ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಇಡಿ ವಿಚಾರಣೆ ಮುಗಿಸಿ ಟ್ವೀಟ್ ಮಾಡಿದ ಡಿಕೆಶಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 07; ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ. ಕೆ. ಸುರೇಶ್ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ಎದುರಿಸಿದರು. ಇಡಿ ವಿಚಾರಣೆ ಮುಗಿಸಿದ ಬಳಿಕ ಡಿಕೆಶಿ ಟ್ವೀಟ್ ಮಾಡಿದರು.

ಶುಕ್ರವಾರ ಯಂಗ್ ಇಂಡಿಯಾಗೆ ದೇಣಿಗೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಡಿ. ಕೆ. ಶಿವಕುಮಾರ್, ಡಿ. ಕೆ. ಸುರೇಶ್ ಸುಮಾರು 4 ಗಂಟೆಗಳ ಕಾಲ ಇಡಿ ವಿಚಾರಣೆ ಎದುರಿಸಿದರು. ಗುರುವಾರವೇ ಇಬ್ಬರಿಗೂ ವಿಚಾರಣೆಗೆ ಬರುವಂತೆ ಇಡಿ ಸಮನ್ಸ್ ನೀಡಿತ್ತು.

ಇಡಿ ವಿಚಾರಣೆಗೆ ಇಂದು ಹಾಜರಾಗಲು ಡಿ.ಕೆ. ಶಿವಕುಮಾರ್ ನಿರ್ಧಾರಇಡಿ ವಿಚಾರಣೆಗೆ ಇಂದು ಹಾಜರಾಗಲು ಡಿ.ಕೆ. ಶಿವಕುಮಾರ್ ನಿರ್ಧಾರ

DK Shivakumar Leaves ED Office After 4 Hours Of Questioning

ಇಡಿ ಅಧಿಕಾರಿಗಳು ಪ್ರತ್ಯೇಕವಾಗಿ ಡಿ. ಕೆ. ಶಿವಕುಮಾರ್ ಮತ್ತು ಡಿ. ಕೆ. ಸುರೇಶ್ ವಿಚಾರಣೆ ನಡೆಸಿದರು. ಅಗತ್ಯವಿದ್ದಾಗ ಮತ್ತೆ ವಿಚಾರಣೆಗೆ ಆಗಮಿಸಬೇಕು ಎಂದು ಸೂಚನೆ ನೀಡಲಾಗಿದೆ.

ವಿಚಾರಣೆ ಹೋಗಲು ಸಾಧ್ಯವಿಲ್ಲ, ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್ವಿಚಾರಣೆ ಹೋಗಲು ಸಾಧ್ಯವಿಲ್ಲ, ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ನವದೆಹಲಿಯಲ್ಲಿ ಇಡಿ ವಿಚಾರಣೆ ಎದುರಿಸಿದ ಬಳಿಕ ಡಿ. ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. 'ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು. BJP ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023 ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ. ED ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು BJPಗೆ ಅರಿವಾಗಬೇಕಿದೆ' ಎಂದು ಹೇಳಿದ್ದಾರೆ.

 ಮನಿ ಲಾಂಡರಿಂಗ್ ಪ್ರಕರಣ: ನ್ಯಾಷನಲ್ ಹೆರಾಲ್ಡ್ ಕಚೇರಿಯ ಸೀಲ್‌ ಮಾಡಿದ ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್ ಪ್ರಕರಣ: ನ್ಯಾಷನಲ್ ಹೆರಾಲ್ಡ್ ಕಚೇರಿಯ ಸೀಲ್‌ ಮಾಡಿದ ಜಾರಿ ನಿರ್ದೇಶನಾಲಯ

ಇಡಿ ವಿಚಾರಣೆ ಮುಗಿಸಿದ ಬಳಿಕ ಇಡಿ ಕಚೇರಿ ಬಳಿ ಮಾತನಾಡಿದ ಡಿ. ಕೆ. ಶಿವಕುಮಾರ್, "ಇವತ್ತಿನ ವಿಚಾರಣೆ ಮುಗಿದಿದೆ. ಕೆಲವು ಮಾಹಿತಿಗಳನ್ನು ಕೇಳಿದ್ದಾರೆ. ಕೆಲವು ಪೇಮೆಂಟ್‌ಗಳ ಬಗ್ಗೆ ಮಾಹಿತಿ ಕೇಳಿದ್ದಾರೆ. ನಾನು ತಿಳಿಸುತ್ತೇನೆ ಎಂದು ಹೇಳಿದ್ದೇನೆ. ನಮ್ಮ ಸಂಸ್ಥೆಗಳ, ಕುಟುಂಬದ ಕೆಲವು ದಾಖಲೆಗಳನ್ನು ಕೇಳಿದ್ದಾರೆ" ಎಂದರು.

English summary
KPCC president D. K. Shivakumar was questioned by the Enforcement Directorate (ED) for around 4 hours. D. K. Suresh also questioned on October 7th
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X