ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬಿಟ್ಟುಕೊಡ್ತಾರಾ ಡಿ ಕೆ ಶಿವಕುಮಾರ್
ಬೆಂಗಳೂರು, ಏಪ್ರಿಲ್ 04: ಹನಿಟ್ರ್ಯಾಪ್ ಪ್ರಕರಣ ಸೇರಿದಂತೆ ರಾಜ್ಯದ ರಾಜಕೀಯ ಬೆಳವಣಿಗೆಗಳಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ. ಸದ್ಯ ವಿಧಾನಪರಿಷತ್ ನೇಮಕ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆಯಾಗುತ್ತಿದ್ದು, ಬಹುದಿನಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ರಾಹುಲ್ ಗಾಂಧಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದು, ಸಿದ್ದರಾಮಯ್ಯ ಅವರು ಎರಡು ಹೆಸರುಗಳನ್ನ ಶಿಫಾರಸು ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಗುರುವಾರ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಮಾರ್ಮಿಕವಾಗಿ ಉತ್ತರವನ್ನ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ತಮ್ಮ ನಿಲುವನ್ನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಪಕ್ಷ ಹೇಗೆ ಹೇಳುತ್ತದೆಯೋ ಆ ರೀತಿ ಮುನ್ನಡೆಯುವುದು. ಐದು ವರ್ಷ ಸೇವೆ ಸಲ್ಲಿಸಿದ್ದೇನೆ. ಪಕ್ಷಕ್ಕೆ ಒಳ್ಳೆಯದಾಗುವುದು ಮುಖ್ಯ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಮಾರ್ಮಿಕವಾಗಿ ನುಡಿದರು.ಕಳೆದ ಹಲವಾರು ದಿನಗಳಿಂದ ಸೋನಿಯಾ ಗಾಂಧಿ ಅವರನ್ನು ಶಿವಕುಮಾರ್ ಅವರು ಭೇಟಿಯಾಗಿಲ್ಲ. ಭೇಟಿಯಾದರೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ನಿಶ್ಚಿತ ಎನ್ನುವ ಮಾತುಗಳ ಬಗ್ಗೆ ಕೇಳಿದಾಗ, "ಭೇಟಿಯಾಗಿಲ್ಲ ಎಂದು ಹೇಳಿದವರು ಯಾರು? ಸಾಕ್ಷಿಗೆ ಫೋಟೊಗಳನ್ನು ತೋರಿಸಲೇ ಎಂದಾಗ ಅಧಿಕೃತವಾಗಿ ಫೋಟೊಗಳು ದೊರೆತಿಲ್ಲ ಎಂದು ಮರುಪ್ರಶ್ನಿಸಿದಾಗ, "ನಿಮಗೆ ಏಕೆ ತೋರಿಸಬೇಕು. ನನಗೆ ಬೇಕಾಗಿದ್ದು ಬಿಡುಗಡೆ ಮಾಡಲಾಗುವುದು, ಬೇಡದ್ದು ಇಲ್ಲ ಎಂದು ಹೇಳಿದರು.
ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರನ್ನು ರಾಜ್ಯಖಾತೆ ಸಚಿವರಾದ ಸೋಮಣ್ಣ ಅವರ ಜೊತೆ ಭೇಟಿ ಮಾಡಲಾಗಿತ್ತು. ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಮತ್ತು ನಮಗೆ ಎಷ್ಟು ನೀರು ಸಿಗಬೇಕು ಹಾಗೂ ಅಣೆಕಟ್ಟು ಎಷ್ಟು ಎತ್ತರ ಮಾಡಬೇಕು ಎಂದು ಹಿಂದೆಯೇ ತೀರ್ಮಾನವಾಗಿದೆ. 524 ಅಡಿ ಎತ್ತರಕ್ಕೆ ಎಷ್ಟು ಭೂಮಿ ಬೇಕಾಬಹುದು ಎಂದು ಅಂದಾಜಿಸಿ ಭೂಸ್ವಾಧೀನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ಕೆಲಸವನ್ನು ಬೇಗ ಮುಗಿಸುವ ಬದ್ಧತೆ ನಮ್ಮ ಸರ್ಕಾರಕ್ಕಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಬಗ್ಗೆಯೂ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಭದ್ರಾ ಮೇಲ್ದಂಡೆ ವಿಚಾರವಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಕೇಂದ್ರದ ಕ್ಯಾಬಿನೆಟ್ ಮುಂದೆ ಈ ವಿಚಾರ ತೆಗೆದುಕೊಡು ಹೋಗಲಾಗಿದೆ ಎಂದು ಹೇಳಿದ್ದಾರೆ. ಮೇಕೆದಾಟು ವಿಚಾರದಲ್ಲಿ 15 ದಿನಗಳಲ್ಲಿ ಸುಪ್ರೀಂ ಕೋರ್ಟ್ ಕರ್ನಾಟಕದ ವಾದ ಆಲಿಸುವುದಾಗಿ ಹೇಳಿತ್ತು. ಆದರೆ ದಿನಾಂಕ ನಿಗದಿ ಮಾಡಿಲ್ಲ. ತಮಿಳುನಾಡಿನವರು ರಾಜಕೀಯವಾಗಿ ಸಹಕಾರ ನೀಡುವುದಿಲ್ಲ ಎನ್ನುವುದು ನಮಗೆ ಅರಿವಿದೆ. ಅವರು ಸಣ್ಣಪುಟ್ಟ ಅಣೆಕಟ್ಟುಗಳನ್ನು ಅವರ ವಲಯದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ನಾವು ತೊಂದರೆ ಕೊಡಲು ಹೋಗುವುದಿಲ್ಲ. ಈ ವಿಚಾರವನ್ನೂ ಸಚಿವರ ಗಮನಕ್ಕೆ ತರಲಾಗಿದೆ ಎಂದರು.
ಕಳಸಾ ಬಂಡೂರಿ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಗದಿರುವ ಬಗ್ಗೆ ಗಮನಕ್ಕೆ ತರಲಾಗಿದೆ. ಈಗಾಗಲೇ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಈ ಹಿಂದೆ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಅರಣ್ಯ ಸಚಿವರನ್ನೂ ಸಹ ಭೇಟಿ ಮಾಡಲಾಗಿತ್ತು. ಎತ್ತಿನಹೊಳೆ ಕಾಮಗಾರಿ ಕುಡಿಯುವ ನೀರಿನ ಯೋಜನೆಯಾದ ಕಾರಣ ಒಂದಷ್ಟು ಅನುದಾನ ನೀಡಬೇಕು ಎಂದು ಮನವಿ ಮಾಡಲಾಗಿದೆ. ಜೊತೆಗೆ ಅರಣ್ಯ ಭೂಮಿ ಬಳಕೆ, ಬದಲಿ ಭೂಮಿ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರ ಡಿಪಿಆರ್ ಅನ್ನು ನೋಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಕಾವೇರಿ, ಕೃಷ್ಣಾ,ಗೋದಾವರಿ ನದಿ ಜೋಡಣೆ ಸಂಬಂಧ ನಮ್ಮ ರಾಜ್ಯದ ವಾದವನ್ನು ನಾನು ಹಾಗೂ ಮುಖ್ಯಮಂತ್ರಿಯವರು ಸಲ್ಲಿಸಿದ್ದೇವೆ. ಇದರ ಬಗ್ಗೆ ಧನಾತ್ಮಕವಾಗಿ ಕೇಂದ್ರ ಸಚಿವರು ಪ್ರತಿಕ್ರಿಯಿಸಿದ್ದಾರೆ. ನಮ್ಮ ಭೇಟಿ ಫಲದಾಯಕವಾಗಿದೆ ಎನ್ನುವುದು ಸಂತಸದ ವಿಚಾರ ಎಂದರು. ಕೃಷ್ಣಾ ನ್ಯಾಯಾಧೀಕರಣ ವಿಚಾರ ಸುಪ್ರೀಂ ಕೋರ್ಟಿನಲ್ಲಿ ತಡೆಯಾಜ್ಞೆ ಇರುವ ಕುರಿತು ಮಾತನಾಡಿ, ಶೆಡ್ಯೂಲ್ 524ಕ್ಕೆ ಸೇರಿದ ವಿಚಾರವಾದ ಕಾರಣ ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರು ಆಂತರಿಕ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಇದರ ಬಗ್ಗೆ ಈಗಾಗಲೇ ಚರ್ಚೆ ಮಾಡಲಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದರು.
