಿತು ಮಾತನಾಡಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ಬಾಯಿ ಬಿಡುತ್ತಿಲ್ಲ. ಹೊಸ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಇದರ ಅನುಷ್ಠಾನ ಅಸಾಧ್ಯ ಎಂದರು. ಈ ಯೋಜನೆಗೆ ಅನುದಾನ ಒದಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+