ಕಾಲುವೆ ನೀರು ಬಿಡುವಂತೆ ಕೋರ್ಟ್ ಆದೇಶದ ಕುರಿತು ಮಾತನಾಡಿ, ಕಾಲುವೆಗಳಿಗೆ ಕೃಷ್ಣ ನದಿ ನೀರನ್ನು ಏಕಾಏಕಿ ಬಿಡಲು ಆಗುವುದಿಲ್ಲ. ಅಲ್ಲದೇ ಈ ವಿಚಾರದಲ್ಲಿ ನ್ಯಾಯಾಲಯ ಕೂಡ ಆದೇಶ ನೀಡಲು ಬರುವುದಿಲ್ಲ. ಏಕ ಸದಸ್ಯ ಪೀಠ ನೀರು ಬಿಡುವಂತೆ ಹೇಳಿತ್ತು. ದ್ವಿ ಸದಸ್ಯ ಪೀಠ ಆದೇಶಕ್ಕೆ ತಡೆ ನೀಡಿದೆ. ಕಾಲುವೆಗಳಿಗೆ ನೀರು ಬಿಡುವ ಬಗ್ಗೆ ನಾನೇ ತಾಂತ್ರಿಕ ವರದಿ ತರಿಸಿ ಕೊಳ್ಳುವವನಿದ್ದೆ. ಯಾದಗಿರಿ ಸೇರಿದಂತೆ ಆ ಭಾಗದ ಶಾಸಕರು ರೈತರ ಎರಡನೇ ಬೆಳೆಗೆ ನೀರು ಬಿಡುವಂತೆ ಮನವಿ ಮಾಡಿದ್ದರು. ಈ ಮಧ್ಯೆ ಯಾರೋ ನ್ಯಾಯಾಲಯಕ್ಕೆ ಹೋಗಿದ್ದಾರೆ ಎಂದರು.
ವಿಧಾನಪರಿಷತ್ ನಾಮನಿರ್ದೇಶನದ ಕುರಿತು ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರಿಗೆ ನೀಡಬೇಕು ಎಂಬುದು ನನ್ನ ಅಭಿಲಾಷೆ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕು ಎಂಬುದು ನನ್ನ ಪ್ರಾಶಸ್ತ್ಯ. ಇದರ ಬಗ್ಗೆ ಮುಖ್ಯಮಂತ್ರಿಗಳು ನಾನು ಹೈಕಮಾಂಡ್ ಬಳಿ ಮಾತನಾಡಿದ್ದೇವೆ. ಹೈಕಮಾಂಡ್ ಇಬ್ಬರನ್ನು ಸಂಪರ್ಕಿಸುತ್ತದೆ ಎಂದರು.
ಮೇಕೆದಾಟು ಹಾಗೂ ಭದ್ರಾ ಮೇಲ್ದಂಡೆ ಬಗ್ಗೆ ಪ್ರತಿ ಬಾರಿ ದೆಹಲಿಗೆ ಬಂದಾಗಲೂ ಚರ್ಚೆ ಮಾಡುವ ಬಗ್ಗೆ ಕೇಳಿದಾಗ, ಇದು ಮೋದಿ ಅವರ ನಾಯಕತ್ವದ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಬಿಟ್ಟ ವಿಚಾರ. ನಿರ್ಮಲಾ ಸೀತಾರಾಮನ್ ಅವರು ಭದ್ರಾ ಯೋಜನೆಗೆ ರೂ.5,300 ಕೋಟಿ ಅನುದಾನ ನೀಡುವುದಾಗಿ ಹೇಳಿದ್ದರು. ನಾವು ಗುತ್ತಿಗೆದಾರರಿಗೆ ಹಣ ನೀಡಬೇಕಿದೆ ಎಂದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು












Click it and Unblock the Notifications